Grama Nyayalaya: ಕರ್ನಾಟಕದಲ್ಲಿ 400 ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಚಿಂತನೆ
ತಳಮಟ್ಟದ ಜನರಿಗೆ ನ್ಯಾಯವನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ 400 ಅಥವಾ ಅದಕ್ಕಿಂತ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟವು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಗುರುವಾರ ಮಧ್ಯಾಹ್ನ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು, ಅ.19: ತಳಮಟ್ಟದ ಜನರಿಗೆ ನ್ಯಾಯವನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ 400 ಅಥವಾ ಅದಕ್ಕಿಂತ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು (Grama Nyayalaya) ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಇಂದು ನಡೆಯುವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ.
ಇದು ತಳಮಟ್ಟದ ಜನರಿಗೆ ನ್ಯಾಯವನ್ನು ಒದಗಿಸುವ ಸ್ಪಷ್ಟ ಹೆಜ್ಜೆ ಇದಾಗಿದೆ. ಸ್ಥಳೀಯ ವಿವಾದಗಳು ಮತ್ತು ಕಾನೂನು ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಬೇಕು ಎಂದು ಇದರ ಚಿಂತನೆಯಾಗಿದೆ. ಸುಮಾರು 100 ಕೋಟಿ ವೆಚ್ಚ ತಗಲುವ ಅಂದಾಜು ಹಾಕಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಗ್ರಾಮಗಳಲ್ಲಿ ಜನರಿಗೆ ನ್ಯಾಯ ದೊರಕಿಸಲು ಅಧಿಕಾರಿ ವರ್ಗದ ಮುಖ್ಯ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿ, ಕಂದಾಯ ಕಾರ್ಯದರ್ಶಿ ಮತ್ತು ಇತರ ಪಾಲುದಾರರೊಂದಿಗೆ ಸಭೆ ನಡೆಸಿದ್ದಾರೆ. 8,000ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿದ್ದು, ಪ್ರತಿ ಗ್ರಾಮಕ್ಕೆ ನ್ಯಾಯಾಲಯ ಬರಲು ವರ್ಷಗಳೇ ಬೇಕುತ್ತದೆ.
ಇದನ್ನೂ ಓದಿ: ಸರ್ಕಾರದಿಂದ ಹೊಸ ಪ್ರಯೋಗ, ಆಹಾರ ಇಲಾಖೆಯಿಂದ ಮನೆ ಮನೆಗೆ ಪಡಿತರ ಸರಬರಾಜು
ರಾಷ್ಟ್ರದಾದ್ಯಂತ ಗ್ರಾಮಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ತೆಗೆದುಕೊಳ್ಳಲು ಪ್ರಸ್ತಾಪಿಸಲಾಯಿತು ಮತ್ತು ಕರ್ನಾಟಕವು ಪ್ರಾಯೋಗಿಕ ಯೋಜನೆಯಾಗಿ ಎರಡು ನ್ಯಾಯಾಲಯಗಳನ್ನು ಪ್ರಾರಂಭಿಸಿತು. ಅದು ಇನ್ನೂ ಕಾರ್ಯನಿರ್ವಹಿಸುತ್ತಿದೆ.
ಒಂದು ನೀತಿ ವಿಷಯವಾಗಿ, ಕೇಂದ್ರ ಸರ್ಕಾರವು ಗ್ರಾಮ ನ್ಯಾಯಾಲಯಗಳನ್ನು ಪ್ರೋತ್ಸಾಹಿಸುತ್ತದೆ. ಇದನ್ನು ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವೆಂದು ಪರಿಗಣಿಸಲಾಗುತ್ತದೆ. ಸಣ್ಣ ವಿವಾದಗಳನ್ನು ಇತ್ಯರ್ಥಗೊಳಿಸಲು ಕ್ರಿಮಿನಲ್ ಮತ್ತು ಸಿವಿಲ್ ನ್ಯಾಯವ್ಯಾಪ್ತಿಗಳನ್ನು ಹೊಂದಿದೆ.
ಹಲವು ರಾಜ್ಯಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, 10 ರಾಜ್ಯಗಳಲ್ಲಿ 257 ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಮಧ್ಯಪ್ರದೇಶ 89 ಗ್ರಾಮ ನ್ಯಾಯಾಲಯಗಳನ್ನು ಹೊಂದಿದೆ, ರಾಜಸ್ಥಾನ 45, ಉತ್ತರ ಪ್ರದೇಶ 44, ಕೇರಳ 30, ಮಹಾರಾಷ್ಟ್ರ 23 ಮತ್ತು ಒಡಿಶಾ 19 ಇಂತಹ ನ್ಯಾಯಾಲಯಗಳನ್ನು ಹೊಂದಿದೆ.
ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ ನಂತರ, ನ್ಯಾಯಾಲಯಗಳ ಸ್ಥಾಪನೆಗೆ ಕೆಲವು ತಿಂಗಳುಗಳು ಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ. 400 ಗ್ರಾಮ ನ್ಯಾಯಲಯಗಳು ಕಾರ್ಯರೂಪಕ್ಕೆ ಬಂದ ನಂತರ, ಕರ್ನಾಟಕವು ರಾಷ್ಟ್ರದಾದ್ಯಂತ ಅತಿ ಹೆಚ್ಚು ಗ್ರಾಮ ನ್ಯಾಯಾಲಯಗಳನ್ನು ಹೊಂದಿರುವ ರಾಜ್ಯವಾಗಿ ಹೊರಹೊಮ್ಮಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ