AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandini Milk Price: ನಂದಿನಿ ಹಾಲಿನ ದರ ಲೀಟರ್​ಗೆ 3 ರೂ. ಹೆಚ್ಚಳ: ಆಗಸ್ಟ್ 1ರಿಂದ ಜಾರಿ

ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

Nandini Milk Price: ನಂದಿನಿ ಹಾಲಿನ ದರ ಲೀಟರ್​ಗೆ 3 ರೂ. ಹೆಚ್ಚಳ: ಆಗಸ್ಟ್ 1ರಿಂದ ಜಾರಿ
ಪ್ರಾತಿನಿಧಿಕ ಚಿತ್ರ
Shivaraj
| Edited By: |

Updated on:Jul 21, 2023 | 9:42 PM

Share

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ಲೀಟರ್​ಗೆ ಹಾಲಿಗೆ 5 ರೂ. ಹೆಚ್ಚಳಕ್ಕೆ KMF ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅಂತಿಮವಾಗಿ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ.

ನಂದಿನ ಹಾಲಿನ ದರ ಪರಿಷ್ಕರಣೆ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಹಾಲು ಒಕ್ಕೂಟಗಳ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗಿದೆ. ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು ಮತ್ತು ಕೆಎಂಎಫ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: Nandini Milk: ನಮ್ಮ ಹೆಮ್ಮೆಯ ನಂದಿನಿ ಹಾಲು -ಸರಿಯಾದ ಬಣ್ಣದ ಪ್ಯಾಕೆಟ್ ಆರಿಸಿಕೊಳ್ಳುವುದರ ಹಿಂದಿದೆ ಜಾಣತನ! ಎಲ್ಲದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲ

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್‌ ಪ್ರತಿಕ್ರಿಯಿಸಿದ್ದು, ನಂದಿನಿ ಹಾಲಿನ ದರ 3 ರೂಪಾಯಿ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರೆ. ಆಗಸ್ಟ್‌ 1ರಿಂದ ಜಾರಿಗೆ ಬರಲಿದೆ. ಈ ಬಗ್ಗೆ ಕ್ಯಾಬಿನೆಟ್​​ನಲ್ಲಿಟ್ಟು ಒಪ್ಪಿಗೆ ಪಡೆದು ನಿರ್ಧಾರ ಪ್ರಕಟವಾಗಲಿದೆ. ನಾವು 5 ರೂ ಗೆ ಬೇಡಿಕೆ ಇಟ್ಟಿದ್ದೆವು. ಹಾಲಿನ ಉಪ ಉತ್ಪನ್ನಗಳ ದರ ನಂತರ ತೀರ್ಮಾನ ಆಗಲಿದೆ. ಹಾಲಿನ ಪುಡಿ ದರ ಏರಿಕೆಗೂ ಪ್ರಸ್ತಾವನೆ ಇಡಲಾಗಿದೆ ಎಂದು ಹೇಳಿದರು.

KMF ನಿರ್ದೇಶಕ ಹೆಚ್.ಡಿ.ರೇವಣ್ಣ ಮಾತನಾಡಿ, ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂಪಾಯಿ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರೆ. ಪ್ರತಿ ಲೀಟರ್​ಗೆ 5 ರೂ. ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿದ್ದೆವು. ಆದರೆ ಅಂತಿಮವಾಗಿ 3 ರೂ. ಹೆಚ್ಚಳಕ್ಕೆ ಸಭೆಯಲ್ಲಿ ಸಿಎಂ ಸಮ್ಮತಿಸಿದ್ದಾರೆ. ಹೆಚ್ಚಳವಾದ 3 ರೂ. ಹಾಲು ಉತ್ಪಾದಕರಿಗೆ ಹೋಗಬೇಕು ಅಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಸಿಎಂ ಜೊತೆ ಸಭೆ ಬಳಿಕ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ಹೇಳಿಕೆ ನೀಡಿದ್ದು, ಹಾಲು ಉತ್ಪಾದಕರ ಹಿತ ಕಾಯಲು ದರ ಏರಿಕೆ ಅನಿವಾರ್ಯ. ನಮ್ಮ ರಾಜ್ಯ ಅತಿ ಕಡಿಮೆ ದರದಲ್ಲಿ ಹಾಲು ಮಾರಾಟ ಮಾಡುತ್ತಿದ್ದೇವೆ. ಹಾಲು ಉತ್ಪಾದನಾ ದರ ಹೆಚ್ಚಾಗಿರುವುದರಿಂದ ರೈತರಿಗೆ ಹೊರೆ ಆಗುತ್ತಿದೆ. ದರ ಏರಿಕೆ ಅನಿವಾರ್ಯತೆ ಬಗ್ಗೆ ಸಭೆಯಲ್ಲಿ ಸಿಎಂಗೆ ಮನವರಿಕೆ ಮಾಡಿದೆವು. ಹೀಗಾಗಿ ನಂದಿನ ಹಾಲಿನ ದರ ಏರಿಕೆಗೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದರು.

ಕ್ಷೀರ ಭಾಗ್ಯ ಲಾಂಚ್ ಆಗಿ 10 ವರ್ಷ ಆದ ಹಿನ್ನಲೆ ದಶಮಾನೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ.  ಮುಂದಿನ ಮಂತ್ರಿಮಂಡಲದಲ್ಲಿ ತೀರ್ಮಾನ ಕೈಗೊಳ್ಳೋದಾಗಿ ಹೇಳಿದ್ದಾರೆ. ನಾವು 39 ರೂ. ಪ್ರತೀ ಲೀಟರ್​ ಹಾಲು ಮಾರಾಟ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಹಾಲಿನ ದರ ಏರಿಕೆ ಆಗಿದೆ. ಹೀಗಾಗಿ ಉತ್ಪಾದಕರ ಹಿತ ಕಾಯಲು ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Fri, 21 July 23

ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ