ದೇಶದಲ್ಲಿ ಒಂದೇ ಗ್ಯಾರಂಟಿ ಅದು ಮೋದಿ, ಜನ ಅವರನ್ನು ಮಾತ್ರ ನಂಬುತ್ತಾರೆ: ಅನುರಾಗ್ ಠಾಕೂರ್

ಬೆಂಗಳೂರಿನಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದ ಎಲ್ಲಾ ಜನರು ತೆರಿಗೆ ಕಟ್ಟುತ್ತಾರೆ. ದೇಶದ ತೆರಿಗೆ ಹಣ ದೇಶದ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಲಾಗುವುದು. ದೇಶದಲ್ಲಿ ಒಂದೇ ಗ್ಯಾರಂಟಿ ಅದು ಪ್ರಧಾನಿ ನರೇಂದ್ರ ಮೋದಿ. ಮೋದಿ ಗ್ಯಾರಂಟಿಗೆ ಮಾತ್ರ ಬೆಲೆ ಇದೆ. ಜನ ಮೋದಿಯನ್ನು ಮಾತ್ರ ನಂಬುತ್ತಾರೆ ಎಂದು ಹೇಳಿದ್ದಾರೆ. 

ದೇಶದಲ್ಲಿ ಒಂದೇ ಗ್ಯಾರಂಟಿ ಅದು ಮೋದಿ, ಜನ ಅವರನ್ನು ಮಾತ್ರ ನಂಬುತ್ತಾರೆ: ಅನುರಾಗ್ ಠಾಕೂರ್
ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 08, 2024 | 9:11 PM

ಬೆಂಗಳೂರು, ಮಾರ್ಚ್​​ 08: ನಗರದ ಚರ್ಚ್ ಸ್ಟ್ರೀಟ್​​ನಲ್ಲಿ ವಿಕಸಿತ ಭಾರತ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಯುವ ಸಮುದಾಯವನ್ನು ಉದ್ದೇಶಿಸಿ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಭಾಷಣ ಮಾಡಿದರು. ಉದ್ಯಮಿಗಳು ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್​, ದೇಶದಲ್ಲಿ ಒಂದೇ ಗ್ಯಾರಂಟಿ ಅದು ಪ್ರಧಾನಿ ನರೇಂದ್ರ ಮೋದಿ. ಮೋದಿ ಗ್ಯಾರಂಟಿಗೆ ಮಾತ್ರ ಬೆಲೆ ಇದೆ. ಜನ ಮೋದಿಯನ್ನು ಮಾತ್ರ ನಂಬುತ್ತಾರೆ ಎಂದು ಹೇಳಿದ್ದಾರೆ.

ನನ್ನ ತೆರಿಗೆ, ನನ್ನ ಹಕ್ಕು ಕಾಂಗ್ರೆಸ್ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದೇಶದ ಎಲ್ಲಾ ಜನರು ತೆರಿಗೆ ಕಟ್ಟುತ್ತಾರೆ. ದೇಶದ ತೆರಿಗೆ ಹಣ ದೇಶದ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಲಾಗುವುದು. ಇದರಲ್ಲಿ ನನ್ನದು, ನಿನ್ನದು ಅಂತಿಲ್ಲ. ಎಲ್ಲರಿಗೂ ಕೇಳುವ ಹಕ್ಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾ. 9ಕ್ಕೆ, ಬೆಂಗಳೂರಿನಲ್ಲಿ ಎಂಪಿಎಲ್​ಎಸ್ ರೂಟರ್, ಅಪ್ಲೈಡ್ ಮೆಟೀರಿಯಲ್ಸ್ ವ್ಯಾಲಿಡೇಶನ್ ಸೆಂಟರ್​ಗೆ ಸಚಿವ ವೈಷ್ಣವ್ ಚಾಲನೆ

ದೇಶದ ರೈತರ ಹಿತ ಕಾಪಾಡುವ ಕೆಲಸ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಜೆಟ್ 27 ಸಾವಿರ ರೂ. ಕೋಟಿಯಾಗಿತ್ತು. 2014ರ ಬಳಿಕ ಈಗ ಒಂದು‌ ಲಕ್ಷ ಕೋಟಿ ರೂ. ಆಗಿದೆ. ಎಂಎಸ್​ಪಿಗೂ ಸಾವಿರಾರು ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ತಿಳಿಸಿದರು.

ವಿಕಸಿತ ಭಾರತ ಸಂಕಲ್ಪ ಒಂದು ಉತ್ತಮ‌ ಕಾರ್ಯಕ್ರಮ. ಅಮೃತ ಕಾಲದ ವೇಳೆಗೆ ದೇಶ ಹೇಗೆಲ್ಲ ಇರಬೇಕು ಎಂಬ ಬಗ್ಗೆ ನಿರ್ಣಯ ಮಾಡಲು ದೇಶವನ್ನು ಸುರಕ್ಷಿತವಾಗಿಡಲು ಪ್ರಧಾನಿ ಮೋದಿ ಕನಸು ಕಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗುತ್ತಾರೆ. ಇದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ‌ ಉತ್ತರ ಏನು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಯಾವಾಗ ಕ್ರಮ ಅಂದರೆ ಎಫ್​ಎಸ್​ಎಲ್​ ವರದಿ ಬಂದಿಲ್ಲ ಅಂತಾರೆ. ದೇಶದೊಳಗೆ ಇಂತಹ ದೇಶದ್ರೋಹಿಗಳಿದ್ದಾರೆ. ರಾಹುಲ್‌ ಗಾಂಧಿ ಭಾರತ್ ಜೋಡೋ ಅಂತಿದ್ದಾರೆ, ಇಲ್ಲಿ ಹೀಗೆಲ್ಲಾ ಘಟನೆ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿ ಮೋದಿ ಕಾ ಪರಿವಾರ್ ಅಭಿಯಾನ ನಡೆಯುತ್ತಿದೆ. ನಾನೂ ಕೂಡ ಮೋದಿ ಕಾ ಪರಿವಾರದವನಾಗಿದ್ದೇನೆ. ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ. ಕಾಂಗ್ರೆಸ್ ದೆಹಲಿಯಲ್ಲಿ ಭ್ರಷ್ಟಾಚಾರಿ ಆಮ್​ ಆದ್ಮಿ ಪಕ್ಷದ ಜೊತೆ ಕೈ ಜೋಡಿಸಿದೆ. ಆಮ್​ ಆದ್ಮಿ ಸಚಿವರು ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದಾರೆ. 2 ಜಿ ಸ್ಪೆಕ್ಟ್ರಂ ಭ್ರಷ್ಟಾಚಾರ ಮಾಡಿದ ರಾಜಾ, ಸನಾತನ ಧರ್ಮದ ಬಗ್ಗೆ ಮಾತಾಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?