AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಇಷ್ಟು ಬೇಗ ಸುಪ್ರೀಂ ಕೋರ್ಟ್ ಮೊರೆ ಹೋಗುವ ಅಗತ್ಯ ಇರಲಿಲ್ಲ; ಡಿಸಿಎಂ ಡಿಕೆ ಶಿವಕುಮಾರ್

DK Shivakumar Reaction On Tamil Nadu; ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದ ವಿರುದ್ಧ ಮತ್ತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ಮಳೆ ಕೊರತೆಯಿಂದಾಗಿ ತಮಿಳುನಾಡಿಗೆ ಹೆಚ್ಚು ನೀರು ಬಿಡುವ ಸ್ಥಿತಿಯಲ್ಲಿ ಕರ್ನಾಟಕವೂ ಇಲ್ಲ. ಮುಂದಿನ ಕಾನೂನು ಹೋರಾಟದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ ಮಾಹಿತಿ ಇಲ್ಲಿದೆ.

ತಮಿಳುನಾಡು ಇಷ್ಟು ಬೇಗ ಸುಪ್ರೀಂ ಕೋರ್ಟ್ ಮೊರೆ ಹೋಗುವ ಅಗತ್ಯ ಇರಲಿಲ್ಲ; ಡಿಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Anil Kalkere
| Updated By: Ganapathi Sharma|

Updated on:Aug 14, 2023 | 8:33 PM

Share

ಬೆಂಗಳೂರು, ಆಗಸ್ಟ್ 14 : ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು (Tamil Nadu) ಸರ್ಕಾರ ಇಷ್ಟು ಬೇಗ ಸುಪ್ರೀಂ ಕೋರ್ಟ್​​ (Supreme Court) ಮೊರೆ ಹೋಗುವ ಅಗತ್ಯ ಇರಲಿಲ್ಲ. ಪರಿಸ್ಥಿತಿ ನೋಡಿಕೊಂಡು ನಾವೇ ನೀರು ಕೊಡುತ್ತಿದ್ದೆವು. ಅಷ್ಟಕ್ಕೂ ನೀರು ಕೊಡುವುದು, ಬಿಡುವುದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕೈಯಲ್ಲಿದೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೋಮವಾರ ಹೇಳಿದರು. ಕರ್ನಾಟಕ ಸರ್ಕಾರವು ತಮ್ಮ ಪಾಲಿನ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ ವಿಚಾರವಾಗಿ ಶಿವಕುಮಾರ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಮಳೆ ಎಷ್ಟು ಬರ್ತಿದೆ, ಕಾವೇರಿ ಜಲಾಶಯ ಪ್ರದೇಶದಲ್ಲಿ ನೀರು ಎಷ್ಟಿದೆ ಎಷ್ಟಿದೆ ಎಂಬುದನ್ನು ಗಮನಿಸುತ್ತಿದ್ದೇವೆ. ಬೆಳೆಗಳನ್ನು ಬೆಳೆಯುವ ವಿಚಾರವಾಗಿಯೂ ಕೃಷಿ ಸಚಿವ ಚಲುವರಾಯಸ್ವಾಮಿ ರೈತರಿಗೆ ಸಂದೇಶ ನೀಡಿದ್ದಾರೆ. ಈಗಿನ ಪರಿಸ್ಥಿತಿ ಏನು ಎಂಬುದು ಗೊತ್ತಿದೆ. ಸದ್ಯಕ್ಕೆ ಡಿಸ್ಟೆನ್ಸ್ ಫಾರ್ಮುಲಾ ಬಳಸಬೇಕಿದೆ. ನಾವೇ ನಮ್ಮ ವಿಚಾರ ನೋಡಿಕೊಂಡು, ನಮಗೆ ಬೇಕಿರುವ ನೀರು ಇಟ್ಟುಕೊಂಡು, ಕುಡಿಯುವ ನೀರು ಇಟ್ಟುಕೊಂಡು ನಮ್ಮ ರೈತರ ಭಾವನೆ ಅರಿತು, ಅವರಿಗೂ ನೀರು ಕೊಡುತ್ತಿದ್ದೆವು. ಅಷ್ಟಕ್ಕೂ ನೀರು ಕೊಡುವುದು ಎಲ್ಲಾ ಪ್ರಾಧಿಕಾರದ ಕೈಯಲ್ಲಿದೆ. ನಾವು ಎರಡೂ ರಾಜ್ಯಗಳ ರೈತರನ್ನು ಉಳಿಸಬೇಕಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Kaveri Water Dispute: ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ; ಸುಪ್ರೀಂ ಕೋರ್ಟ್ ಮೊರೆಹೋದ ತಮಿಳುನಾಡು

ವಿವಾದದ ಮೂಲಕ ಎರಡೂ ರಾಜ್ಯಗಳ ರೈತರನ್ನು ಹೈರಾಣಾಗಿಸುವುದು ಬೇಡ ಎಂದು ತಮಿಳುನಾಡಿಗೂ ಮನವಿ ಮಾಡುತ್ತೇನೆ. ಸಂಪೂರ್ಣ ಮಾಹಿತಿ ಕೈಸೇರಿದ ಬಳಿಕ ಅಡ್ವೋಕೇಟ್ ಜನರಲ್ ಬಳಿ ಮಾತನಾಡುತ್ತೇನೆ. ಬಳಿಕ ಅವರ ಜೊತೆಯಲ್ಲಿ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ಸದ್ಯದ ಮಟ್ಟಿಗೆ ನಾವು ಜಗಳ ಮಾಡಿಕೊಳ್ಳುವಂಥ ಸಂದರ್ಭ ಏನಿಲ್ಲ. ನಾವೆಲ್ಲಾ ಅಣ್ಣ ತಮ್ಮಂದಿರು ಅಂತ ಮೊದಲಿನಿಂದಲೂ ಹೇಳಿದ್ದೇನೆ. ನಮ್ಮ ರೈತರಿಗೆ ಸಂದೇಶ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಕಾರಣ ಹೆಚ್ಚು ನೀರು ಬಿಡಲಾಗದು ಎಂದು ಕರ್ನಾಟಕ ಸರ್ಕಾರದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕಳೆದ ವಾರ ತಿಳಿಸಿದ್ದರು. ಇದರಿಂದ ತಮಿಳುನಾಡು ಅಸಮಾಧಾನಗೊಂಡಿದೆ. ಹೀಗಾಗಿ ಅದು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Mon, 14 August 23

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ