ಬೆಳಗಾವಿ: ಭೂಕಂದಾಯ ಎರಡನೇ ತಿದ್ದುಪಡಿ ವಿಧೇಯಕ ತಿದ್ದುಪಡಿ (Land Revenue Second Amendment Bill 2022) ಅಂಗೀಕಾರವಾಗಿದೆ. ಇಂದು(ಡಿಸೆಂಬರ್ 22) ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ (Belagavi Winter session) ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಭೂಕಂದಾಯ ಕಾಯ್ದೆ ಸೆಕ್ಷನ್ 95, 96ಕ್ಕೆ ತಿದ್ದುಪಡಿ ತರುವ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣವಾಗಲಿದೆ.
ಕೃಷಿಭೂಮಿಯ ನಿವಾಸಿಗಳು ಅದನ್ನು ಸಂಪೂರ್ಣವಾಗಿ ಅಥವಾ ಅದರ ಭಾಗವನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬೇರೆಡೆಗೆ ವರ್ಗಾವಣೆಗೆ ಬಯಸಿದರೆ, ಅವರು ಅರ್ಜಿಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಫಿಡವಿಟ್ ನ್ನು ಸಲ್ಲಿಸಬಹುದು. ಬಳಿಕ ಅರ್ಜಿ ಸ್ವೀಕರಿಸಿದ 7 ದಿನಗಳಲ್ಲಿ ಜಿಲ್ಲಾಧಿಕಾರಿ ಅನುಮೋದನೆ ನೀಡುತ್ತಾರೆ.
ಅರ್ಜಿ ಸ್ವೀಕರಿಸಿದ ಏಳು ದಿನಗಳಲ್ಲಿ ಡಿಸಿ (ಜಿಲ್ಲಾಧಿಕಾರಿ) ಅನುಮೋದನೆ ನೀಡಬೇಕು. ಮಾಸ್ಟರ್ ಪ್ಲಾನ್ ಪ್ರಕಟಿಸದಿದ್ದಲ್ಲಿ ಮತ್ತು ಜಮೀನು ಯೋಜನಾ ಪ್ರದೇಶದ ಹೊರಗೆ ಬಿದ್ದರೆ, ಅಧಿಕಾರಿಗಳು ಅರ್ಜಿಯನ್ನು ಸ್ವೀಕರಿಸಿದ ದಿನಾಂಕದಿಂದ 15 ದಿನಗಳಲ್ಲಿ ತಮ್ಮ ಅಭಿಪ್ರಾಯವನ್ನು ಒದಗಿಸಬೇಕು.
ಯಾವುದೇ ಅಭಿಪ್ರಾಯವನ್ನು ನೀಡದಿದ್ದಲ್ಲಿ, ಭೂಮಿಯನ್ನು ಬೇರೆಡೆಗೆ ತಿರುಗಿಸಲು ಅಧಿಕಾರಿಗಳ ಅಭ್ಯಂತರವಿಲ್ಲ ಎಂದು ಪರಿಗಣನೆ, ನಂತರ ಡಿಸಿ ಅನುಮೋದನೆ ನೀಡಬೇಕು. ಅರ್ಜಿಯನ್ನು ಸ್ವೀಕರಿಸಿದ ದಿನಾಂಕದಿಂದ 30 ದಿನಗಳಲ್ಲಿ ಡಿಸಿ ನಿರ್ಧರಿಸಲು ಮತ್ತು ಆದೇಶವನ್ನು ನೀಡಲು ವಿಫಲವಾದರೆ ಅನುಮೋದನೆಯನ್ನು ನೀಡಲಾಗಿದೆ ಎಂದು ಪರಿಗಣನೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ