AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 2025 ಜನವರಿಯೊಳಗೆ ರಾಜಕಾಲುವೆ ಮುಗಿಸಲು ಯೋಜಿಸಲಾಗಿದ್ದು, ಬೆಂಗಳೂರಲ್ಲಿ ಮೊದಲನೇ ಮಳೆಯಲ್ಲಿ ಸೊಳ್ಳೆಗಳ ಪ್ರಮಾಣ ಹೆಚ್ಚಾಗಲಿದ್ದು ಡೆಂಘೀ ಕೇಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್
ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್
Follow us
ಗಂಗಾಧರ​ ಬ. ಸಾಬೋಜಿ
|

Updated on: May 13, 2024 | 4:31 PM

ಬೆಂಗಳೂರು, ಮೇ 13: ಕಳೆದೊಂದು ವಾರದಿಂದ ಸೀಮಿತ ಸ್ಥಳಗಳಲ್ಲಿ ಮಳೆ (Rain) ಆಗುತ್ತಿದೆ. ಬೆಂಗಳೂರಿನ ಎಲ್ಲಾ ಕಡೆ ಮಳೆ ಬರುತ್ತಿಲ್ಲ. ನಾಲ್ಕೈದು ದಿನದಿಂದ ಒಟ್ಟು 196 ಕಡೆ ಪ್ರವಾಹ ಸ್ಥಿತಿ ಆಗಿದೆ. 10 ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಆದರೆ ಸ್ವಲ್ಪ ಸಮಯದ ನಂತರ ನೀರು ಹೋಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar GiriNath) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 171 ದೊಡ್ಡ ಮರಗಳು, 690 ಕೊಂಬೆಗಳು ಬಿದ್ದಿವೆ. 50 ಬಿಟ್ಟು ಉಳಿದ ಕಡೆ ಎಲ್ಲಾ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

ದೊಡ್ಡ ಮರಗಳನ್ನ ಇವತ್ತು ಕಟ್ ಮಾಡಲಾಗುತ್ತಿದೆ. ಮೂರು ದಿನದಿಂದ 39 ತಂಡಗಳು ಕೆಲಸ ಮಾಡುತ್ತಿವೆ,. 63 ಕಡೆ ಎಇಇ, ಬಿಬಿಎಂಪಿಯ ನೇತೃತ್ವದಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಮಾಹಿತಿ ಹೋಗುತ್ತಿದೆ. ಬೇರೆ ಬೇರೆ ಇಲಾಖೆಗಳ ಜೊತೆಗೂ ಸಂವಹನ ಆಗುತ್ತಿದೆ. ವಲಯಮಟ್ಟದಲ್ಲೂ ಕೂಡ ಸಭೆಗಳನ್ನ ನಡೆಸಲಾಗುತ್ತಿದೆ. ಸಮಸ್ಯೆ ಆಗುವ 74 ಕಡೆ ಶಾಶ್ವತ ಪರಿಹಾರ ಆಗಿಲ್ಲ. ತಾತ್ಕಾಲಿಕ ಪರಿಹಾರ ಮಾತ್ರ ಮಾಡಿದ್ದೇವೆ ಎಂದರು.

ಇದನ್ನೂ ಓದಿ: Bengaluru Rain Today: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಮಳೆ; ಇನ್ನೂ 4 ದಿನ ಮಳೆಯ ಮುನ್ಸೂಚನೆ

ಪಂಪ್, ಜೆಸಿಬಿ ಇಟ್ಟು ಕೆಲಸ ಮಾಡುತ್ತಿದೆ. ವಿಶ್ವಬ್ಯಾಂಕ್ ಲೋನ್​​ನಲ್ಲೂ ಕೂಡ ಆ ಕೆಲಸಗಳನ್ನ ಸೇರಿಸಲಾಗಿದೆ. ಎಲ್ಲಿಲ್ಲಿ ಸಮಸ್ಯೆಯಿದೆ ನಮ್ಮ ಅಧಿಕಾರಿಗಳು ಚೆಕ್ ಮಾಡಿ ರಿಪೋರ್ಟ್ ಕೊಟ್ಟಿದ್ದಾರೆ.

30 ಲಕ್ಷ ರೂ. ಮೀಸಲು

ಮಳೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳು ಆಗಿವೆ. ಮಳೆ ಸಂಬಂಧ 30 ಲಕ್ಷ ರೂ. ಮೀಸಲು ಇಟ್ಟಿದ್ದೇವೆ. ಬ್ರ್ಯಾಂಡ್‌ ಬೆಂಗಳೂರಿನಡಿ ಕೂಡ 10 ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ. ಮಳೆಗಾಲದ ಸಿದ್ಧತೆಗಳಿಗೆ ಪ್ಲಾನ್ ಆಧರಿಸಿ ಫಂಡ್ ಇಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಳೆಗಾಲದ ವೇಳೆ ಧರೆಗುರುಳುವ ಮರದ ರೆಂಬೆ, ಕೊಂಬೆಗಳನ್ನು ತೆರವುಗೊಳಿಸಲು 39 ತಂಡಳನ್ನು ನಿಯೋಜಿಸಿದ ಬಿಬಿಎಂಪಿ

2023 ರಿಂದಲೇ ರಾಜಕಾಲುವೆ ಕೆಲಸ ಶುರು ಮಾಡಿದ್ದೇವೆ. 2025 ಜನವರಿಯೊಳಗೆ ಮುಗಿಸಲು ಪ್ಲಾನ್ ಆಗಿದೆ. ಬೇರೆ ಬೇರೆ ಇಲಾಖೆಗಳ ಕಾಮಗಾರಿಗಳು ಕೂಡ ನಡೆಯುತ್ತಿದೆ. ಮೇ 15 ರವರೆಗೆ ಡೆಡ್ ಲೈನ್ ಕೊಟ್ಟಿದ್ದೇವೆ. ಈಗ ಮೇ 20ರೊಳಗೆ ಅವರ ಕೆಲಸಗಳನ್ನ ಮುಗಿಸಬೇಕು ಎಂದಿದ್ದಾರೆ.

ಡೆಂಘೀ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ

ಬೆಂಗಳೂರಲ್ಲಿ ಡೆಂಘೀ ಕೇಸ್ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಮೊದಲನೇ ಮಳೆಯಲ್ಲಿ ಸೊಳ್ಳೆಗಳ ಪ್ರಮಾಣ ಹೆಚ್ಚಾಗುತ್ತೆ. ಹೀಗಾಗಿ ಡೆಂಘೀ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ. ಸದ್ಯ ನಾವು ಈಗಾಗಲೇ ಲಾರ್ವ ಕಂಟ್ರೋಲ್​​ಗೆ ಕ್ರಮ ಕೈಗೊಂಡಿದ್ದೇವೆ. ನೀರು ನಿಲ್ಲುವ ಪ್ರದೇಶಗಳಲ್ಲಿ ನಿಗಾ ಇಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?