ಗಣಿಗಾರಿಕೆ ಅಕ್ರಮಗಳ ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ 16 ವಿಷಯಗಳ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸಲಾಗಿದೆ. ಗಣಿಗಾರಿಕೆ ಅಕ್ರಮಗಳ ಕುರಿತ ತನಿಖೆಯ ಎಸ್ಐಟಿ ಕಾರ್ಯಾವಧಿಯನ್ನು ಜುಲೈ 1ರಿಂದ ಒಂದು ವರ್ಷದ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗಣಿಗಾರಿಕೆ ಅಕ್ರಮಗಳ ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ
ಗಣಿಗಾರಿಕೆ ಅಕ್ರಮಗಳ ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 10, 2024 | 9:49 PM

ಬೆಂಗಳೂರು, ಅಕ್ಟೋಬರ್​ 10: ಗಣಿಗಾರಿಕೆ ಅಕ್ರಮಗಳ ಕುರಿತ ತನಿಖೆಯ ಎಸ್ಐಟಿ ಕಾರ್ಯಾವಧಿಯನ್ನು ಜುಲೈ 1ರಿಂದ ಒಂದು ವರ್ಷ ವಿಸ್ತರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌​ಕೆ ಪಾಟೀಲ್​, ಗಣಿಗಾರಿಕೆ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಇದೀಗ ಅದರ ಅವಧಿ ಮುಕ್ತಾಯವಾಗಿದ್ದು, ಇನ್ನೂ ಒಂದು ವರ್ಷದವರೆಗೆ ಅಧಿಕಾರಾವಧಿಯನ್ನು ವಿಸ್ತರಿಸಲು ಇಂದಿನ ಸಂಪುಟ ಸಭೆ ಅಸ್ತು ಎಂದಿದೆ. 113 ಗಣಿ ಪ್ರಕರಣಗಳು ಬಾಕಿ ಇವೆ. ಎರಡು ಪ್ರಕರಣಗಳು ಹೈಕೋರ್ಟ್​ನಲ್ಲಿವೆ. ಎಂಟು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ಸಚಿವ ಸಂಪುಟ ನಿರ್ಧಾರ

ರಾಜ್ಯ ಸರ್ಕಾರಿ ನೌಕರರು ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತದಾನ ಮಾಡಲು ಭೋಜನ ವಿರಾಮದ ಅವಧಿ ಸೇರಿ 2 ಗಂಟೆ ಕಾಲ ವಿಶೇಷ ಅನುಮತಿಗೆ ಸಂಪುಟ ಸಭೆ ಒಪ್ಪಿಕೊಂಡಿದೆ. ಅಕ್ಟೋಬರ್ 8ರಿಂದ ಡಿಸೆಂಬರ್ 4ರವರೆಗೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಕೋವಿಡ್​ ಹಗರಣ: ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆ ತೀರ್ಮಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್​ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದಿಸಲಾಗಿದೆ. ರಾಜ್ಯ ಕಾನೂನು ಆಯೋಗದ ಹೊಸ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ಸಿಎಂಗೆ ಅಧಿಕಾರ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:49 pm, Thu, 10 October 24

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ