AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಮಾಡುವವರೇ ಇಲ್ಲ; ಪ್ರಯಾಣಿಕರು ನೇರವಾಗಿ ಮನೆಯತ್ತ

ರೈಲ್ವೆ ನಿಲ್ದಾಣದಲ್ಲಿ ಕೊರೊನಾ ಟೆಸ್ಟ್ ಮಾಡದೆ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಯಾವುದೇ ರೀತಿಯ ತಪಾಸಣೆ ಮಾಡಲು ಯಾರು ಇಲ್ಲದ ಕಾರಣ ರೈಲಿನಲ್ಲಿ ಬಂದ ಪ್ರಯಾಣಿಕರು ನೇರವಾಗಿ ಮನೆಯತ್ತ ಹೋಗುತ್ತಿದ್ದಾರೆ.

ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಮಾಡುವವರೇ ಇಲ್ಲ; ಪ್ರಯಾಣಿಕರು ನೇರವಾಗಿ ಮನೆಯತ್ತ
ಬಾಗಲಕೋಟೆ ರೈಲ್ವೆ ನಿಲ್ದಾಣ
sandhya thejappa
|

Updated on: May 18, 2021 | 12:47 PM

Share

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ. ಆದರೆ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಕೊರೊನಾ ಟೆಸ್ಟ್ ಮಾಡದೆ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಯಾವುದೇ ರೀತಿಯ ತಪಾಸಣೆ ಮಾಡಲು ಯಾರು ಇಲ್ಲದ ಕಾರಣ ರೈಲಿನಲ್ಲಿ ಬಂದ ಪ್ರಯಾಣಿಕರು ನೇರವಾಗಿ ಮನೆಯತ್ತ ಹೋಗುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮತ್ತಷ್ಟು ಕೊರೊನಾ ಹೆಚ್ಚಳವಾಗುವ ಆತಂಕ ಎದುರಾಗಿದೆ.

ಕೊವಿಡ್ ಕೇರ್ ಸೆಂಟರ್​ನಲ್ಲಿ ಅವ್ಯವಸ್ಥೆ ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಜಮಾಪುರ ಕೊವಿಡ್ ಕೇರ್ ಸೆಂಟರ್​ನಲ್ಲಿ ಬೆಳಗ್ಗೆ 11 ಗಂಟೆಯಾದರೂ ಉಪಾಹಾರ ನೀಡಿಲ್ಲ. ಉಪಾಹಾರವಿಲ್ಲದೆ ಕೊರೊನಾ ಸೋಂಕಿತರು ನರಳಾಟ ಅನುಭವಿಸಿದ್ದಾರೆ. 11 ಗಂಟೆಯಾದರೂ ಸ್ಥಳಕ್ಕೆ ಅಧಿಕಾರಿಗಳು ಬಂದಿಲ್ಲವೆಂದು ಕೊವಿಡ್ ಕೇರ್ ಸೆಂಟರ್ ಮುಂಭಾಗದಲ್ಲಿ ಕುಳಿತ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್​ಡೌನ್​ ನಡುವೆ ಸಂತೆ ಆನೇಕಲ್: ಲಾಕ್​ಡೌನ್​ ಇದ್ದರೂ ಬನ್ನೇರುಘಟ್ಟದಲ್ಲಿ ವ್ಯಾಪಾರಿಗಳು ಸಂತೆ ನಡೆಸುತ್ತಿದ್ದಾರೆ. ಲಾಕ್​ಡೌನ್​ ಹಿನ್ನೆಲೆ ಯಾವುದೇ ಸಂತೆಗಳು ನಡೆಸದಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಆದರೆ ಇಂದು (ಮೇ 18) ಬನ್ನೇರುಘಟ್ಟದಲ್ಲಿ ಎಂದಿನಂತೆ ನಡೀತಿದೆ. ಸಂತೆ ನಡೆಯುತ್ತಿದ್ದರು ಬನ್ನೇರುಘಟ್ಟ ಪಂಚಾಯತಿ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಸಂತೆ ನಡೆಯುತ್ತಿರುವುದರಿಂದ ಸ್ಥಳೀಯರಿಗೆ ಕೊವಿಡ್ ಭೀತಿ ಎದುರಾಗಿದೆ.

ಇದನ್ನೂ ಓದಿ

ಅಂತ್ಯಸಂಸ್ಕಾರಕ್ಕೆ ಹೋದ 128 ಜನರಿಗೆ ಕೊರೊನಾ ಪಾಸಿಟಿವಿ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಅಂತ್ಯಸಂಸ್ಕಾರಕ್ಕೆ ಹೋದ 128 ಜನರಿಗೆ ಕೊರೊನಾ ಪಾಸಿಟಿವಿ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

(There are no corona testers at Bagalkot railway station)

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ