‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ಗೊರವಯ್ಯನ ಕಾರ್ಣಿಕದ ಅರ್ಥ ಇಲ್ಲಿದೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಇಂದು ಕಾರ್ಣಿಕ ನುಡಿಯಲಾಗಿದೆ. 9 ದಿನ ಉಪವಾಸವಿದ್ದ ಗೊರವಯ್ಯ, 18 ಅಡಿ ಬಿಲ್ಲನ್ನೇರಿ ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್​ ಎಂದು ಭವಿಷ್ಯವಾಣಿ ನುಡಿದಿದ್ದಾರೆ. ರಾಜಕೀಯವಾಗಿ ಇದರ ಅರ್ಥ ಏನು ಎಂದು ತಿಳಿಯಿರಿ.

‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ಗೊರವಯ್ಯನ ಕಾರ್ಣಿಕದ ಅರ್ಥ ಇಲ್ಲಿದೆ
ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕದ ಅರ್ಥ ಇಲ್ಲಿದೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 11, 2024 | 8:13 PM

ಹಾವೇರಿ, ಅಕ್ಟೋಬರ್​ 11: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ದಸರಾ ಹಬ್ಬದ ವೇಳೆ ನಡೆಯುವ ಕಾರ್ಣಿಕದಲ್ಲಿ (Karnika) ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’ ಎಂದು ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರಿಂದ ಕಾರ್ಣಿಕ ನುಡಿಯಲಾಗಿದೆ. 9 ದಿನ ಉಪವಾಸವಿದ್ದು, ಇಂದು 18 ಅಡಿ ಬಿಲ್ಲನ್ನೇರಿದ ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭವಿಷ್ಯವಾಣಿ ನುಡಿದಿದ್ದಾರೆ.

ಒಳ್ಳೆ ಮಳೆ, ರೈತರಿಗೆ ಬೆಳೆ: ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ

ಗೊರವಯ್ಯ ನುಡಿದ ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’ ಕಾರ್ಣಿಕವನ್ನು ದೇವರಗುಡ್ಡದಲ್ಲಿ ಮಾಲತೇಶಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ ಅವರು ಅದರ ಅರ್ಥವನ್ನು ತಿಳಿಸಿದ್ದಾರೆ. ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’ ಎಂದು ಕಾರ್ಣಿಕ ಆಗಿದೆ. ಗೊರವಯ್ಯನವರು 9 ದಿನ ಉಪವಾಸ ಇದ್ದು ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ಸಂಕಷ್ಟ ಹರಣ ಪೂಜೆ ಮಾಡಿಸಿದ ಸಿದ್ದು ಅಭಿಮಾನಿಗಳು

ಆಕಾಶದತ್ತ ಚಿಗುರಿತಲೇ ಅಂದರೆ ಒಳ್ಳೆ ಮಳೆ ಆಗುತ್ತೆ, ಬೇರು ಮುದ್ದಾಯಿತಲೇ ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ, ಅದನ್ನ ತೆಗೆದುಕೊಳ್ಳುವ ಫಲಾನುಭವಿಗಳಿಗೂ ಒಳ್ಳೆದಾಗುತ್ತೆ ಅಂತ ವಿಶ್ಲೇಷಣೆ ಮಾಡಬಹುದು ಎಂದು ವಿವರಿಸಿದ್ದಾರೆ.

ರಾಜಕೀಯವಾಗಿ ಕಾರ್ಣಿಕ ಅರ್ಥವೇನು?

ರಾಜಕೀಯವಾಗಿ ಹೇಳುವುದಾದರೆ ಆಕಾಶದತ್ತ ಚಿಗರಿತಲೇ, ಅಂದರೆ ಈಗಿರುವ ನಾಯಕತ್ವ ಆಕಾಶದತ್ತ ಚಿಗುರಿಬಿಟ್ಟಿದೆ. ಬೇರು ಮುದ್ದಾಯಿತಲೇ ಅಂದರೆ, ಅವರಿಗೆಲ್ಲಾ ಬೆನ್ನೆಲುಬಾಗಿ ನಿಂತಿರುವುದು ನೀವೆಲ್ಲಾ ನೋಡಿರಬಹುದು. ಕಾನೂನು ವ್ಯವಸ್ಥೆಯಲ್ಲಿ ಏನು ಬದಲಾವಣೆ ಆದರೂ ಕೂಡ ಈಗಿರುವ ನಾಯಕತ್ವ ಹೇಳಿದಂಗೆ ಅವರು ಒಪ್ಪಿಕೊಳ್ಳುತ್ತಾರೆ ಎಂದರ್ಥ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜವಾಯ್ತು!

ಬೇರುಗಳೆಲ್ಲಾ ಮುದ್ದಾಯಿತಲೇ ಅಂದರೆ ಆಕಾಶತ್ತ ಚಿಗುರಿರುವ ಗಿಡ ಹೇಳಿದಂಗೆ ಬೇರುಗಳು‌ ಒಪ್ಪಿಕೊಳ್ಳುತ್ತವೆ. ಹೀಗೆ ರಾಜಕೀಯವಾಗಿ ವಿಶ್ಲೇಷಣೆ ಮಾಡಬಹುದು ಎಂದು ಸಂತೋಷ ಭಟ್ಟ ಗುರೂಜಿ ಹೇಳಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:59 pm, Fri, 11 October 24

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು