ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ ಎಂದ ಸಿದ್ದರಾಮಯ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 11, 2024 | 3:28 PM

ದಸರಾ ಹಿನ್ನೆಲೆ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಗರದ ಮಂಡಕಳ್ಳಿ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬಿಜೆಪಿ ಸುಳ್ಳು ವಿಚಾರಕ್ಕೆ ಯಾವಾಗಲೂ ಹೋರಾಟ ಮಾಡುವುದು. ಕೋರ್ಟ್ ಮತ್ತು ಸರ್ಕಾರಕ್ಕೆ ಕೆಲ ಮೊಕದ್ದಮೆ ವಾಪಸ್ ಪಡೆಯುವ ಅಧಿಕಾರ ಇದೇ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ.

ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ ಎಂದ ಸಿದ್ದರಾಮಯ್ಯ
ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ ಎಂದ ಸಿದ್ದರಾಮಯ್ಯ
Follow us on

ಮೈಸೂರು, ಅಕ್ಟೋಬರ್​ 11: ನಿನ್ನೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಬರೋಬ್ಬರಿ 43 ಕೇಸ್​ಗಳನ್ನ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಕ್ಯಾಬಿನೆಟ್​ ಸಭೆಯ ಈ ನಿರ್ಧಾರ ಸದ್ಯ ರಾಜ್ಯ ರಾಜಕೀಯದಲ್ಲಿ ಗುದ್ದಾಟಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ದಸರಾ ಹಿನ್ನೆಲೆ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಗರದ ಮಂಡಕಳ್ಳಿ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬಿಜೆಪಿ ಸುಳ್ಳು ವಿಚಾರಕ್ಕೆ ಯಾವಾಗಲೂ ಹೋರಾಟ ಮಾಡುವುದು. ಈ ಬಗ್ಗೆ ಪರಿಶೀಲನೆ ಮಾಡಿದ ನಂತರ ಮಾತನಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ಸಚಿವ ಸಂಪುಟ ನಿರ್ಧಾರ

ರಾಜ್ಯ ಸರ್ಕಾರದ ಜಾಹೀರಾತಿಗೆ ಬಿಜೆಪಿ ನಾಯಕರ ಕಿಡಿ ವಿಚಾರವಾಗಿ ಮಾತನಾಡಿದ ಸಿಎಂ, ದಸರಾ ಅಂದರೆ ದುಷ್ಟ ಶಕ್ತಿಗಳ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾ. ವಿಜಯನಗರದ ಅರಸರು ವಿಜಯದ ಸಂಕೇತವಾಗಿ ಆಚರಿಸುತ್ತಿದ್ದರು. ಮೈಸೂರು ಅರಸರು ಅದನ್ನೇ ಮುಂದುವರಿಸಿದರು. ಇವತ್ತು ಅದೇ ಸಂಪ್ರದಾಯ ಮುಂದುವರಿದಿದೆ ಎಂದರು.

ಜಾಹೀರಾತನ್ನು ಇವತ್ತಿಗೆ ನೀವು ಹೇಗೆ ವ್ಯಾಖ್ಯಾನ ಮಾಡ್ತೀರಾ ಹಾಗೆ. ಜಾಹೀರಾತಿನ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ವಿಚಾರವಾಗಿ, ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್​ನಲ್ಲಿ ಸಿಕ್ಕಿಬಿದ್ದಿದ್ದಾರೆ. ಮೊದಲು ಪಾರ್ಲಿಮೆಂಟ್ ಬೋರ್ಡ್​ನಿಂದ ಕಿತ್ತು ಹಾಕಲು ಹೇಳಿ. ಕೋರ್ಟ್ ಇಲ್ಲದಿದ್ದರೆ ಯಡಿಯೂರಪ್ಪ ಜೈಲಿನಲ್ಲಿ ಇರಬೇಕಿತ್ತು ಎಂದು ಕಿಡಿಕಾರಿದ್ದಾರೆ.

ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್!

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬರೋಬ್ಬರಿ 43 ಕೇಸ್​ಗಳನ್ನ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಇದರಲ್ಲಿ ಹುಬ್ಬಳ್ಳಿ ಗಲಭೆ ಪ್ರಕರಣವೂ ಒಂದಾಗಿದೆ. ಇದರಲ್ಲಿ ಕೆಲವು ಪ್ರಮುಖ ರಾಜಕೀಯ ನಾಯಕರ ವಿರುದ್ಧ ದಾಖಲಾಗಿರುವ ಕೇಸ್​ಗಳನ್ನೂ ವಾಪಸ್ ಪಡೆಯಲಾಗಿದೆ. ಪ್ರತಿಭಟನೆ ಹಾಗೂ ಗಲಾಟೆಯಲ್ಲಿ ದಾಖಲಾಗಿದ್ದ ಕೇಸ್​ಗಳನ್ನ ಹಿಂಪಡೆಯಲಾಗಿದೆ. ಸರ್ಕಾರದ ನಡೆಯನ್ನೇ ಖಂಡಿಸಿ ಇದೀಗ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.