ಬಿಜೆಪಿಯಲ್ಲೇ 3 ರೀತಿ ಅತೃಪ್ತರಿದ್ದಾರೆ; ದಿನೇಶ್ ವ್ಯಂಗ್ಯ

|

Updated on: Sep 07, 2019 | 11:11 AM

ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ಬಿಜೆಪಿಯಲ್ಲೇ 3 ರೀತಿಯ ಅತೃಪ್ತರು ಇದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ರಾಜೀನಾಮೆ ಕೊಟ್ಟು ಹೋಗಿರುವ ಅನರ್ಹ ಶಾಸಕರಿದ್ದಾರೆ. ಅಲ್ಲದೆ ಬಿಜೆಪಿಯಲ್ಲೇ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಮತ್ತು ಸಚಿವ ಸ್ಥಾನ ಸಿಕ್ಕಿದರೂ ಅಸಮಾಧಾನ ಹೊಂದಿರುವವರು ಇದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವಾಮ ಮಾರ್ಗದಿಂದ ಸರ್ಕಾರ ರಚಿಸಿದೆ. ಈ ಸರ್ಕಾರ […]

ಬಿಜೆಪಿಯಲ್ಲೇ 3 ರೀತಿ ಅತೃಪ್ತರಿದ್ದಾರೆ; ದಿನೇಶ್ ವ್ಯಂಗ್ಯ
Follow us on

ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ಬಿಜೆಪಿಯಲ್ಲೇ 3 ರೀತಿಯ ಅತೃಪ್ತರು ಇದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ರಾಜೀನಾಮೆ ಕೊಟ್ಟು ಹೋಗಿರುವ ಅನರ್ಹ ಶಾಸಕರಿದ್ದಾರೆ. ಅಲ್ಲದೆ ಬಿಜೆಪಿಯಲ್ಲೇ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಮತ್ತು ಸಚಿವ ಸ್ಥಾನ ಸಿಕ್ಕಿದರೂ ಅಸಮಾಧಾನ ಹೊಂದಿರುವವರು ಇದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ವಾಮ ಮಾರ್ಗದಿಂದ ಸರ್ಕಾರ ರಚಿಸಿದೆ. ಈ ಸರ್ಕಾರ ಹೆಚ್ಚು ದಿನ ಇರುವುದಿಲ್ಲ. ರಾಜ್ಯ ಬಿಜೆಪಿಯಲ್ಲಿ ಮೂರು ರೀತಿಯ ಅತೃಪ್ತರು ಇರುವ ಕಾರಣ ಮಧ್ಯಂತರ ಚುನಾವಣೆ ಯಾವಾಗ ಬೇಕಾದರೂ ಬರಬಹುದು ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Published On - 4:57 pm, Fri, 6 September 19