AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುನಿರೀಕ್ಷಿತ ಜಾತಿ ಗಣತಿ ವರದಿ ನಾಳೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಸಾಧ್ಯತೆ?

ಜಾತಿಗಣತಿ ವರದಿ ವಿಚಾರವಾಗಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯರನ್ನು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಭೇಟಿಯಾಗಲಿದ್ದಾರೆ. ನಾಳೆ ರಾಜ್ಯ ಸರ್ಕಾರಕ್ಕೆ ಆಯೋಗದಿಂದ ಬೆಳಗ್ಗೆ 11 ಗಂಟೆಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಬಹುನಿರೀಕ್ಷಿತ ಜಾತಿ ಗಣತಿ ವರದಿ ನಾಳೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಸಾಧ್ಯತೆ?
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 28, 2024 | 3:01 PM

Share

ಬೆಂಗಳೂರು. ಫೆಬ್ರವರಿ 28: ಇತ್ತೀಚೆಗೆ ಜಾತಿಗಣತಿ ವರದಿ ಸ್ವೀಕರಿಸುವಂತೆ ಸಾಕಷ್ಟು ರಾಜಕೀಯ ನಾಯಕರ, ಗಣ್ಯ ವ್ಯಕ್ತಿಗಳಿಂದ ಸಿಎಂ ಸಿದ್ದರಾಮಯ್ಯ (Siddaramaiah) ರಿಗೆ ಒತ್ತಾಯ ಮಾಡಲಾಗಿತ್ತು. ಸದ್ಯ ಇದೀಗ ಜಾತಿಗಣತಿ ವರದಿ ಸ್ವೀಕರಿಸಲು ಸಮಯ ಕೊಡಿಬಂದಂತ್ತಿದೆ. ಜಾತಿಗಣತಿ ವರದಿ ವಿಚಾರವಾಗಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯರನ್ನು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಭೇಟಿಯಾಗಲಿದ್ದಾರೆ. ನಾಳೆ ರಾಜ್ಯ ಸರ್ಕಾರಕ್ಕೆ ಶಾಶತ್ವ ಹಿಂದುಳಿದ ವರ್ಗಗಳ ಆಯೋಗದಿಂದ ಬೆಳಗ್ಗೆ 11 ಗಂಟೆಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿ ಬಗ್ಗೆ ಸಾಕಷ್ಟು ಅಪಸ್ವರಗಳು ಕೇಳಬಂದಿದ್ದವು. ಬಳಿಕ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಸರ್ಕಾರಕ್ಕೆ ಜಾತಿಗಣತಿ ವರದಿ ನೀಡಲು ಮುಂದಾಗಿದ್ದರು.

ಇದನ್ನೂ ಓದಿ: ನವೆಂಬರ್​ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ, ಜಯಪ್ರಕಾಶ್​ ಹೆಗ್ಡೆ ಸ್ಪಷ್ಟನೆ

ಕಾಂತರಾಜು ಅವರ ಜಾತಿಗಣತಿ ವರದಿ ಸ್ವೀಕಾರ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಜೊತೆಗೆ ಜಾತಿಗಣತಿ ವರದಿಯಲ್ಲಿ ಲೋಪವಿದ್ದರೆ ತಜ್ಞರ ಸಲಹೆ ಪಡೆಯುತ್ತೇನೆ ಎಂದು ತಿಳಿಸಿದ್ದರು. ಇದನ್ನು ಸಂಪುಟದಲ್ಲಿ ಇಟ್ಟು ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಜಾತಿ ಗಣತಿ ವರದಿ: ಅತ್ತ ಹೈಕಮಾಂಡ್, ಇತ್ತ ಸಮುದಾಯ: ಅಡಕತ್ತರಿಯಲ್ಲಿ ಸಿಲುಕಿದ ಡಿಕೆ ಶಿವಕುಮಾರ್

ಈ ಹಿಂದೆ ಜಾತಿಗಣತಿ ವರದಿ ವಿರೋಧಿಸಿ ಒಕ್ಕಲಿಗ ಸಮುದಾಯದ ಮನವಿ ಪತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಹಿ ಮಾಡಿದ್ದರು. ಆದರೆ ಇತ್ತೀಚೆಗೆ ಅಹಿಂದ ಸಮಾವೇಶದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್​ ರಾಹುಲ್ ಗಾಂಧಿ ಜಾತಿಗಣತಿ ಆಗಬೇಕು ಎಂದಿದ್ದಾರೆ, ಇದಕ್ಕೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದ್ದರು.

ಪುನರ್ ಪರಿಶೀಲನೆಗೆ ಒಕ್ಕಲಿಗೆ ಸಮುದಾಯ ಒತ್ತಾಯ

ಜಾತಿ ಗಣತಿ ವರದಿ ಬಿಡುಗಡೆಗೆ ಪರ-ವಿರೋಧ ವ್ಯಕ್ತವಾಗಿತ್ತು. ಕಾಂತರಾಜು ವರದಿಯನ್ನು ಒಕ್ಕಲಿಗ ಸಮುದಾಯದ ನಾಯಕರು ವಿರೋಧಿಸಿದ್ದರು. ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತಶ್ರೀ ನೇತೃತ್ವದಲ್ಲಿ ಈ ಕುರಿತು ಚರ್ಚಿಸಲು ಸಭೆ ಮಾಡಲಾಗಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಅಶ್ವತ್ಥ್ ನಾರಾಯಣ್, ಶರತ್ ಬಚ್ಚೇಗೌಡ, ಎಂ.ಕೃಷ್ಣಪ್ಪ, S.T.ಸೋಮಶೇಖರ್, ಆರಗ ಜ್ಞಾನೇಂದ್ರ ಹಾಗೂ ಒಕ್ಕಲಿಗ ಸಂಘದ ನಾಯಕರು ಪಾಲ್ಗೊಂಡಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:40 pm, Wed, 28 February 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ