ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡಕ್ಕೆ ಹೋಗಲು ಬಸ್​ ಇಲ್ಲದೆ ಪರದಾಡಿದ ಗದಗ ಜನ

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡಕ್ಕೆ ಹೋಗಲು ಬಸ್​ ಇಲ್ಲದೆ ಪರದಾಡಿದ ಗದಗ ಜನ

TV9 Web
| Updated By: ವಿವೇಕ ಬಿರಾದಾರ

Updated on: Feb 10, 2023 | 10:52 AM

ಗದಗ ನಗರದ ಹೊಸ ಬಸ್ ನಿಲ್ದಾಣದಿಂದ ಸವದತ್ತಿಗೆ ಹೋಗಲು ಬಸ್ ಇಲ್ಲದೆ ಭಕ್ತರು ಪರದಾಡುತ್ತಿದ್ದಾರೆ. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಕೇಳಿದರೆ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.

ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ರಾಜ್ಯ-ಅಂತರ್ ರಾಜ್ಯದಿಂದ ಜನರು ಆಗಮಿಸುತ್ತಾರೆ. ಮಲಪ್ರಭೆಯ ತಟ ಗುಡ್ಡದ ಮೇಲೆ ನೆಲಿಸಿರುವ ದೇವಿಯ ದರ್ಶನ ಪಡೆದುಕೊಳ್ಳಲು ಅಸಂಖ್ಯ ಭಕ್ತರು ಬರುತ್ತಾರೆ. ಆದರೆ ಗದಗ ಜಿಲ್ಲೆಯ ಜನ ಮಾತ್ರ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಲು ಪರದಾಡುತ್ತಿದ್ದಾರೆ. ಹೌದು ಗದಗ ನಗರದ ಹೊಸ ಬಸ್ ನಿಲ್ದಾಣದಿಂದ ಸವದತ್ತಿಗೆ ಹೋಗಲು ಬಸ್ ಇಲ್ಲದೆ ಭಕ್ತರು ಪರದಾಡುತ್ತಿದ್ದಾರೆ. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಕೇಳಿದರೆ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ.

ಲಕ್ಕುಂಡಿ ಉತ್ಸವಕ್ಕೆ ವಾಹನ ಬಿಟ್ಟಿದ್ದೇವೆ ಸವದತ್ತಿಗೆ ಬಸ್ ಬಿಡಲಿಕ್ಕಾಗಲ್ಲ ಅಂತಿದ್ದಾರೆ. ಹೀಗಾಗಿ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರು, ಮಕ್ಕಳು ಸೇರಿ ನೂರಾರು ಭಕ್ತರು ಪರದಾಡುತ್ತಿದ್ದು, ಅಧಿಕಾರಿಗಳು ಬಸ್ ವ್ಯವಸ್ಥೆ ಮಾಡಬೇಕು ಅಂತ ಒತ್ತಾಯ ಮಾಡುತ್ತಿದ್ದಾರೆ.