Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರ ಯಾರ ಯಾರ ಮೇಲಿನ ಕೇಸ್ ವಾಪಸ್​ ಪಡೆದಿದೆ? ಇಲ್ಲಿದೆ ಪಟ್ಟಿ

ಹಿಜಾಬ್ ಪರ ಪ್ರತಿಭಟನೆ ನಡೆಸಿದ್ದ ಎಐಎಂಐಎಂ ಕಾರ್ಯಕರ್ತರ ವಿರುದ್ಧದ ಪ್ರಕರಣ ಸೇರಿದಂತೆ ಕೆಲ ಪ್ರಮುಖ ರಾಜಕೀಯ ನಾಯಕರ ವಿರುದ್ಧ ದಾಖಲಾಗಿರುವ ಕೇಸ್​ಗಳನ್ನೂ ರಾಜ್ಯ ಸರ್ಕಾರ ವಾಪಸ್ ಪಡೆಯಲಾಗಿದೆ. ಇದು ಸದ್ಯ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ರಾಜ್ಯ ಸರ್ಕಾರ ಯಾರ ಯಾರ ಮೇಲಿನ ಕೇಸ್ ವಾಪಸ್​ ಪಡೆದಿದೆ? ಇಲ್ಲಿದೆ ಪಟ್ಟಿ
ರಾಜ್ಯ ಸರ್ಕಾರ ಯಾರ ಯಾರ ಮೇಲಿನ ಕೇಸ್ ವಾಪಸ್​ ಪಡೆದಿದೆ? ಇಲ್ಲಿದೆ ಪಟ್ಟಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 11, 2024 | 4:47 PM

ಬೆಂಗಳೂರು, ಅಕ್ಟೋಬರ್​ 11: ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬರೋಬ್ಬರಿ 43 ಕೇಸ್​ಗಳನ್ನ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಕೈಗೊಂಡ ಈ ನಿರ್ಧಾರಕ್ಕೆ ಸದ್ಯ ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. 43 ಕೇಸ್​ಗಳ ಜೊತೆಗೆ ಕೆಲ ನಾಯಕರ ಮೇಲಿನ ಕೇಸ್​ಗಳನ್ನು ವಾಪಸ್​ ಪಡೆಯಲಾಗಿದೆ. ಹಾಗಾದರೆ ರಾಜ್ಯ ಸರ್ಕಾರ ಯಾರ ಯಾರ ಮೇಲಿನ ಕೇಸ್ ವಾಪಸ್​ ಪಡೆದಿದೆ ಎಂಬ ಪಟ್ಟಿ ಇಲ್ಲಿದೆ.

ಹಿಜಾಬ್ ಪರ ಪ್ರತಿಭಟನೆ ನಡೆಸಿದ್ದ ಎಐಎಂಐಎಂ ಕಾರ್ಯಕರ್ತರ ವಿರುದ್ಧ ಕಲಬುರಗಿ ಜಿಲ್ಲೆ ಆಳಂದ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ. 2022ರಲ್ಲಿ ಆಳಂದ ಠಾಣೆಯಲ್ಲಿ AIMIM ವಿರುದ್ಧ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ ಎಂದ ಸಿದ್ದರಾಮಯ್ಯ

ಕನ್ನಡ ಪರ ಹೋರಾಟಗಾರರು ರೋಲ್​ಕಾಲ್ ಗಿರಾಕಿಗಳೆಂದು 2022ರಲ್ಲಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಪ್ರತಿಭಟನೆ ಮಾಡಲಗಿತ್ತು. ಬಾಗಲಕೋಟೆಯ ನವನಗರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ವಾಪಸ್ ಪಡೆಯಲಾಗಿದೆ.

2023 ರಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನಿವಾಸದ ಮುಂದೆ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘ ಪ್ರತಿಭಟನೆ ನಡೆಸಿದ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಂದ್ರ ಸಚಿವ ವಿ. ಸೋಮಣ್ಣ ಮೂಲಕ ಮನವಿ ಸಲ್ಲಿಸಲ್ಪಟ್ಟಿದ್ದ ಎರಡು ಪ್ರಕರಣಗಳು ವಾಪಸ್ ಪಡೆಯಲಾಗಿದೆ.

ಬೆಂಗಳೂರಿನ ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2008 ಕರವೇ ಕಾರ್ಯಕರ್ತರು ಕೇಬಲ್ ಕಚೇರಿ ಮೇಲೆ ದಾಳಿ ಮಾಡಿದ್ದ ಪ್ರಕರಣ ಮತ್ತು 2008 ರಲ್ಲಿ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ದಾಖಲಾಗಿದ್ದ ರೈಲ್ವೇ ಇಲಾಖೆ ನೇಮಕಾತಿ ವೇಳೆ ಕರವೇ ಕಾರ್ಯಕರ್ತರ ಪ್ರತಿಭಟನೆ ಪ್ರಕರಣವನ್ನು ವಾಪಸ್​ ಪಡೆಯಲಾಗಿದೆ.

ಇದನ್ನೂ ಓದಿ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ಸಚಿವ ಸಂಪುಟ ನಿರ್ಧಾರ

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ  ರವಿ ಸಲ್ಲಿಸಿದ್ದ ಮನವಿ ಪ್ರಕರಣವನ್ನು ಕೂಡ ವಾಪಸ್ ಪಡೆಯಲಾಗಿದೆ. 2015ರಲ್ಲಿ ಬಾಗೇಪಲ್ಲಿ ಟೋಲ್ ಪ್ಲಾಜಾ ಬಳಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಅಕ್ರಮ ಗುಂಪು ಕಟ್ಟಿ ಸಾರ್ವಜನಿಕ ಓಡಾಟಕ್ಕೆ ತಡೆಯೊಡಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ವಾಪಸ್ ಪಡೆಯಲು ಸಚಿವ ಡಾ‌.‌ಎಂ.ಸಿ. ಸುಧಾಕರ್ ಮನವಿ ಸಲ್ಲಿಸಿದ್ದರು ಅದರಂತೆ ವಾಪಸ್​ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ