ಬೆಂಗಳೂರು, ಅಕ್ಟೋಬರ್ 10: ಗಣಿಗಾರಿಕೆ ಅಕ್ರಮಗಳ ಕುರಿತ ತನಿಖೆಯ ಎಸ್ಐಟಿ ಕಾರ್ಯಾವಧಿಯನ್ನು ಜುಲೈ 1ರಿಂದ ಒಂದು ವರ್ಷ ವಿಸ್ತರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್, ಗಣಿಗಾರಿಕೆ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು #CabinetDecisions pic.twitter.com/wgPDfmLUDI
— Siddaramaiah (@siddaramaiah) October 10, 2024
ಇದೀಗ ಅದರ ಅವಧಿ ಮುಕ್ತಾಯವಾಗಿದ್ದು, ಇನ್ನೂ ಒಂದು ವರ್ಷದವರೆಗೆ ಅಧಿಕಾರಾವಧಿಯನ್ನು ವಿಸ್ತರಿಸಲು ಇಂದಿನ ಸಂಪುಟ ಸಭೆ ಅಸ್ತು ಎಂದಿದೆ. 113 ಗಣಿ ಪ್ರಕರಣಗಳು ಬಾಕಿ ಇವೆ. ಎರಡು ಪ್ರಕರಣಗಳು ಹೈಕೋರ್ಟ್ನಲ್ಲಿವೆ. ಎಂಟು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ಸಚಿವ ಸಂಪುಟ ನಿರ್ಧಾರ
ರಾಜ್ಯ ಸರ್ಕಾರಿ ನೌಕರರು ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತದಾನ ಮಾಡಲು ಭೋಜನ ವಿರಾಮದ ಅವಧಿ ಸೇರಿ 2 ಗಂಟೆ ಕಾಲ ವಿಶೇಷ ಅನುಮತಿಗೆ ಸಂಪುಟ ಸಭೆ ಒಪ್ಪಿಕೊಂಡಿದೆ. ಅಕ್ಟೋಬರ್ 8ರಿಂದ ಡಿಸೆಂಬರ್ 4ರವರೆಗೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಕೋವಿಡ್ ಹಗರಣ: ಕ್ಯಾಬಿನೆಟ್ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆ ತೀರ್ಮಾನ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದಿಸಲಾಗಿದೆ. ರಾಜ್ಯ ಕಾನೂನು ಆಯೋಗದ ಹೊಸ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ಸಿಎಂಗೆ ಅಧಿಕಾರ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:49 pm, Thu, 10 October 24