AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯದಲ್ಲೇ ಬ್ರಿಟಿಷ್ ಕಾಲದ ಟೋಪಿಗೆ ನಿವೃತ್ತಿ: ಕರ್ನಾಟಕ ಪೊಲೀಸರ ತಲೆ ಅಲಂಕರಿಸಲಿದೆ ಸ್ಮಾರ್ಟ್​ ಹ್ಯಾಟ್​

ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್‌ಗಳು ಬಹಳ ವರ್ಷಗಳಿಂದ ಬ್ರಿಟಿಷ್ ಕಾಲದ ಟೋಪಿಗಳನ್ನು ಧರಿಸುತ್ತಿದ್ದಾರೆ. ಇದು ಆರೋಗ್ಯ ಮತ್ತು ಇತರೆ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಹೊಸ ಪೀಕ್ ಕ್ಯಾಪ್‌ಗಳನ್ನು ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಬಗ್ಗೆ ಏಪ್ರಿಲ್​ 4ರಂದು ಸಭೆ ನಡೆಯಲಿದೆ.

ಸದ್ಯದಲ್ಲೇ ಬ್ರಿಟಿಷ್ ಕಾಲದ ಟೋಪಿಗೆ ನಿವೃತ್ತಿ: ಕರ್ನಾಟಕ ಪೊಲೀಸರ ತಲೆ ಅಲಂಕರಿಸಲಿದೆ ಸ್ಮಾರ್ಟ್​ ಹ್ಯಾಟ್​
ಸದ್ಯದಲ್ಲೇ ಬ್ರಿಟಿಷ್ ಕಾಲದ ಟೋಪಿಗೆ ನಿವೃತ್ತಿ: ಕರ್ನಾಟಕ ಪೊಲೀಸರ ತಲೆ ಅಲಂಕರಿಸಲಿದೆ ಸ್ಮಾರ್ಟ್​ ಹ್ಯಾಟ್​
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 30, 2025 | 9:36 AM

ಬೆಂಗಳೂರು, ಮಾರ್ಚ್ 30: ಕರ್ನಾಟಕ ಪೊಲೀಸ್​ ಇಲಾಖೆಯ (Karnataka Police Department) ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳು ಈಗಲೂ ಬ್ರಿಟಿಷ್​ ಕಾಲದ ಟೋಪಿಯನ್ನು (Hat) ಧರಿಸುತ್ತಾರೆ. ಈ ಟೋಪಿ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್​​ ಪೀಕ್​ ಹ್ಯಾಟ್​ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ.

ಅನಾದಿ ಕಾಲದಿಂದಲೂ ಬಳಸಿಕೊಂಡು ಬರುತ್ತಿರುವ ಟೋಪಿಯಿಂದ ಸಮಸ್ಯೆ ಜಾಸ್ತಿ ಎನ್ನಲಾಗುತ್ತಿದೆ. ರ್ಯಾಲಿ, ಪ್ರತಿಭಟನೆ ಅಥವಾ ಲಾಟಿ ಚಾರ್ಜ್​ ಸಂದರ್ಭಗಳಲ್ಲಿ ಕಿರಿಕಿರಿ ಉಂಟಾಗುತ್ತಿದೆ. ತಲೆ ಮೇಲೆ ಸರಿಯಾಗಿ ನಿಲ್ಲಲ್ಲ. ಒಂದು ವೇಳೆ ಓಡುವಾಗ ಕೆಳಗೆ ಬಿದ್ದರೆ ಸಾರ್ವಜನಿಕವಾಗಿ ಅವಮಾನವಲ್ಲದೇ, ಇಲಾಖೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಹಾಗಾಗಿ ಟೋಪಿ ಬದಲಾವಣೆಗೆ ಅನೇಕ ವರ್ಷಗಳಿಂದ ಪೊಲೀಸರು ಬೇಡಿಕೆ ಇಡುತ್ತಿದ್ದರೂ ಈಡೇರಿರಲಿಲ್ಲ.

ಇದನ್ನೂ ಓದಿ: Karnataka: ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭ, ಬೇರೆ ರಾಜ್ಯಗಳ ಭಕ್ತರಿಂದಲೂ ಪ್ರಸಾದಕ್ಕೆ ಬೇಡಿಕೆ

ಇದನ್ನೂ ಓದಿ
Image
ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭ, ಬೇರೆ ರಾಜ್ಯಗಳ ಭಕ್ತರಿಂದಲೂ ಬೇಡಿಕೆ
Image
ಏಪ್ರಿಲ್ 2ರಿಂದ ಕರ್ನಾಟಕದಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್​
Image
ಕಿತ್ತೂರು ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಸಿಎಂ ಪತ್ರ
Image
ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ

ಪ್ರಸ್ತುತ ಪೊಲೀಸ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಗ್ಲೋಚ್ ಟೋಪಿಯಿಂದಾಗಿ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳ ಬಗ್ಗೆ ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು. ಇನ್ನು ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳಿಗೆ ಪೀಕ್ ಕ್ಯಾಪ್‌ಗಳನ್ನು ನೀಡಲಾಗಿದೆ. ಸದ್ಯ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ  ನೀಡುವ ಕುರಿತಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಡಿಜಿ-ಐಜಿಪಿ ಡಾ. ಅಲೋಕ್​ ಮೋಹನ್ ಸೂಚಿಸಿದ್ದಾರೆ.​

ಇದನ್ನೂ ಓದಿ: Karnataka Rain: ಏಪ್ರಿಲ್ 2ರಿಂದ ಕೊಡಗು, ಮೈಸೂರು ಸೇರಿ ಕರ್ನಾಟಕದಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್​

ಆಗಾಗ ಈ ಬಗ್ಗೆ ಚರ್ಚೆಯಾಗುತ್ತಿದ್ದರು ಅನುಷ್ಠಾನಕ್ಕೆ ಬಂದಿರಲಿಲ್ಲ. ಇದೀಗ ಡಿಜಿ-ಐಜಿಪಿ ಸೂಚನೆ ಬೆನ್ನಲ್ಲೇ ಪೀಕ್ ಟೋಪಿ ವಿತರಣೆ ಬಗ್ಗೆ ಚರ್ಚಿಸಲು ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್​ಆರ್​ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಏಪ್ರಿಲ್​ 4ರಂದು ಕಿಟ್ ನಿರ್ದಿಷ್ಟತಾ ಸಮಿತಿ ಸಭೆ ಕರೆಯಲಾಗಿದೆ.  ಪ್ರಧಾನ ಕಚೇರಿ ಐಜಿಪಿ, ಬೆಂಗಳೂರು ಉತ್ತರ ವಿಭಾಗ, ಆತ್ಮೀಯ ವಿಭಾಗ ಹಾಗೂ ಸಿಎಆರ್ ಡಿಸಿಪಿಗಳು, ಜೊತೆಗೆ ಬೆಂಗಳೂರು ನಗರ ಜಿಲ್ಲೆ ಎಸ್​​ಪಿ, ಕೆಎಸ್​ಆರ್​ಪಿ ಕಮಾಂಡೆಂಟ್​ ಸೇರಿ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸಾಧಕ-ವಾಧಕಗಳ ಬಗ್ಗೆ ಚರ್ಚೆ ನಡೆಯಲಿದ್ದು, ಪೀಕ್ ಕ್ಯಾಪ್ ಕೊಡಲು ಶಿಫಾರಸ್ಸು ಮಾಡುವ ಭರವಸೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:32 am, Sun, 30 March 25