1 ಸಾವಿರ ಅನಾಥ ಶವಗಳ ಅಸ್ಥಿಯ ಗೌರವಯುತ ವಿಸರ್ಜನೆ ಮಾಡಲಿದೆ ಕರ್ನಾಟಕ ಸರ್ಕಾರ

ಅಂತ್ಯಕ್ರಿಯೆಗೆ ಹೋಗುವ ಆ್ಯಂಬುಲೆನ್ಸ್‌ ಸೇವೆಯನ್ನು ಸಂಪೂರ್ಣ ಉಚಿತವಾಗಿ ಒದಗಿಸುತ್ತೇವೆ. ಮೃತರ ಸಂಬಂಧಿಕರಿಂದ ಹಣ ವಸೂಲಿ ಮಾಡಬಾರದು ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಗಳಿಗೆ ತಿಳಿಸಿದರು.

1 ಸಾವಿರ ಅನಾಥ ಶವಗಳ ಅಸ್ಥಿಯ ಗೌರವಯುತ ವಿಸರ್ಜನೆ ಮಾಡಲಿದೆ ಕರ್ನಾಟಕ ಸರ್ಕಾರ
ಆರ್. ಅಶೋಕ್
Follow us
guruganesh bhat
|

Updated on:May 21, 2021 | 3:08 PM

ಬೆಂಗಳೂರು: ಸದ್ಯ ಒಂದು ಸಾವಿರ ಅನಾಥ ಶವಗಳ ಅಸ್ಥಿ ಇದ್ದು, ಮೃತಪಟ್ಟವರ ಸಂಬಂಧಿಕರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಹೀಗಾಗಿ ಸರ್ಕಾರದಿಂದಲೇ ಗೌರವಯುತವಾದ ಅಂತ್ಯ ಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಹೀಗಾಗಿ ಸರ್ಕಾರವೇ ಬಡವ ಬಲ್ಲಿದ ಎಂದು ಭೇದ ಭಾವ ಮಾಡದೇ ಅಸ್ಥಿಯನ್ನು ಪಂಚಭೂತಗಳಲ್ಲಿ ಲೀನವಾಗುವಂತೆ ನೀರಿನಲ್ಲಿ ಹಿಂದೂ ಸಂಪ್ರದಾಯಬದ್ಧವಾಗಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಅಂತ್ಯಕ್ರಿಯೆಗೆ ಹೋಗುವ ಆ್ಯಂಬುಲೆನ್ಸ್‌ ಸೇವೆಯನ್ನು ಸಂಪೂರ್ಣ ಉಚಿತವಾಗಿ ಒದಗಿಸುತ್ತೇವೆ. ಮೃತರ ಸಂಬಂಧಿಕರಿಂದ ಹಣ ವಸೂಲಿ ಮಾಡಬಾರದು. ಒಂದು ಚಿತಾಗಾರದಲ್ಲಿ 15ಕ್ಕಿಂತ ಹೆಚ್ಚು ಶವ ಸುಡುವಂತಿಲ್ಲ. ಶವ ಸಾಗಿಸುವ ಆ್ಯಂಬುಲೆನ್ಸ್ ಹೆಚ್ಚು ಹಣ ವಸೂಲಿ ಮಾಡಿದರೆ ಅವರಿಗೆ ನೀಡಲಾಗಿರುವ ಮೂರು ವರ್ಣ ಪರವಾನಗಿಯನ್ನು ರದ್ದುಗೊಳಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಗಳಿಗೆ ತಿಳಿಸಿದರು.

ಶವಾಗಾರಕ್ಕೆ ಹೋಗುವವರು ಕೆಲವರು ಇದೇ ಶವಾಗಾರ ಬೇಕು ಅಂತ ಡಿಮ್ಯಾಂಡ್ ಮಾಡ್ತಿದ್ದಾರೆ. ಒಂದು ಚಿತಾಗಾರದಲ್ಲಿ 15ಕ್ಕಿಂತ ಹೆಚ್ಚು ಶವಗಳನ್ನು ಸುಡುವಂತಿಲ್ಲ. 15ಕ್ಕಿಂತ ಹೆಚ್ಚು ಶವ ಸಂಸ್ಕಾರ ನಡೆದ ಬಳಿಕ ಬೇರೆ ಶವಾಗಾರ, ಚಿತಾಗಾರಕ್ಕೆ ಕಳುಹಿಸಬೇಕು ಎಂದು ಅವರು ತಿಳಿಸಿದರು.

ಸಾವಿನಲ್ಲೂ ರಾಜಕಾರಣ ಒಳ್ಳೇದಲ್ಲ ಸಾವಿನಲ್ಲಿ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಸಾವಿನಲ್ಲಿ ರಾಜಕಾರಣ ಮಾಡಿದವರು ಹಿಂದೆಲ್ಲ ಮೂಲೆಗುಂಪಾಗಿದ್ದಾರೆ. ಸಾವನ್ನು ಮುಚ್ಚಿಡುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಸರ್ಕಾರ ಸಾವಿನ ಅಂಕಿ ಸಂಖ್ಯೆ ಮುಚ್ಚಿಡುವ ಅಗತ್ಯವೇ ಇಲ್ಲ. ಪ್ರತಿಯೊಬ್ಬರಿಗೂ ಸಾವಾದ ಮೇಲೆ ಡೆತ್ ಸರ್ಟಿಫಿಕೇಟ್ ಬೇಕೇಬೇಕಾಗುತ್ತದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಲಿ ಯಾರೇ ಆಗಲಿ ಸಾವಿನಲ್ಲಿ ರಾಜಕಾರಣ ಮಾಡಬೇಡಿ ಎಂದು ಕಂದಾಯ ಸಚಿವ ಆರ್.ಅಶೋಕ್ ಮನವಿ ಮಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿರುವುದು ನಿಜ. ಆದರೆ, ಅವರೇ ಸಿಎಂ ಆಗಿದ್ದಾಗ ಇಂಥ ಅವಕಾಶವಿಲ್ಲ ಎಂದಿದ್ದರು. ವಿಪಕ್ಷ ನಾಯಕರಿಗೆ ಅವಕಾಶ ಇಲ್ಲ ಎಂದು ಪತ್ರ ಬರೆದಿದ್ದರು. ಅದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ನೆನಪು ಮಾಡಿಕೊಳ್ಳಲಿ. ಪತ್ರದ ಮೂಲಕ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ಆದರೆ ಸಭೆ ನಡೆಸೋದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಇದನ್ನೂ ಓದಿ: ಚಿಪ್ಕೊ ಚಳವಳಿಯ ರೂವಾರಿ ಸುಂದರ್​ಲಾಲ್ ಬಹುಗುಣ ಕೊವಿಡ್​ಗೆ ಬಲಿ

ಕೊವಿಡ್​ 19 ನಿಯಮಗಳನ್ನೆಲ್ಲ ಮುರಿದು ಮದ್ಯ ಪಾರ್ಟಿ ನಡೆಸಿದ ದಾವಣಗೆರೆ ಯೂತ್​ ಕಾಂಗ್ರೆಸ್ ಅಧ್ಯಕ್ಷ; ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನೂ ಭಾಗಿ !

(The Government of Karnataka will make a dignified discharge of 1 thousand orphaned bodies)

Published On - 3:03 pm, Fri, 21 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್