AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಶವದ ಮೇಲಿದ್ದ ಚಿನ್ನಾಭರಣ ಕಳ್ಳತನ; ಚಿಕ್ಕಬಳ್ಳಾಪುರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

ಚಿಕ್ಕಬಳ್ಳಾಪುರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಇಂದು (ಮೇ 2) ಬೆಳಗಿನ ಜಾವ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅಂದಾರ್ಲಹಳ್ಳಿ ಗ್ರಾಮದ 48 ವರ್ಷದ ಲಕ್ಷ್ಮಮ್ಮ ಎಂಬ ಮಹಿಳೆ ಮೃತಪಡುತ್ತಾರೆ.

ಮಹಿಳೆಯ ಶವದ ಮೇಲಿದ್ದ ಚಿನ್ನಾಭರಣ ಕಳ್ಳತನ; ಚಿಕ್ಕಬಳ್ಳಾಪುರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ
ಪ್ರಾತಿನಿಧಿಕ ಚಿತ್ರ
sandhya thejappa
|

Updated on: May 02, 2021 | 3:56 PM

Share

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ. ಕೆಲವರು ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪುತ್ತಿದ್ದರೆ, ಇನ್ನು ಕೆಲವರು ಬೆಡ್, ಆಕ್ಸಿಜನ್ ಕೊರತೆಯಿಂದ ಮೃತಪಡುತ್ತಿದ್ದಾರೆ. ಬೆಡ್ ಕೊರತೆ, ಆಕ್ಸಿಜನ್ ಕೊರತೆ ಸದ್ಯಕ್ಕೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಈ ನಡುವೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಇಂದು (ಮೇ 2) ಬೆಳಗಿನ ಜಾವ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅಂದಾರ್ಲಹಳ್ಳಿ ಗ್ರಾಮದ 48 ವರ್ಷದ ಲಕ್ಷ್ಮಮ್ಮ ಎಂಬ ಮಹಿಳೆ ಮೃತಪಡುತ್ತಾರೆ. ಶವ ಪಡೆಯಲು ಮೃತಳ ಸಂಬಂಧಿಕರು ಆಸ್ಪತ್ರೆಗೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತದೆ. ಈ ಅಮಾನವೀಯ ಘಟನೆಯನ್ನು ಖಂಡಿಸಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಮೃತಳ ಸಂಬಂಧಿಕರು ನಗರ ಠಾಣೆ ಪೊಲೀಸರಿಗೆ ದೂರನ್ನು ನೀಡಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು

ಚಿಕಿತ್ಸೆ ಸಿಗದೆ ಕೊರೊನಾ ವಾರಿಯರ್ ಸಾವು ಸೂಕ್ತ ಸಿಕಿತ್ಸೆ ಸಿಗದೆ ಕೊರೊನಾ ವಾರಿಯರ್ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಲೋಕೇಶ್ ಎಂಬುವವರು ಮಂಚೇನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದೆ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 2 ಹಂತದ ಕೊರೊನಾ ಲಸಿಕೆ ಪಡೆದಿದ್ದ ಹೆಡ್ ಕಾನ್ಸ್ಟೇಬಲ್ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ

ಚಕ್ರವರ್ತಿ ತೆಗೆದುಕೊಂಡ ಆ ಒಂದು ನಿರ್ಧಾರ ಅವರ ಬಿಗ್​ ಬಾಸ್​ ಜರ್ನಿಯನ್ನೇ ಬದಲಾಯಿಸಿತು

ಕೊರೊನಾ ರೋಗಿಗಳಿಗೆಂದು ‘ಆಟೋರಿಕ್ಷಾ’ ವನ್ನು ಉಚಿತ ‘ಆಂಬ್ಯುಲೆನ್ಸ್’ ಆಗಿ ಬದಲಾಯಿಸಿದ ವ್ಯಕ್ತಿ…

(theft of jewelry on woman corpse at chikkaballapur covid hospital)