ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಮಾಡುವ ಬಗ್ಗೆ ಇನ್ನೂ ಗೊಂದಲ ಇರುವುದು ನಿಜ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜತೆ ಚರ್ಚಿಸುತ್ತಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಪ್ರಾರಂಭ ಎಂದು ಹೇಳಲಾಗಿದ್ದರೂ, ಇದೀಗ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಗೊಂದಲ ಸೃಷ್ಟಿಯಾಗಿದೆ. ಪಾಲಕರಲ್ಲಿ ಹಲವರು ಶಾಲೆಗಳ ಆರಂಭಕ್ಕೆ ಒತ್ತಾಯಿಸಿದ್ದರೆ, ಮತ್ತೂ ಅನೇಕರು ಈಗ ಬೇಡ ಎಂದಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತಾರೆ. ಅದಾದ ನಂತರ ಸಿಎಂ ಒಂದು ಅಂತಿಮ ನಿರ್ಧಾರ ತಿಳಿಸುತ್ತಾರೆ ಎಂದರು.
ಬೇರೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆಗಳ ಆರಂಭ ಆಗಿದೆ. ಆದರೆ ನಮ್ಮಲ್ಲಿ ಬ್ರಿಟನ್ ವೈರಸ್ ಪ್ರಸರಣದ ಪ್ರಮಾಣ ನೋಡಿ ಮುಂದಿನ ಹೆಜ್ಜೆ ಇಡಲಾಗುವುದು. ಸದ್ಯಕ್ಕೆ ಲಾಕ್ಡೌನ್ ಪ್ರಸ್ತಾಪವಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿದೆ. ನಿಯಮಗಳನ್ನೂ ಬಿಗಿಗೊಳಿಸಬೇಕಾಗಿದೆ. ಇಡೀ ರಾಜ್ಯದಲ್ಲಿ ಲಾಕ್ಡೌನ್ ಮಾಡುವುದಿಲ್ಲ. ಬದಲಿಗೆ ರೂಪಾಂತರಿ ವೈರಸ್ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅಶೋಕ್ ತಿಳಿಸಿದ್ದಾರೆ.
ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
Published On - 1:17 pm, Wed, 30 December 20