ನಿರಂತರ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆ ಬಾಗಿಲಿಗೆ ಬರಲಿದ್ದಾರೆ ಟ್ರಾಫಿಕ್ ಪೊಲೀಸರು
ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಅದಾಗ್ಯೂ, ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ಅಮಾನತಿಗೆ ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದರು. ಇದೀಗ, ಇನ್ನೂ ಒಂದು ಮುಂದೆ ಹೆಜ್ಜೆ ಮುಂದಿಟ್ಟ ಪೊಲೀಸರು, ನಿರಂತರ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಮನೆಬಾಗಿಲಿಗೆ ಬಂದ ದಂಡ ವಸೂಲಿ ಮಾಡಲು ಮುಂದಾಗಿದ್ದಾರೆ.
ಬೆಂಗಳೂರು, ಫೆ.9: ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು (Traffic Police) ವಾಹನ ಸವಾರರಲ್ಲಿ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಅದಾಗ್ಯೂ, ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ಅಮಾನತಿಗೆ ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದರು. ಇದೀಗ, ಪೊಲೀಸರು ಇನ್ನೂ ಒಂದು ಮುಂದೆ ಹೆಜ್ಜೆ ಮುಂದಿಟ್ಟಿದ್ದು, ನಿರಂತರ ಸಂಚಾರ ನಿಯಮ ಉಲ್ಲಂಘನೆ (Traffic Rules Violation) ಮಾಡುವವರಿಗೆ ಕಂಟಕ ಕಾದಿದೆ.
ನಿರಂತರ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ಅಂತಹ ವಾಹನ ಸವಾರರ ಮನೆ ಬಾಗಿಲಿಗೆ ಬಂದು ದಂಡದ ಹಣ ವಸೂಲಿ ಮಾಡಲಿದ್ದಾರೆ. ಆದರೆ ಪೊಲೀಸರು ಎಲ್ಲಾ ವಾಹನ ಸವಾರರ ಮನೆಬಾಗಿಲಿಗೆ ಬರುವುದಿಲ್ಲ. ನಿಮ್ಮ ವಾಹನ 50 ಸಾವಿರಕ್ಕೂ ಅಧಿಕ ದಂಡದ ಹೊಂದಿದ್ದರೆ ಮಾತ್ರ ಪೊಲೀಸರು ಮನೆಗೆ ಬಂದು ದಂಡ ವಸೂಲಿ ಮಾಡಲಿದ್ದಾರೆ.
2300 ಕ್ಕೂ ಅಧಿಕ ವಾಹನಗಳು 50 ಸಾವಿರಕ್ಕೂ ಅಧಿಕ ದಂಡ ಹೊಂದಿದ್ದು, ಈಗಾಗಲೇ ಹಲವು ವಾಹನ ಮಾಲೀಕರಿಂದ ದಂಡ ಸಂಗ್ರಹ ಮಾಡಲಾಗಿದೆ. ಟ್ರಾಫಿಕ್ ಫೈನ್ ಕಟ್ಟದಿದ್ದರೆ ಅಂತಹ ವಾಹನ ಸವಾರರ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದು, ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಲಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಬಾಲ ಬಿಚ್ಚಿದ ರೌಡಿಗಳು, ಪೊಲೀಸರ ಮೇಲೆ ರೌಡಿಯಿಸಂ, ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ; ವಿಡಿಯೋ ವೈರಲ್
ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ (Driving License) ಅಮಾನತು ಮಾಡುವಂತೆ ಟ್ರಾಫಿಕ್ ಪೊಲೀಸ್ (Traffic Police) ಇಲಾಖೆ ಕಳೆದ ತಿಂಗಳಷ್ಟೇ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿತ್ತು.
ಟ್ರಾಫಿಕ್ ನಿಯಮ ಉಲ್ಲಂಘಟನೆ ಮಾಡಿ ಸಂಚರಿಸುವುದರಿಂದ ಅಪಘಾತದಂತಹ ಅವಘಡಗಳು ಸಂಭವಿಸುತ್ತಿದ್ದು, ಅನೇಕರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರಿಗೆ ಗಾಯಗಳಾಗಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಹೀಗಾಗಿ ಟ್ರಾಫಿಕ್ ನಿಯಮ ಪಾಲಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವವರಿಂದ ದಂಡ ವಸೂಲಿ ಕೂಡ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಂತೂ ರೂಲ್ಸ್ ಬ್ರೇಕ್ ಪ್ರಕರಣಗಳು ಬಹಳಷ್ಟು ಆಗುತ್ತಿವೆ. ಇದೇ ಕಾರಣಕ್ಕೆ ಪೊಲೀಸರು ಮಾತ್ರವಲ್ಲದೆ, ಕೆಲವು ಕಾಲೇಜು ವಿದ್ಯಾರ್ಥಿಗಳು ಬೆಂಗಳೂರಿನ ಸಿಗ್ನಲ್ಗಳಲ್ಲಿ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಂಗ್ ರೂಟ್ನಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ವಡೆ ಕೊಟ್ಟು ವು ರಾಂಗ್ ರೂಟ್ನಲ್ಲಿ ಬಂದರೆ ನಿಮ್ಮ ಮನೆಯವರು ತಿಥಿ ವಡೆ ತಿನ್ನಬೇಕಾಗುತ್ತದೆ ಎಂದು ಹೇಳಿ ಟ್ರಾಫಿಕ್ ನಿಯಮ ಪಾಲಿಸುವಂತೆ ಮನವಿ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ