ಬೆಂಗಳೂರು, ಜನವರಿ 05: ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ ಹಿನ್ನೆಲೆ ರಾಜ್ಯ ಸರ್ಕಾರದಿಂದ ಪ್ರತಿ ರೈತರಿಗೆ ಬರ ಪರಿಹಾರ (crop compensation) ಬಿಡುಗಡೆ ಮಾಡಲಾಗಿದೆ. ಎಸ್ಡಿಆರ್ಎಫ್ ಪರಿಹಾರ ನಿಧಿ ಅಡಿಯಲ್ಲಿ ಸರ್ಕಾರದಿಂದ 105 ಕೋಟಿ ರೂ. ಅನುದಾನ ನೀಡಲಾಗಿದ್ದು, ಪ್ರತಿ ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಕೇಂದ್ರದಿಂದ ಯಾವುದೇ ಪರಿಹಾರ ಬಾರದ ಹಿನ್ನೆಲೆ ರಾಜ್ಯ ಸರ್ಕಾರ ರೈತರಿಗೆ ಪ್ರಾಥಮಿಕ ಪರಿಹಾರ ನೀಡಿದೆ.
ಪ್ರತಿ ರೈತರಿಗೆ ಗರಿಷ್ಟ 2000 ರೂ. ಪರಿಹಾರ ಹಣ ಬಿಡುಗಡೆಗೆ ಸರ್ಕಾರ ಅನುಮೋದಿಸಿದ್ದು, ಷರತ್ತಿಗೆ ಒಳಪಟ್ಟು ಅನುದಾನ ಬಿಡುಗಡೆ ಮಾಡಿದೆ.
ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ರೂ. ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆಲಾಗಿತ್ತು. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು. 21-9-2023 ರಂದು ಕೇಂದ್ರಕ್ಕೆ ಮೊದಲ ಮನವಿ ಮಾಡಲಾಗಿತ್ತು.
ಇದನ್ನೂ ಓದಿ: ರೈತರಿಗೆ ಗುಡ್ನ್ಯೂಸ್: 1ನೇ ಕಂತಿನ ಬೆಳೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕೇಂದ್ರದ ತಂಡ 4/10 ರಿಂದ 9/10 ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಲಾಗಿದೆ. ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ಇದೆ. 4663 ಕೋಟಿ ರೂ. ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಆದರೆ ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ಮಾಡಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ ಎಂದು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:16 pm, Fri, 5 January 24