ಬೆಳಗಾವಿ, ಡಿಸೆಂಬರ್ 04: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯವಾಗಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ (arrested). ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ(38) ಬಂಧಿತ ವ್ಯಕ್ತಿ.
ಸತೀಶ್ ಜಾರಕಿಹೊಳಿ ಬೆಂಬಲಿಗ ವಿಜಯ ತಳವಾರ್ ಎಂಬುವರಿಂದ ಕೇಸ್ ದಾಖಲಾಗಿತ್ತು. ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿ ಬೆಳಗಾವಿಗೆ ಕರೆತಂದ ಪೊಲೀಸರು ಬೆಳಗಾವಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.
ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ಮಾಡಲಾಗಿದೆ. ಇದೀಗ ಪ್ರತಿಭಟನೆ ನಡೆಸಿದ ಹಿಂದೂ ಹಿತರಕ್ಷಣಾ ಸಮಿತಿ ಮೇಲೆ ಕೇಸ್ ಹಾಕಲಾಗಿದೆ. ರಸ್ತೆಗೆ ಇಳಿದಿದ್ದ ಹಿಂದೂ ಕಾರ್ಯಕರ್ತರು ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದರು. ರಸ್ತೆ ತಡೆ ಹಿಡಿದಿದ್ದರಿಂದ ಆಂಬುಲೆನ್ಸ್ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ರಾಕ್ಷಸಿಯ ಕೃತ್ಯಗಳು ಬಯಲು
ಬ್ಯಾರಿಕೇಡ್ ದಾಟಿ ಬಂದು ಕಾರ್ಯಕರ್ತರು ರಸ್ತೆ ತಡೆದಿದ್ದರು. ಕರ್ತವ್ಯದಲ್ಲಿದ್ದ ಪೊಲೀಸರ ಜೊತೆಗೂ ಪುಂಡಾಟ ಮೆರೆದಿದ್ದರು. ಸದ್ಯ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾ ಆಯೋಜಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಇನ್ನು ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ತುಮಕೂರಿನಲ್ಲಿ ಹಿಂದೂ ಸಂಘಟನೆ ಹಾಗೂ ಸ್ವಾಮೀಜಿಗಳು ಪ್ರತಿಭಟನೆ ಮಾಡಿದ್ದಾರೆ. ತುಮಕೂರಿನ ಟೌನ್ ಹಾಲ್ ಸರ್ಕಲ್ನಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ಮಾಡಲಾಗಿದೆ.
ಇದನ್ನೂ ಓದಿ: ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ: ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ 100 ಕೋಟಿ ರೂ. ಮಂಜೂರು
ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿಜಿ, ಹಿರೇಮಠದ ಶಿವಾನಂದ ಸ್ವಾಮೀಜಿ, ವಿವೇಕಾನಂದ ಆಶ್ರಮದ ವೀರೇಶನಂದ ಶ್ರೀ ಸೇರಿದಂತೆ ಹಲವು ಮಠಾಧೀಶರು ಭಾಗಿಯಾಗಿದ್ದರು. ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಜಿಲ್ಲಾಧಿಕಾರಿಗೆ ಖಂಡನೀಯ ಪತ್ರ ಸಲ್ಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:58 pm, Wed, 4 December 24