AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೀಸ್ ಹಣ ನೀಡದ ಕಂಪನಿಗಳಿಂದ ಭೂಮಿ ವಾಪಸ್: ಈಶ್ವರ್ ಖಂಡ್ರೆ

ಕಾಫಿ ಟಿ ರಬ್ಬರ್ ಬೆಳೆಯಲು ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆ ಹಲವು ಕಂಪನಿಗಳಿಗೆ ಲೀಸ್​ಗೆ ನೀಡಿತ್ತು. ಆದರೆ, ಕೆಲವೊಂದು ಕಂಪನಿಗಳು ಲೀಸ್ ಹಣ ಪಾವತಿಸಿಲ್ಲ. ಹೀಗಾಗಿ ಲೀಸ್ ಹಣ ನೀಡದ ಕಂಪನಿಗಳಿಂದ ಸರ್ಕಾರಿ ಭೂಮಿಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

ಲೀಸ್ ಹಣ ನೀಡದ ಕಂಪನಿಗಳಿಂದ ಭೂಮಿ ವಾಪಸ್: ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
Sunil MH
| Edited By: |

Updated on: Jan 09, 2024 | 5:33 PM

Share

ಬೆಂಗಳೂರು, ಜ.9: ಕಾಫಿ ಟಿ ರಬ್ಬರ್ ಬೆಳೆಯಲು ಅರಣ್ಯ ಇಲಾಖೆಯ ಭೂಮಿಯನ್ನು ಲೀಸ್​ಗೆ ಪಡೆದು ಹಣ ಪಾವತಿಸದ ಕಂಪನಿಗಳಿಂದ ಭೂಮಿಯನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ (Eshwar Khandre), ಸ್ವಾತಂತ್ರ್ಯ ಪೂರ್ವದಲ್ಲಿ ಕಾಫಿ, ಚಹಾ, ರಬ್ಬರ್ ಬೆಳೆಯಲು ಸಾವಿರಾರು ಎಕರೆ ಭೂಮಿಯನ್ನು ಲೀಸ್​ಗೆ ನೀಡಲಾಗಿತ್ತು ಎಂದರು.

ಲೀಸ್ ಹಣ ಬರದೇ ಇದ್ದ ಕಂಪನಿಗಳಿಂದ ಭೂಮಿ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ ಈಶ್ವರ್ ಖಂಡ್ರೆ, ಎಕರೆಗೆ ಕೇವಲ ಎರಡು ರೂಪಾಯಿಯಿಂದ ಏಳು ರೂಪಾಯಿ ಅಂತ ನಿಗದಿ ಮಾಡಿಕೊಡಲಾಗಿತ್ತು. 1997 ರಲ್ಲಿ ಎಕ್ಟೇರ್​ಗೆ ಐದು ಸಾವಿರ ಅಂತ ನಿಗದಿ ಮಾಡಲಾಗಿತ್ತು. ಆ ಪ್ರಕಾರ ಲೀಸ್ ಹಣ ಬಾಕಿ ಉಳಿಸಿಕೊಂಡ ಕಂಪನಿಗಳಿಂದ ಭೂಮಿ ವಾಪಸ್ ಪಡೆಯಲಾಗುತ್ತದೆ ಎಂದರು.

ಮರ್ಕೆರಾ ಕಂಪನಿ 1575 ಎಕರೆ ಭೂಮಿಯನ್ನು ಲೀಸ್​ಗೆ ಪಡೆದುಕೊಂಡಿದ್ದು, ಥಾಮ್ಸನ್ ರಬ್ಬರ್ ಲಿ. 625 ಎಕರೆ, ನಿಲಂಬೂರ್ ರಬ್ಬರ್ 713 ಎಕರೆ, ಪೋರ್ಟ ಲ್ಯಾಂಡ್ ರಬ್ಬರ್ ಲಿ. 1288 ಎಕರೆ, ಗ್ಲೆನ್ ಲಾರೆನ್ಸ್ ಪ್ರೈ.ಲಿ. ಮತ್ತು ಟಾಟಾ ಕಂಪನಿ 943 ಎಕರೆ, ಚಾಮರಾಜನಗರದ ಹೊನ್ನಮಟ್ಡಿ ನೀಲಗಿರಿ ಪ್ಲಾಂಟೇಷನ್ ಲಿ. 184 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದಿದೆ. ಒಟ್ಟಾರೆ ಎರಡು ಸಾವಿರ ಕೋಟಿಗೂ ಅಧಿಕ ಲೀಸ್ ಹಣವನ್ನು ಕಂಪನಿಗಳು ಪಾವತಿ ಮಾಡಬೇಕಿದೆ. ಈ ಪೈಕಿ ಕೆಲವರು ಬಾಕಿ ಪಾವತಿಸುವ ಬದಲಿಗೆ ಕೋರ್ಟ್​ ಮೊರೆ ಹೋಗಿದ್ದರು ಎಂದರು.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ವಶಕ್ಕೆ; ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ-ಈಶ್ವರ ಖಂಡ್ರೆ

ಮರಗಳನ್ನು ಕಡಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹರನ್ನು ಬಂಧಿಸಲಾಗಿತ್ತು. ಆದರೆ, ಅವರ ಹೆಸರು ಎಫ್​ಐಆರ್​ನಲ್ಲಿ ಇಲ್ಲದಿರುವುದು ಮೈಸೂರು ಜಿಲ್ಲೆಯಲ್ಲಿ ರಾಜಕೀಯ ಕೆಸರೆರಚಾಟ ನಡೆಯುತ್ತಿದೆ. ಪ್ರಕರಣದ ಬಗ್ಗೆ ಮಾತನಾಡಿದ ಈಶ್ವರ್ ಖಂಡ್ರೆ, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ನನ್ನ ಪ್ರಭಾವ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

FIR ಅನ್ನೋದು ಮೊದಲ ವರದಿ. ಆಮೇಲೆ ಆರೋಪಿ ಬದಲಾವಣೆ ಆಗಬಾರದು ಅಂತ ಇಲ್ಲ. ತನಿಖಾಧಿಕಾರಿ ಅದನ್ನ ತೀರ್ಮಾನ ಮಾಡುತ್ತಾರೆ. ಸುಪ್ರೀಂಕೋರ್ಟ್ ನಿಯಮದ ಪ್ರಕಾರ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಪ್ರಭಾವಿಗಳು ಇದ್ದರೆ, ಸಾಕ್ಷಿ ನಾಶ ಪಡೆಸುವ ಮಾಹಿತಿ ಇದ್ದರೆ ಅವರನ್ನ ಬಂಧನ ಮಾಡುವ ಅಧಿಕಾರ ಅಧಿಕಾರಿಗಳಿಗೆ ಇರುತ್ತದೆ. ಸುಮ್ಮನೆ ಆರೋಪಿಗಳನ್ನ ರಕ್ಷಣೆ ಮಾಡಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡುವುದು ಸರಿಯಲ್ಲ. ಮಂಡ್ಯ ಕೇಸ್​ನಲ್ಲಿ ವರದಿ ಕೊಡಲು ಹೇಳಿದ್ದೆ. ವರದಿ ಕೊಟ್ಟಿದ್ದಾರೆ. ಅದರಲ್ಲಿ MLC ಪಾತ್ರ ಇಲ್ಲ ಅಂತ ವರದಿ ಬಂದಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್