ಅರೆಕಾಲಿಕ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ
ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು, ಕಿರಿಯ ತಾಂತ್ರಿಕ ಶಾಲೆಯ ಅರೆಕಾಲಿಕ ಉಪನ್ಯಾಸಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಅರೆಕಾಲಿಕ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಅರೆಕಾಲಿಕ ಉಪನ್ಯಾಸಕರಿಗೆ 5 ರಿಂದ 8 ಸಾವಿರ ರೂ. ವರೆಗೆ ಗೌರವಧನವನ್ನು ಹೆಚ್ಚಿಸಲಾಗಿದೆ.
ಬೆಂಗಳೂರು, ಆಗಸ್ಟ್ 12: ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆ ಮೂಲಕ ಅರೆಕಾಲಿಕ ಉಪನ್ಯಾಸಕರಿಗೆ (lecturers) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು, ಕಿರಿಯ ತಾಂತ್ರಿಕ ಶಾಲೆಯ, ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕರಿಗೆ ₹7,500-10,000 ರೂ. ಕನಿಷ್ಠ ವೇತನ ನಿಗದಿ ಮಾಡಿದೆ. ಇನ್ನು ಅನುದಾನಿತ ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕರ ವೇತನ ₹10,000-15,000 ರೂ. ಹೆಚ್ಚಿಸಲಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜು ಹಾಗೂ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳ ಅರೆಕಾಲಿಕ ಉಪನ್ಯಾಸಕರುಗಳಿಗೆ ಮಾಸಿಕ ಸಂಭಾವನೆಯನ್ನು ಕ್ರಮವಾಗಿ 7,500 ದಿಂದ 10,000 ರೂ. ಹೆಚ್ಚಿಸಲಾಗಿದೆ.
ಇದನ್ನೂ ಓದಿ: ಕರಾಳ ಸ್ವಾತಂತ್ರ್ಯ ದಿನಾಚರಣೆ ಕೈಬಿಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಎಸ್ ಸುರೇಶ್ ಕಿವಿ ಮಾತು
ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಮಾಸಿಕ ಗೌರವ ಧನವನ್ನು 7.500 ರಿಂದ 12.500 ರೂ. ಹಾಗೂ ಸರ್ಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರುಗಳ ಮಾಸಿಕ ಗೌರವ ಧನವನ್ನು 10,000 ಗಳಿಂದ 15,000 ರೂ. ಹೆಚ್ಚಿಸಲಾಗಿದೆ.
ಇದನ್ನೂ ಓದಿ: ಪದವಿ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಉನ್ನತ್ತ ಶಿಕ್ಷಣ ಇಲಾಖೆ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ ಮಾಸಿಕ ಕಾರ್ಯಭಾರ 32 ಗಂಟೆಗೆ, ಗರಿಷ್ಠ ಕಾರ್ಯಭಾರಕ, ಮಾಸಿಕ ಭತ್ಯೆ ರೂ.15000 ರೂ. 200 ರೂ. ಗಳನ್ನು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಕಿರಿಯ ತಾಂತ್ರಿಕ ಶಾಲೆಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ ಮಾಸಿಕ ಕಾರ್ಯಭಾರ 36 ಗಂಟೆಗೆ ಗರಿಷ್ಠ ಕಾರ್ಯಭಾರಕ್ಕೆ, ಮಾಸಿಕ ಭತ್ಯೆ ರೂ.12500 ನಿಗದಿಪಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:55 pm, Mon, 12 August 24