AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮದ ಊರಲಿ ಸಿನಿಮಾ ನೋಡೋಕೆ ಹೋದಾಗ ಮನೆಗೆ ನುಗ್ಗಿದ ಕಳ್ಳ: ತಗ್ಲಾಕ್ಕೊಂಡಿದ್ದೇ ರೋಚಕ!

ಮನೆ ಮಂದಿಯೆಲ್ಲಾ ಸಿನಿಮಾ ನೋಡಲು ತೆರಳಿ, ಖುಷಿ ಖುಷಿಯಾಗೆ ಸಿನಿಮಾ ಎಂಜಾಯ್ ಮಾಡಿ ಮನೆಗೆ ವಾಪಸ್ ಆದಾಗ ಶಾಕ್​ ಕಾದಿತ್ತು. ಕಳ್ಳನೊಬ್ಬ ಮನೆಗೆ ನುಗ್ಗಿ 120 ಗ್ರಾಂ ಚಿನ್ನ ಕದಿಯಲು ಯತ್ನಿಸಿದ್ದಾನೆ. ತಕ್ಷಣ ಅಲರ್ಟ್​ ಆದ ಮನೆಯವರು ಕಳ್ಳನನ್ನು ಸೆರೆಹಿಡಿದಿದ್ದಾರೆ. ವಿಜಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೇಮದ ಊರಲಿ ಸಿನಿಮಾ ನೋಡೋಕೆ ಹೋದಾಗ ಮನೆಗೆ ನುಗ್ಗಿದ ಕಳ್ಳ: ತಗ್ಲಾಕ್ಕೊಂಡಿದ್ದೇ ರೋಚಕ!
ಬಂಧಿತ ಆರೋಪಿ Image Credit source: tv9 kannada
ನವೀನ್ ಕುಮಾರ್ ಟಿ.
| Edited By: |

Updated on: Oct 11, 2026 | 3:24 PM

Share

ದೇವನಹಳ್ಳಿ, ಅಕ್ಟೋಬರ್​​ 11: ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಸಿನಿಮಾಗೆ ಹೋಗಿದ್ದ ಕುಟುಂಬ ವಾಪಸ್​ ಮನೆಗೆ ಬಂದಾಗ ಶಾಕ್​ ಕಾದಿತ್ತು. ಮನೆ ಮಂದಿ ಸಿನಿಮಾಗೆ ಹೋಗಿರುವುದನ್ನೇ ಬಂಡವಾಳ ಮಾಡಿಕೊಂಡ ಖದೀಮ ಮನೆಗೆ ನುಗ್ಗಿ 120 ಗ್ರಾಂ ಚಿನ್ನ ಕದಿದ್ದಾನೆ. ಆದರೆ ಕಳ್ಳನ ಹಣೆಬರಹ ಸರಿ ಇರಲಿಲ್ಲ, ಮನೆಯವರ ಕೈಗೆ ಸಿಕ್ಕಿಬಿದಿದ್ದಾನೆ. ಸದ್ಯ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ವಿಜಯಪುರ ಪೊಲೀಸರು ತನಿಖೆ ನಡೆಸಿದ್ದಾರೆ.

ನಡೆದಿದ್ದೇನು?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೊಬ್ಬರ ಗುಂಟೆ ಗ್ರಾಮದ ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಅಜಯ್​​ ಎಂಬಾತ ಕಳ್ಳತನಕ್ಕೆ ಯತ್ನಿಸಿದ್ದಾನೆ. ನಿನ್ನೆ ಕುಟುಂಬಸ್ಥರು ‘ಪ್ರೇಮದ ಊರಲಿ’ ಸಿನಿಮಾ ನೋಡಲು ಹೋಗಿದ್ದರು. ಇತ್ತ ಮನೆಯಲ್ಲಿ ಯಾರು ಇಲ್ಲದನ್ನು ಕಂಡ ಅಜಯ್, ಮಧ್ಯಾಹ್ನ 1.50ರ ಸುಮಾರಿಗೆ ಮನೆಗೆ ನುಗ್ಗಿದ್ದಾನೆ. ಮನೆಯಲ್ಲಿದ್ದ 120 ಗ್ರಾಂ ಚಿನ್ನವನ್ನು ಕದಿದ್ದಾನೆ.

ಮನೆಗೆ ವಾಪಸ್​​ ಆದ ಕುಟುಂಬಸ್ಥರಿಗೆ ಕಾದಿತ್ತು ಶಾಕ್​​!

ಇತ್ತ ಕುಟುಂಬಸ್ಥರು ಮನೆಗೆ ವಾಪಸ್ ಆಗುತ್ತಿದ್ದಂತೆ ಅನುಮಾನ ಮೂಡಿದಿದೆ. ಸಿನಿಮಾಗೆ ಹೋಗುವಾಗ ಹೊರಗಡೆಯಿಂದ ಆಗಿದ್ದ ಲಾಕ್, ಇದೀಗ ಒಳಗಡೆಗೆ ಹೇಗೆ ಲಾಕ್​ ಆಯಿತು ಅಂತ ಅನುಮಾನ ಮೂಡಿದೆ. ಹೀಗಾಗಿ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಆರೋಪಿ ಮನೆ ಒಳಗಡೆ ನುಗ್ಗಿದು, ಹೊರಗಡೆ ಬಾರದಿರುವುದು ಗೊತ್ತಾಗಿದೆ. ಹೀಗಾಗೆ ಕೂಡಲೇ ಅಲರ್ಟ್ ಆದ ಕುಟುಂಬಸ್ಥರು, ಮನೆಯನ್ನ ಸುತ್ತುವರೆದು ಮನೆಯಲ್ಲಿದ್ದ ಕಳ್ಳನಿಗಾಗಿ ಶೋಧ ನಡೆಸಿದಾಗ ಮಂಚದ ಕೆಳಗಡೆ ಅವಿತಿರುವುದು ಗೊತ್ತಾಗಿದೆ. ಮನೆ ಮಂದಿ ಕಳ್ಳನನ್ನ ಸೆರೆಹಿಡಿದು ಥಳಿಸಿದ್ದಾರೆ.

ಮೂರು ದಿನಗಳಿಂದ ಮನೆಯವರ ಮೇಲೆ ನಿಗಾ

ಬಂಧಿತ ಅಜಯ್​​ ಮೂಲತಃ ಕೇರಳದ ತ್ರಿಶೂರ್‌ನ ಚಿತ್ತಿಲಪಲ್ಲಿ ಮೂಲದವನು. ಕೆಲಸ ಅರಸಿ ಕೇರಳದಿಂದ ಬೆಂಗಳೂರಿಗೆ ಬಂದಿದ್ದು, ಯಲಹಂಕ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ. ಇನ್ನು ಈ ಅಜಯ್ ಕಳ್ಳತನಕ್ಕೂ ಮುನ್ನ ಎರಡು ಮೂರು ದಿನಗಳಿಂದ ಮನೆಯವರ ಚಲನವಲನದ ಮೇಲೆ ನಿಗಾ ಇಟ್ಟಿದ್ದ ಎಂಬುವುದು ವಿಜಯಪುರ ಪೊಲೀಸ್​ ವಿಚಾರಣೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ

ಸದ್ಯ ಚಿನ್ನಾಭರಣಗಳನ್ನ ವಿಜಯಪುರ ಪೊಲೀಸರು ವಶಕ್ಕೆ ಪಡೆದು ಮನೆ ಮಾಲೀಕರಿಗೆ ವಾಪಸ್ ನೀಡಿದ್ದಾರೆ. ಇನ್ನೂ ಮನೆಯವರ ಸಮಯ ಪ್ರಜ್ನೆಯಿಂದ ಸಿಕ್ಕಿಬಿದ್ದ ಕಳ್ಳನನ್ನ ವಿಜಯಪುರ ಪೊಲೀಸರು ವಶಕ್ಕೆ ಪಡೆದು ಬೇರೆ ಎಲ್ಲಿಯಾದರೂ ಕೃತ್ಯವೆಸಗಿದ್ದಾನಾ ಅಂತ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!