ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ

ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ
ಗಾಯತ್ರಿ(19)

ಕೊಲೆಯಾದ ಯುವತಿ ಗಾಯತ್ರಿ (19) ಎಂದು ತಿಳಿದು ಬಂದಿದೆ. ತಂದೆ ಜಯರಾಮ್​ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

TV9kannada Web Team

| Edited By: shruti hegde

Jun 19, 2021 | 11:02 AM

ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಕೊಲೆ ಮಾಡಿವ ಘಟನೆ ನಡೆದಿದೆ. ಮಗಳನ್ನು ಹತ್ಯೆ ಮಾಡಿರುವುದಾಗಿ ತಂದೆ ತಪ್ಪೊಪ್ಪಿಕೊಂಡಿದ್ದಾರೆ. ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. ಕೊಲೆಯಾದ ಯುವತಿ ಗಾಯತ್ರಿ (19) ಎಂದು ತಿಳಿದು ಬಂದಿದೆ. ತಂದೆ ಜಯರಾಮ್​ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಪಿಯುಸಿ ಓದುತ್ತಿದ್ದ ಗಾಯತ್ರಿ ಶಿಕ್ಷಣ ಮೊಟಕುಗೊಳಿಸಿ ಮನೆಯಲ್ಲಿಯೇ ಇದ್ದಳು. ತನ್ನ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಒತ್ತಾಯಿಸಲಾಗಿದೆ. ಆದರೂ ಗಾಯತ್ರಿ ಯುವಕನೊಡನೆ ಒಡನಾಟ ಮುಂದುವರೆಸುತ್ತಿದ್ದಳು.

ನಿನ್ನೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅಪ್ಪನಿಗಾಗಿ ಊಟ ತೆಗೆದುಕೊಂಡ ಗಾಯತ್ರಿ ಹೋಗಿದ್ದಾಳೆ. ಈ ಸಂದರ್ಭದಲ್ಲಿ ಅವಳ ಪ್ರೀತಿಯ ವಿಷಯ ಪ್ರಸ್ತಾಪವಾಗಿದೆ. ನಾನು ಯಾವುದೇ ಕಾರಣಕ್ಕೂ ಯುವಕನನ್ನು ಬಿಡುವುದಿಲ್ಲ ಎಂದು ಹಠ ಮಾಡಿದ್ದಾಳೆ. ಕೋಪಗೊಂಡ ಜಯರಾಮ್​(ತಂದೆ) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಾಡಿದ ತಪ್ಪಿಗೆ ಪ್ರಾಯಶ್ಚಿತವವಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಲಾಕ್​ಡೌನ್ ಅಂತ ಮನೆಗೆ ಬಂದಿದ್ದ ತಮ್ಮನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಅಣ್ಣ ಎಸ್ಕೇಪ್.. ಆಗಿದ್ದೇನು?

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್

Follow us on

Related Stories

Most Read Stories

Click on your DTH Provider to Add TV9 Kannada