AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್‌, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು, ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನೇಮಕಾತಿ ಪ್ರಶ್ನಿಸಿ ವಕೀಲ ಎಸ್.ಉಮಾಪತಿ ಎಂಬುವರಯ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸಿಎಂ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಜಾ
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Sep 07, 2023 | 1:27 PM

Share

ಬೆಂಗಳೂರು, (ಸೆಪ್ಟೆಂಬರ್ 07): ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್‌, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು, ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನೇಮಕಾತಿ ಪ್ರಶ್ನಿಸಿ ವಕೀಲ ಎಸ್.ಉಮಾಪತಿ ಎಂಬುವರ ಪಿಐಎಲ್ ಅನ್ನು ಇಂದು(ಸೆಪ್ಟೆಂಬರ್ 07) ಹೈಕೋರ್ಟ್ ವಜಾ ಮಾಡಿದೆ.

ಸರ್ಕಾರ ಸಲಹೆಗಾರರನ್ನು ನೇಮಿಸಬಾರದೆಂಬ ನಿರ್ಬಂಧವಿಲ್ಲ ಎಂದು ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀರಿಸಿದ ಬಳಿಕ ತಮ್ಮ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನಜೀರ್ ಅಹಮದ್, ಕೆ.ಗೋವಿಂದರಾಜ್‌ ಅವರನ್ನು ನೇಮಿಕ ಮಾಡಿಕೊಂಡಿದ್ದರು. ಅಲ್ಲದೇ ತಮ್ಮ ರಾಜಕೀಯ ಸಲಹೆಗಾರರನ್ನಾಗಿ ಸುನೀಲ್ ಕನಗೋಲು ಅವರನ್ನು ನೇಮಿಸಿಕೊಂಡಿದ್ದರು. ಇನ್ನು ಕೆ.ವಿ. ಪ್ರಭಾಕರ್ ಅವರು ಸಿದ್ದರಾಮಯ್ಯ ಅವರು ತಮ್ಮ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದರು. ಆದ್ರೆ, ಈ ನೇಮಕಗಳನ್ನು ಪ್ರಶ್ನಿಸಿ ವಕೀಲ ಎಸ್.ಉಮಾಪತಿ ಎಂಬುವರು ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದರು.

Published On - 1:27 pm, Thu, 7 September 23