ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ; ಹಿಜಾಬ್ ಧರಿಸಿಕೊಂಡು ಬಂದರೆ ಎಕ್ಸಾಂಗೆ ಅವಕಾಶ ಇಲ್ಲ

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ, ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಹಿಜಾಬ್ ಧರಿಸಿಕೊಂಡು ಬಂದರೆ ಎಕ್ಸಾಂಗೆ ಪ್ರವೇಶ ನೀಡಲ್ಲ ಅಂತ ತಿಳಿಸಿದೆ.

ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ; ಹಿಜಾಬ್ ಧರಿಸಿಕೊಂಡು ಬಂದರೆ ಎಕ್ಸಾಂಗೆ ಅವಕಾಶ ಇಲ್ಲ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on:Mar 27, 2022 | 11:42 AM

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ 2021-22ನೇ ಸಾಲಿನ ಎಸ್ಎಸ್ಎಲ್​ಸಿ ಪರೀಕ್ಷೆ (SSLC Exam) ನಡೆಯಲಿದೆ. ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ (Exam Center) ಸಕಲ ಸಿದ್ಧತೆ ನಡೆಯುತ್ತಿದೆ. ನಾಳೆಯಿಂದ ಆರಂಭವಾಗುವ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆಯಲಿದೆ. ಈ ಬಾರೀ 4,52,732 ಬಾಲಕರು ಹಾಗೂ 4,21,110 ಬಾಲಕಿಯರು ಪರೀಕ್ಷೆ ಬರೆಯುತ್ತಾರೆ. 4 ತೃತಿಯ ಲಿಂಗಿಗಳು, 5,307 ವಿಭಿನ್ನ ಸಾಮಾರ್ಥ್ಯವುಳ್ಳ ವಿದ್ಯಾರ್ಥಿಗಳು ಸೇರಿ ರಾಜ್ಯದಲ್ಲಿ ಒಟ್ಟು 8,73,846 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ನೊಂದಣಿ ಮಾಡಿಸಿಕೊಂಡಿದ್ದಾರೆ. 15,387 ಶಾಲೆಗಳು ಪರೀಕ್ಷೆಗೆ ನೋಂದಾಯಿತಗೊಂಡಿವೆ. ಈ ಪೈಕಿ 5,717 ಸರ್ಕಾರಿ, 3,412 ಅನುದಾನಿತ ಹಾಗೂ 6,258 ಅನುದಾನ ರಹಿತ ಶಾಲೆಗಳು ಒಟ್ಟು 3,444 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ಹಿಜಾಬ್ ಧರಿಸಿ ಬಂದರೆ ಎಕ್ಸಾಂಗೆ ನೋ ಎಂಟ್ರಿ: ಇನ್ನು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ, ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಹಿಜಾಬ್ ಧರಿಸಿಕೊಂಡು ಬಂದರೆ ಎಕ್ಸಾಂಗೆ ಪ್ರವೇಶ ನೀಡಲ್ಲ ಅಂತ ತಿಳಿಸಿದೆ. 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿಯಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯವಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಸಿಸಿ ಟಿವಿ ಕಣ್ಗಾವಲಿನಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯಲಿದೆ. 3,275 ಸಾಮಾನ್ಯ ಕೇಂದ್ರಗಳು, 169 ಖಾಸಗಿ ಕೇಂದ್ರಗಳು ಗುರುತು ಮಾಡಲಾಗಿದೆ. ಸುಮಾರು 45,289 ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಲಾಗಿದ್ದು, 3,444 ಮುಖ್ಯ ಅಧಿಕ್ಷಕರಗಳ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ 49,817 ಕೊಠಡಿ ಮೇಲ್ವಿಚಾರಕರ ನೇತೃತ್ವದಲ್ಲಿ ಪರೀಕ್ಷೆ ನಡೆಯುತ್ತದೆ. ಕಳೆದ ವರ್ಷ ಕೊವಿಡ್ ಹಿನ್ನೆಲೆ ಬಹು ಆಯ್ಕೆ ಪ್ರಶ್ನೆಗಳ ಮೂಲಕ (Multiple Choice) ಪರೀಕ್ಷೆ ನಡೆಸಲಾಗಿತ್ತು. ಜೊತೆಗೆ ಪರೀಕ್ಷೆಗೆ ಹಾಜರಾಗಿದ್ದ ಎಲ್ಲ ವಿದ್ಯಾರ್ಥಿಗಳನ್ನ ಸರ್ಕಾರ ಪಾಸ್ ಮಾಡಿತ್ತು.

ಎಸ್ಎಸ್ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ: * ಮಾರ್ಚ್ 28ರಂದು ಪ್ರಥಮ ಭಾಷೆ ಪರೀಕ್ಷೆ * ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥ ಶಾಸ್ತ್ರ ಮತ್ತು ಕೋರ್ ಸಬ್ಜೆಕ್ಟ್ * ಏಪ್ರಿಲ್ 4 ಗಣಿತ ಹಾಗೂ ಸಮಾಜಶಾಸ್ತ್ರ ಪರೀಕ್ಷೆ * ಏಪ್ರಿಲ್ 6ರಂದು ಸಮಾಜ ವಿಜ್ಞಾನ * ಏಪ್ರಿಲ್ 8ರಂದು ತೃತೀಯ ಭಾಷೆ ಹಿಂದಿ * ಏಪ್ರಿಲ್ 11ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ.

ಪರೀಕ್ಷಾ ಸಮಯ: ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರವರೆಗೆ ಸಮಯ ಇರುತ್ತದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ.

ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್, 80 % ಮುಗದಿರುವ ಸಿಲಾಬಸ್​ನಲ್ಲಿಯೇ ಪ್ರಶ್ನೆ ಪತ್ರಿಕೆ ಬರುತ್ತದೆ. ಈ ಸಾರಿ ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆಗಳನ್ನು ಜಾಸ್ತಿ ನೀಡಲಾಗುತ್ತದೆ. ಪಠ್ಯ ಮುಗಿಯದೇ ಇರುವ ಶಾಲೆಯ ವಿದ್ಯಾರ್ಥಿಗಳಿಗೆ ಬೇರೆ ಪ್ರಶ್ನೆ ಆಯ್ಕೆ‌ಮಾಡುವ ಅವಕಾಶ ಇದೆ. ಹಾಗಾಗಿ ಧೈರ್ಯವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಿರಿ ಎಂದರು.

ಆಡಳಿತಾತ್ಮಕವಾಗಿ ಸರ್ಕಾರ ಸಮವಸ್ತ್ರದ ಆದೇಶ ಮಾಡಿದೆ. ಆದೇಶ ಪಾಲನೆ ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ. ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಈ ಬಾರಿ ಪಠ್ಯದಲ್ಲಿ ಶೇ.20 ರಷ್ಟು ಕಡಿತ ಮಾಡಲಾಗಿದೆ. ಶೇ.80 ರಷ್ಟು ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದೆ. 20 ಅಂಕ ಇಂಟರ್ನಲ್ಸ್, 80 ಅಂಕಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಹಾಲ್ ಟಿಕೆಟ್ ಸಂಬಂಧ ಯಾವುದೇ ದೂರು ಬಂದಿಲ್ಲ.  ಪ್ರವೇಶ ಶುಲ್ಕವನ್ನ ಶಾಲೆಯ ವೆಬ್ ಸೈಟ್​ಗೆ ಕಳುಹಿಸಿದ್ದೇವೆ.  ಮಕ್ಕಳಿಗೆ ಹಾಲ್ ಟಿಕೆಟ್ ಕೊಡದಿರುವ ಸಂಬಂಧ ದೂರು ಬಂದಿಲ್ಲ ಅಂತ ಟಿವಿ9ಗೆ ಕರ್ನಾಟಕ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಹೆಚ್ ಎನ್ ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.

ಪರೀಕ್ಷಾ ಕೇಂದ್ರ ಸುತ್ತ 144 ಸೆಕ್ಷನ್ ಜಾರಿ: ಮೈಸೂರು: ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮೈಸೂರು ನಗರದಲ್ಲಿ 57 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 149 ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 38,138 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊವಿಡ್ ಹಿನ್ನೆಲೆ ಶಿಕ್ಷಣ ಇಲಾಖೆ ಮುನ್ನೆಚ್ಚೆರಿಕಾ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳಿಗೆ 40 ಸಾವಿರ ಮಾಸ್ಕ್​ಗಳನ್ನ ವಿತರಣೆ ಮಾಡಲಿದ್ದಾರೆ

ಇದನ್ನೂ ಓದಿ

ಅವಿಶ್ವಾಸ ನಿರ್ಣಯದ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪಕ್ಷದ ಸಚಿವರು ಕಣ್ಮರೆ

ಒಳ್ಳೆ ಕರ್ಮ, ಕೆಟ್ಟ ಕರ್ಮ ಎಂದು ಗೊತ್ತಾಗುವುದು ಹೇಗೆಂದು ಗರುಡ ಕೇಳಿದ ಪ್ರಶ್ನೆಗೆ ಮಹಾ ವಿಷ್ಣು ಕೊಟ್ಟ ಮಾರ್ಮಿಕ ಉತ್ತರ ಇಲ್ಲಿದೆ

Published On - 8:54 am, Sun, 27 March 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ