ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು: ಸ್ಪೀಕರ್

Belagavi winter session: ಬೆಳಗಾವಿಯ ಸುವರ್ಣಸೌಧದಲ್ಲಿ ಸ್ಪೀಕರ್​​ ಯು.ಟಿ.ಖಾದರ್ ಮಾತನಾಡಿ, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು: ಸ್ಪೀಕರ್
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು: ಸ್ಪೀಕರ್
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Oct 18, 2024 | 3:05 PM

ಬೆಳಗಾವಿ, ಅಕ್ಟೋಬರ್​ 18: ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ (winter session) ನಡೆಯಲಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸ್ಪೀಕರ್​​ ಯು.ಟಿ.ಖಾದರ್ ಹೇಳಿದ್ದಾರೆ. ನಗರದ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಇನ್ನಷ್ಟು ಚೆನ್ನಾಗಿ ಅಧಿವೇಶನ ಮಾಡಲು ಸಿದ್ಧತೆ ನಡೆದಿದೆ. ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಎಲ್ಲರೂ ಸುವರ್ಣ ವಿಧಾನಸೌಧಕ್ಕೆ ಬರಬೇಕು ಎಂದ ಸ್ಪೀಕರ್​​ ಯು.ಟಿ.ಖಾದರ್

ಜನಪ್ರತಿನಿಧಿಗಳಿಗೆ ಮಾತ್ರ ವಿಧಾನಸೌಧ ಅಲ್ಲಾ. ಈ ಭಾಗದ ಜನರಿಗೂ ನಮ್ಮ ವಿಧಾನಸೌಧ ಅನ್ನೋ ಭಾವನೆ ಮೂಡಬೇಕು. ಹೀಗಾಗಿ ಸುವರ್ಣ ವಿಧಾನಸೌಧಕ್ಕೆ ಎಲ್ಲರೂ ಬರಬೇಕು. ಸುಲಭದಲ್ಲಿ ಪಾಸ್ ಸಿಗುವ ವ್ಯವಸ್ಥೆ ಮಾಡುತ್ತೇವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನೂ ಕರೆದುಕೊಂಡು ಬರವ ವ್ಯವಸ್ಥೆ ಕೂಡ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧವೇ ಶಾಸಕ ರಾಜು ಕಾಗೆ ವಾಗ್ದಾಳಿ!

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ನೂರನೇ ವರ್ಷದ ಸಂಭ್ರಮ ಮತ್ತು ಕಿತ್ತೂರು ಚೆನ್ನಮ್ಮ 200 ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಮಾಡುತ್ತೇವೆ. ಇನ್ನೊಂದು ತಿಂಗಳು ಸಮಯಾವಕಾಶವಿದ್ದು, ಎಲ್ಲವನ್ನೂ ಅಳವಡಿಸಿಕೊಳ್ಳುತ್ತೇವೆ. ಡಿಸೆಂಬರ್​​ 1ರ ಒಳಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದಿದ್ದಾರೆ.

ಇನ್ನು ಸುವರ್ಣ ಸೌಧದಲ್ಲಿ ಗಾಂಧಿ ಪ್ರತಿಮೆ ಈ ವರ್ಷ ಸ್ಥಾಪನೆ ಆಗಲಿದೆ. ಜೊತೆಗೆ ಸತ್ಯಮೇವ ಜಯತೆ ಧ್ಯೇಯವಾಕ್ಯ ಬರೆಸುವಂತೆ ಕಾನೂನು ಅನುಸಾರು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಡಿ.9ರಿಂದ ಅಧಿವೇಶನ ನಡೆಯಬಹುದು ಎಂದ ಬಸವರಾಜ ಹೊರಟ್ಟಿ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಬಹುತೇಕ ಡಿ.9ರಿಂದ 20ರ ವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಬಹುದು. ಇಂದು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ಈ ಹಿಂದೆ ಆದ ಅಸ್ತವ್ಯಸ್ಥ ಸರಿ‌ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಅಧಿವೇಶನಕ್ಕೆ ಏನೂ ತಯಾರಿ ಮಾಡಬೇಕು ಮಾಡಲು ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ