AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ‌, ಸತೀಶ್ ಜಾರಕಿಹೊಳಿಗೆ ನಿಂದನೆ ಮಾಡಿದ್ದ ವ್ಯಕ್ತಿ ಅರೆಸ್ಟ್: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್

ಬೆಳಗಾವಿ ಮಾರುಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವಾಚ್ಯವಾಗಿ ನಿಂದಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸತೀಶ್ ಜಾರಕಿಹೊಳಿ ಬೆಂಬಲಿಗರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸಿಎಂ‌, ಸತೀಶ್ ಜಾರಕಿಹೊಳಿಗೆ ನಿಂದನೆ ಮಾಡಿದ್ದ ವ್ಯಕ್ತಿ ಅರೆಸ್ಟ್: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್
ಸಿಎಂ‌, ಸತೀಶ್ ಜಾರಕಿಹೊಳಿಗೆ ನಿಂದನೆ ಮಾಡಿದ್ದ ವ್ಯಕ್ತಿ ಅರೆಸ್ಟ್, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್
Sahadev Mane
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 04, 2024 | 8:02 PM

Share

ಬೆಳಗಾವಿ, ಡಿಸೆಂಬರ್​ 04: ಸಿಎಂ‌ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯವಾಗಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ (arrested). ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ(38) ಬಂಧಿತ ವ್ಯಕ್ತಿ.

ಸತೀಶ್ ಜಾರಕಿಹೊಳಿ‌ ಬೆಂಬಲಿಗ ವಿಜಯ ತಳವಾರ್ ಎಂಬುವರಿಂದ ಕೇಸ್ ದಾಖಲಾಗಿತ್ತು. ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿ ಬೆಳಗಾವಿಗೆ ಕರೆತಂದ ಪೊಲೀಸರು ಬೆಳಗಾವಿ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ.

ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ: ಹಿಂದೂ ಹಿತರಕ್ಷಣಾ ಸಮಿತಿ ಮೇಲೆ ಬಿತ್ತು ಕೇಸ್ 

ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ಮಾಡಲಾಗಿದೆ. ಇದೀಗ ಪ್ರತಿಭಟನೆ ನಡೆಸಿದ ಹಿಂದೂ ಹಿತರಕ್ಷಣಾ ಸಮಿತಿ ಮೇಲೆ ಕೇಸ್ ಹಾಕಲಾಗಿದೆ. ರಸ್ತೆಗೆ ಇಳಿದಿದ್ದ ಹಿಂದೂ ಕಾರ್ಯಕರ್ತರು ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದರು. ರಸ್ತೆ ತಡೆ ಹಿಡಿದಿದ್ದರಿಂದ ಆಂಬುಲೆನ್ಸ್ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ರಾಕ್ಷಸಿಯ ಕೃತ್ಯಗಳು ಬಯಲು

ಬ್ಯಾರಿಕೇಡ್ ದಾಟಿ ಬಂದು ಕಾರ್ಯಕರ್ತರು ರಸ್ತೆ ತಡೆದಿದ್ದರು. ಕರ್ತವ್ಯದಲ್ಲಿದ್ದ ಪೊಲೀಸರ ಜೊತೆಗೂ ಪುಂಡಾಟ ಮೆರೆದಿದ್ದರು. ಸದ್ಯ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾ ಆಯೋಜಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ತುಮಕೂರಿನಲ್ಲಿ ಸ್ವಾಮೀಜಿಗಳಿಂದ ಪ್ರತಿಭಟನೆ

ಇನ್ನು ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಹಿಂದೂ ಸಂಘಟನೆ ಹಾಗೂ ಸ್ವಾಮೀಜಿಗಳು ಪ್ರತಿಭಟನೆ ಮಾಡಿದ್ದಾರೆ. ತುಮಕೂರಿನ ಟೌನ್ ಹಾಲ್ ಸರ್ಕಲ್​ನಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ: ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ 100 ಕೋಟಿ ರೂ. ಮಂಜೂರು

ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿಜಿ, ಹಿರೇಮಠದ ಶಿವಾನಂದ ಸ್ವಾಮೀಜಿ, ವಿವೇಕಾನಂದ ಆಶ್ರಮದ ವೀರೇಶನಂದ ಶ್ರೀ ಸೇರಿದಂತೆ ಹಲವು ಮಠಾಧೀಶರು ಭಾಗಿಯಾಗಿದ್ದರು. ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಜಿಲ್ಲಾಧಿಕಾರಿಗೆ ಖಂಡನೀಯ ಪತ್ರ ಸಲ್ಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:58 pm, Wed, 4 December 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್