Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budge 2024; ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಕಾಗಿರಲಿಲ್ಲ: ಸಿದ್ದರಾಮಯ್ಯ

Karnataka Budge 2024; ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಕಾಗಿರಲಿಲ್ಲ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 16, 2024 | 11:39 AM

Karnataka Budge 2024: ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಡಾ ರಾಜ್ ಕುಮಾರ್ ಅಭಿನಯದ ‘ಬಂಗಾರದ ಮನುಷ್ಯ’ ಚಿತ್ರದ ‘ಆಗದು ಎಂದು, ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಹಾಡನ್ನು...’ ಹೇಳಿ ಹಾಡಿನಲ್ಲಿರುವ ಸಾರಾಂಶದಂತೆ ದೇಶದಲ್ಲಿ ಯಾವುದೇ ಸರ್ಕಾರ ಜಾರಿಗೊಳಿಸದ ಬೃಹತ್ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ತಮ್ಮ ಸರ್ಕಾರ ಜಾರಿಗೊಳಿಸಿದೆ ಎಂದು ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸದನದಲ್ಲಿಂದು ತಮ್ಮ ಸರ್ಕಾರದ ಪರವಾಗಿ ಕರ್ನಾಟಕ ಬಜೆಟ್ 2024 (Karnataka Budgeತ 2024) ಮಂಡಿಸುತ್ತಿದ್ದಾರೆ. ಬಜೆಟ್ ಭಾಷಣ ಆರಂಭಿಸಿದ ಅವರು, ಭಾರತ 75ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ವರ್ಷದಲ್ಲಿ ತಮ್ಮ ರಾಜಕೀಯ ಬದುಕಿನ 15ನೇ ಬಜೆಟ್ ಮಂಡಿಸಲು ಅತೀವ ಸಂತೋಷವಾಗುತ್ತಿದೆ ಎಂದು ಹೇಳಿದರು. ಸಂವಿಧಾನ ಶಿಲ್ಪಿ ಡಾ ಬಿಅರ್ ಅಂಬೇಡ್ಕರ್ (Dr BR Ambedkar) ಆಶಯದಂತೆ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಬ್ರಾತೃತ್ವದ ಅಂಶಗಳ ತಳಹದಿಯ ಮೇಲೆ, ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸುವೆಡೆ ತಮ್ಮ ಸರ್ಕಾರ ಹೆಜ್ಜೆಯಿಟ್ಟಿದೆ ಎಂದು ಸಿದ್ದರಾಮಯ್ಯ ಹೇಳಿದರು. ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತಮಗೆ ಪ್ರೇರಣೆಯಾಗಿವೆ ಎಂದು ಹೇಳಿದ ಅವರು, ಶರಣರು ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಮೀಸಲಿಡಬೇಕೆಂದು ಪ್ರತಿಪಾದಿಸಿದ್ದನ್ನು ಅಕ್ಷರಶಃ ಪಾಲನೆ ಮಾಡಿ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು. ಈ ಸಂದರ್ಭದಲ್ಲಿ ಅವರು ಡಾ ರಾಜ್ ಕುಮಾರ್ ಅಭಿನಯದ ‘ಬಂಗಾರದ ಮನುಷ್ಯ’ ಚಿತ್ರದ ‘ಆಗದು ಎಂದು, ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಹಾಡನ್ನು…’ ಹೇಳಿ ಹಾಡಿನಲ್ಲಿರುವ ಸಾರಾಂಶದಂತೆ ದೇಶದಲ್ಲಿ ಯಾವುದೇ ಸರ್ಕಾರ ಜಾರಿಗೊಳಿಸದ ಬೃಹತ್ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ತಮ್ಮ ಸರ್ಕಾರ ಜಾರಿಗೊಳಿಸಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ