ಬೆಂಗಳೂರು ಛಿದ್ರ ಮಾಡಿದರೆ ಕೆಂಪೇಗೌಡರ ಶಾಪ ತಟ್ಟಲಿದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ಸರ್ಕಾರದ ನಿರ್ಧಾರ ಈಗ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವಿನ ಮತ್ತೊಂದು ಸಮರಕ್ಕೆ ವೇದಿಕೆ ಆಗಿದೆ. ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದ್ದು, ಇದು ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವಣ ತೀವ್ರ ವಾಕ್ಸಮರಕ್ಕೆ ಕಾರಣವಾಯಿತು.
ಬೆಂಗಳೂರು, ಜುಲೈ 24: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಅದರ ಭಾಗವಾಗಿ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಮೊನ್ನೆ ನಡೆದಿದ್ದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು. ಮಂಗಳವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ವಿಧೇಯಕದ ವಿಧೇಯಕ ಮಂಡನೆ ಮಾಡಿದರು. ಡಿಕೆ ಶಿವಕುಮಾರ್ ಬಿಲ್ ಮಂಡಿಸಲು ಶುರು ಮಾಡ್ತಿದ್ದಂತೆಯೇ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ವಿರೋಧ ವ್ಯಕ್ತಪಡಿಸಿದರು.
ಬೆಂಗಳೂರು ಛಿದ್ರ ಮಾಡಿದ್ರೆ ಕೆಂಪೇಗೌಡರ ಶಾಪ ತಟ್ಟಲಿದೆ: ಅಶೋಕ್
ವಿಪಕ್ಷ ನಾಯಕ ಆರ್.ಅಶೋಕ್ ಕೂಡ ಗ್ರೇಟರ್ ಬೆಂಗಳೂರು ಅಥಾರಿಟಿಗೆ ತೀವ್ರ ವಿರೋಧ ವ್ಯಕ್ತ ಪಡಿಸಿದರು. ಬೆಂಗಳೂರು ಛಿದ್ರ ಛಿದ್ರ ಮಾಡಿದರೆ ನಿಮಗೆ ಕೆಂಪೇಗೌಡರ ಶಾಪ ತಟ್ಟಲಿದೆ ಎಂದು ಆಕ್ರೋಶ ಹೊರಹಾಕಿದರು.
ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ತರುವ ಬಗ್ಗೆ ಈ ಹಿಂದೆಯೇ ‘ಟಿವಿ9’ ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಏನೇನು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂಬ ವಿಸ್ತೃತ ವರದಿ ನೀಡಲಾಗಿತ್ತು.
ಏನಿದು ಗ್ರೇಟರ್ ಬೆಂಗಳೂರು?
ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಇದೀಗ ಸರ್ಕಾರ ಮುಂದಾಗಿದೆ. ರಾಮನಗರ, ಕನಕಪುರವನ್ನು ಬೆಂಗಳೂರಿಗೆ ಸೇರಿಸಲು ರೂಪುರೇಷೆ ಸಿದ್ಧ ಮಾಡಿಕೊಳ್ಳಲಾಗಿದೆ. ಸದ್ಯ ಬಿಬಿಎಂಪಿ ಇದ್ದು, ಮುಂದೆ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬರಲಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ವ್ಯಾಪ್ತಿಗೆ 400 ವಾರ್ಡ್ಗಳನ್ನ ಸೇರಿಸುವ ಸಾಧ್ಯತೆ ಇದೆ. ಕನಕಪುರ, ರಾಮನಗರ ಗಡಿ ಭಾಗಗಳೂ ಜಿಬಿಎಗೆ ಸೇರ್ಪಡೆಗೆ ಪ್ಲ್ಯಾನ್ ಮಾಡಲಾಗಿದೆ. ಸಂಪನ್ಮೂಲ ಕ್ರೋಢೀಕರಿಸಿ ಬಿಬಿಎಂಪಿ ವಿಭಜನೆಗೆ ಸರ್ಕಾರ ನಿರ್ಧಾರ ಮಾಡಿದೆ. ಇನ್ನು ಸಿಎಂ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ 5 ರಿಂದ 10 ಸಿಟಿ ಕಾರ್ಪೊರೇಷನ್ಗಳು ಬರಲಿವೆ, ಗ್ರೇಟರ್ ಬೆಂಗಳೂರು ಅಥಾರಿಟಿಗೆ ಯೋಜನೆ, ಹಣಕಾಸು ಅಧಿಕಾರ ನಿರ್ವಹಣೆಯ ಅಧಿಕಾರ ಇರಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷರಾಗಿರುತ್ತಾರೆ.
ಇದನ್ನೂ ಓದಿ: ಏನಿದು ಗ್ರೇಟರ್ ಬೆಂಗಳೂರು ಅಥಾರಿಟಿ ವಿಧೇಯಕ? ಇಲ್ಲಿದೆ ಸಂಪೂರ್ಣ ವಿವರ
ರಾಮನಗರ ಜಿಲ್ಲೆಯ 3 ತಾಲೂಕುಗಳನ್ನು ಇದರ ವ್ಯಾಪ್ತಿಗೆ ತರುವ ಬಗ್ಗೆ ರಾಜಕೀಯ ಉದ್ದೇಶವೇ ಹೆಚ್ಚಾಗಿದೆ. ಹೀಗಾಗಿಯೇ ವಿಪಕ್ಷ ಬಿಜೆಪಿ ಕೂಡಾ ಇದನ್ನ ವಿರೋಧಿಸುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ