ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಹತ್ವದ ಸೂಚನೆ ನೀಡಿದ ದೇಗುಲ ಸಮಿತಿ

ಫೆಂಗಲ್ ಚಂಡಮಾರುತದಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಂಗಳೂರಿನಲ್ಲಿ ನೆರೆ, ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಹತ್ವದ ಸೂಚನೆ ನೀಡಿದ ದೇಗುಲ ಸಮಿತಿ
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಹತ್ವದ ಸೂಚನೆ ನೀಡಿದ ದೇಗುಲ ಸಮಿತಿ
Edited By:

Updated on: Dec 02, 2024 | 9:40 PM

ಮಂಗಳೂರು, ಡಿಸೆಂಬರ್​ 02: ಫೆಂಗಲ್ ಚಂಡಮಾರುತದ ಎಫೆಕ್ಟ್ (Cyclone Fengal) ಕರುನಾಡಿಗೂ ತಟ್ಟಿದೆ. ಬೆಂಗಳೂರಲ್ಲಿ ಮಳೆ ಧೋ ಅಂತಾ ಸುರೀತಿದೆ. ಇತ್ತ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮಧ್ಯೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಕುಮಾರಧಾರ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಆ ಮೂಲಕ ತೀರ್ಥಸ್ನಾನಕ್ಕೂ ಚಂಡಮಾರುತದ ಎಫೆಕ್ಟ್ ತಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಾಕಷ್ಟು ಪ್ರವಾಸಿಗಳು ಭೇಟಿ ನೀಡುತ್ತಿದ್ದಾರೆ. ಚಂಡಮಾರುತದ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಪುತ್ತೂರು ಉಪ ಆಯುಕ್ತ ಜುಬಿನ್ ಮೊಹಪಾತ್ರ ಸೂಚಿಸಿದ್ದಾರೆ.

ನಾಳೆ ನಡೆಯಬೇಕಿದ್ದ ಬಹುಸಂಸ್ಕೃತಿ ಉತ್ಸವ ಮುಂದೂಡಿಕೆ

ಇನ್ನು ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ನಾಳೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ ಬಹುಸಂಸ್ಕೃತಿ ಉತ್ಸವವನ್ನು ಮುಂದೂಡಲಾಗಿದೆ. ಕಾರ್ಯಕ್ರಮ ಮುಂದೂಡಿಕೆ ಹಿನ್ನೆಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಪ್ರವಾಸ ರದ್ದಾಗಿದೆ.

ಇದನ್ನೂ ಓದಿ: Mangaluru Rains: ಫೆಂಗಲ್ ಚಂಡಮಾರುತದ ಆರ್ಭಟ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾಡಳಿತ ಸೇರಿದಂತೆ ವಿವಿಧ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಫೆಂಗಲ್ ಚಂಡಮಾರುತದಿಂದ ಮಳೆ ಹಿನ್ನೆಲೆ ಕಾರ್ಯಕ್ರಮ ಮುಂದೂಡಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಪ್ರಯಾಣಿಕರ ಪರದಾಟ

ಫೆಂಗಲ್ ಚಂಡಮಾರುತದಿಂದಾಗಿ ಮಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ನಗರದ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಚರಂಡಿಗಳು ಬ್ಲಾಕ್​ ಆಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಕೊಟ್ಟಾರ ಚೌಕಿಯಲ್ಲಿ ಕೃತಕ ನೆರೆ ಸೃಷ್ಟಿಯಿಂದ ಟ್ರಾಫಿಕ್ ​ಜಾಮ್ ಉಂಟಾಗಿತ್ತು. ಸುರತ್ಕಲ್, ಮುಲ್ಕಿ, ಉಡುಪಿ ಕಡೆ ಹೋಗುವ ಮತ್ತು ಮಂಗಳೂರಿಗೆ ಬರುವ ಪ್ರಯಾಣಿಕರು ಪರದಾಡುವಂತಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ನಾಳೆ ರಜೆ ನೀಡಿ ಡಿಸಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ

ಚಿಕ್ಕಮಗಳೂರು ಕಾಫಿನಾಡಿನಲ್ಲಿ ಫೆಂಗಲ್ ಚಂಡಮಾರುತದ‌‌ ಆರ್ಭಟ ಜೋರಾಗಿದ್ದು, ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ಸುರಿದಿದೆ. ದಕ್ಷಿಣ ಕನ್ನಡ ಟು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಾಹನ ಸವಾರರ ಪರದಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us