AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಅಂಗನವಾಡಿಗಳಲ್ಲಿ ಇನ್ನು ಮುಂದೆ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆಗೆ ಸರ್ಕಾರ ನಿರ್ಧಾರ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನ ಕೈಗೊಳಲಾಗಿದೆ. ಈ ಕುರಿತಾಗಿ ಸಿದ್ಧರಾಮಯ್ಯ ಟ್ವೀಟ್​ ಮೂಲಕ ತಿಳಿಸಿದ್ದಾರೆ. ರಾಜ್ಯದ 69,899 ಅಂಗನವಾಡಿಗಳಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೂರೈಸುವ ಪೌಷ್ಠಿಕ ಆಹಾರ ತಯಾರಿಕೆಗೆ ಇನ್ನು ಮುಂದೆ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದ ಅಂಗನವಾಡಿಗಳಲ್ಲಿ ಇನ್ನು ಮುಂದೆ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆಗೆ ಸರ್ಕಾರ ನಿರ್ಧಾರ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Aug 11, 2023 | 9:15 PM

Share

ಬೆಂಗಳೂರು, ಆಗಸ್ಟ್​ 11: ರಾಜ್ಯದ 69,899 ಅಂಗನವಾಡಿಗಳಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೂರೈಸುವ ಪೌಷ್ಠಿಕ ಆಹಾರ ತಯಾರಿಕೆಗೆ ಇನ್ನು ಮುಂದೆ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ (sunflower oil) ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಾಗಿ ನಿನ್ನೆ ಸಿಎಂ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೊತೆಗೆ ಸಿಎಂ ಸಿದ್ಧರಾಮಯ್ಯ ಈ ಕುರಿತಾಗಿ ಟ್ವೀಟ್​ ಕೂಡ ಮಾಡಿದ್ದಾರೆ.

ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಅವಶ್ಯಕವಾದ ಲಿನೋಲಿಕ್ ಮತ್ತು ಅಲ್ಫಾ ಲಿನೋಲಿಕ್ ಆ್ಯಸಿಡ್‌ಗಳು ಸೂರ್ಯಕಾಂತಿ ಎಣ್ಣೆಯಲ್ಲಿ ಇರುವ ಕಾರಣಕ್ಕಾಗಿ ರಾಜ್ಯದ 69,899 ಅಂಗನವಾಡಿಗಳಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೂರೈಸುವ ಪೌಷ್ಠಿಕ ಆಹಾರ ತಯಾರಿಕೆಗೆ ಇನ್ನುಮುಂದೆ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ಮಾಡಲು ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆಗಸ್ಟ್ 15 ರಂದು ಮೆಟ್ರೋ ಪ್ರಯಾಣ ದರ 30 ರೂ. ನಿಗದಿ ಮಾಡಿದ ಬಿಎಂಆರ್​ಸಿಎಲ್

66. 04 ಕೋಟಿ ರೂ. ವೆಚ್ಚ

ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ವಿತರಿಸಲು ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆಗೆ 66. 04 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ.

ಸೂರ್ಯಕಾಂತಿ ಎಣ್ಣೆ ಏಕೆ?

ಲಿನೋಲಿಕ್ ಮತ್ತು ಅಲ್ಫಾ ಲಿನೋಲಿಕ್ ಆ್ಯಸಿಡ್‌ಗಳು ಸೂರ್ಯಕಾಂತಿ ಎಣ್ಣೆಯಲ್ಲಿ ಇರುವುದರಿಂದ ಇದು ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಠಿಕಾಂಶ ಒದಗಿಸುತ್ತದೆ. ಅಲ್ಲದೇ ಪಾಮೊಲಿನ್‌ ಎಣ್ಣೆ ಬಗ್ಗೆ ಸಾಕಷ್ಟು ದೂರುಗಳು ನೀಡಲಾಗಿದೆ. ಹಾಗಾಗಿ ರಾಜ್ಯದ 69,899 ಅಂಗನವಾಡಿಗಳಲ್ಲಿ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ರಾಜ್ಯ ಸರ್ಕಾರ ತೀಮಾರ್ನಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ, 10 ಸಿಬ್ಬಂದಿಗೆ ತೀವ್ರ ಗಾಯ

“ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ”

ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿ ದೃಷ್ಟಿಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು “ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ” ಎಂದು ಮರುನಾಮಕರಣ ಮಾಡಲು ಹಾಗೂ ಈ ಮಂಡಳಿಯ ವ್ಯಾಪ್ತಿಗೆ ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ 23 ತಾಲೂಕುಗಳನ್ನು ಒಳಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಜಿಲ್ಲಾಸ್ಪತ್ರೆಗಳಲ್ಲಿ ಎಂ.ಆರ್.ಐ ಹಾಗೂ ಸಿಟಿ ಸ್ಕ್ಯಾನ್ ಉಚಿತ

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಜನರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ರಾಜ್ಯದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಂ.ಆರ್.ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಹೆಚ್ಚುವರಿಯಾಗಿ ಆರಂಭಿಸಲು ರೂ.47 ಕೋಟಿ ವೆಚ್ಚದ ಪ್ರಸ್ತಾವನೆಗೂ ನಿನ್ನೆಯ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:14 pm, Fri, 11 August 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More