ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದರು. ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ […]

ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​
ಆರ್. ಅಶೋಕ್
Follow us
Lakshmi Hegde
|

Updated on:Dec 30, 2020 | 1:21 PM

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದರು.

ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತಾರೆ. ಅದಾದ ನಂತರ ಸಿಎಂ ಒಂದು ಅಂತಿಮ ನಿರ್ಧಾರ ತಿಳಿಸುತ್ತಾರೆ ಎಂದರು.

ಬೇರೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆಗಳ ಆರಂಭ ಆಗಿದೆ. ಆದರೆ ನಮ್ಮಲ್ಲಿ ಬ್ರಿಟನ್ ವೈರಸ್​ ಪ್ರಸರಣದ ಪ್ರಮಾಣ ನೋಡಿ ಮುಂದಿನ ಹೆಜ್ಜೆ ಇಡಲಾಗುವುದು. ಸದ್ಯಕ್ಕೆ ಲಾಕ್ಡೌನ್ ಪ್ರಸ್ತಾಪವಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿದೆ. ನಿಯಮಗಳನ್ನೂ ಬಿಗಿಗೊಳಿಸಬೇಕಾಗಿದೆ. ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಮಾಡುವುದಿಲ್ಲ. ಬದಲಿಗೆ ರೂಪಾಂತರಿ ವೈರಸ್​ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅಶೋಕ್​ ತಿಳಿಸಿದ್ದಾರೆ.

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Published On - 1:17 pm, Wed, 30 December 20

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್