AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ತೊಳೆದರೆ ತಪ್ಪಿಲ್ಲ: ಹೇಳಿಕೆ ಸಮರ್ಥಿಸಿಕೊಂಡ ಯುಟಿ ಖಾದರ್

ಪ್ರಸ್ತುತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆಯುವುದು ತಪ್ಪು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಲಾಗುತ್ತಿದೆ. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್, ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ತೊಳೆಯುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ. ಅಲ್ಲದೆ, ಈ ಹೇಳಿಕೆಯನ್ನು ಸಮರ್ಥಿಸಿಕೊಂಡು ಅದು ಕೂಡ ಶಿಕ್ಷಣದ ಒಂದು ಭಾಗ ಎಂದಿದ್ದಾರೆ.

ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ತೊಳೆದರೆ ತಪ್ಪಿಲ್ಲ: ಹೇಳಿಕೆ ಸಮರ್ಥಿಸಿಕೊಂಡ ಯುಟಿ ಖಾದರ್
ಯುಟಿ ಖಾದರ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi|

Updated on:Jan 09, 2024 | 2:41 PM

Share

ಮಂಗಳೂರು, ಜ.9: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader), ವಿದ್ಯಾರ್ಥಿಯಾಗಿದ್ದಾಗ ನಾನು ಕೂಡ ಶಾಲೆಯ ಶೌಚಾಲಯವನ್ನು ತೊಳೆದಿದ್ದೇನೆ. ಮಕ್ಕಳ ಶೌಚಾಲಯವನ್ನು ಮಕ್ಕಳೇ ಸ್ವಚ್ಚಗೊಳಿಸಿದರೆ ತಪ್ಪಿಲ್ಲ. ಇದು ಶಿಕ್ಷಣದ ಒಂದು ಭಾಗ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದಲ್ಲಿ ಮಾತನಾಡಿದ ಅವರು, ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಾಗಿದ್ದಾಗ ನಾವೇ ಕ್ಲೀನ್ ಮಾಡುತ್ತಿದ್ದೆವು. ಅದು ಶಿಕ್ಷಣದ ಒಂದು ಭಾಗ. ಮಕ್ಕಳು ಸ್ವಾವಲಂಭಿಗಳಗಬೇಕು ಅಂತಾ ನಮ್ಮ ಮನೆಯಲ್ಲೂ ಕೂಡ ಮಕ್ಕಳಿಗೆ ಅದನ್ನು ಕಲಿಸುತ್ತೇವೆ‌. ಸ್ವಚ್ಚತೆ ಬಗ್ಗೆ ಅರಿವು ಮೂಡಲು ಕೈಗೆ ಗ್ಲೌಸ್ ಹಾಕಿ ಶೌಚಾಲಯ ಕ್ಲೀನ್ ಮಾಡಿಸಬೇಕು. ಆದರೆ ಒತ್ತಾಯ‌ಪೂರ್ವಕವಾಗಿ ಸ್ವಚ್ಚಗೊಳಿಸಬಾರದು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಶೌಚಾಲಯಕ್ಕಾಗಿ ಮಕ್ಕಳ ಗ್ರಾಮ ಸಭೆಯಲ್ಲಿ ಕಣ್ಣೀರಿಟ್ಟ ‌ವಿದ್ಯಾರ್ಥಿನಿಯರು

ವಿದ್ಯಾರ್ಥಿಗಳ ಕೈಯಲ್ಲಿ ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ವಿಚಾರ ಇತ್ತೀಚೆಗೆ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಬೆಂಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಶಾಲೆ ಮಕ್ಕಳಿಂದ ಶೌಚಾಯಲ ಸ್ವಚ್ಛಗೊಳಿಸಿದ ಪ್ರಕರಣಗಳಿ ಬೆಳಕಿಗೆ ಬಂದಿವೆ. ಮತ್ತೊಂದೆಡೆ ಶಾಲೆಯಲ್ಲಿ ಸ್ವಚ್ಛ ಮಾಡುವವರಿಲ್ಲ ಎನ್ನುವ ಆರೋಪಗಳು ಶಿಕ್ಷಕರಿಂದ ಬಂದಿವೆ. ಅದಾಗ್ಯೂ, ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ನಂತರ ಹೊಸ ನಿಯಮವನ್ನೂ ರೂಪಿಸಲಾಗಿತ್ತು. ಇದಕ್ಕೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದರು.

ವಿದ್ಯಾರ್ಥಿಗಳು ಕಸ ಗುಡಿಸುವುದರಲ್ಲಿ, ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ. ಇಂಥ ಕೆಲಸಗಳನ್ನು ಚಿಕ್ಕಂದಿನಲ್ಲೇ ತಿಳಿದುಕೊಳ್ಳುವುದು ಉತ್ತಮ ಎಂದು ಮೂಡುಬಿದಿರೆಯಲ್ಲಿ ಯುಟಿ ಖಾದರ್ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Tue, 9 January 24

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ