ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ: ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಎದೆ‌ನೋವು ಅಂತ ರೋಗಿ ಸೋಗಿನಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಬಂದಿದ್ದ ವ್ಯಕ್ತಿ ಕಳ್ಳತನಕ್ಕೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕಳ್ಳತನಕ್ಕೆ ಬೇಸತ್ತ ರೋಗಿಗಳಿಂದ ಕಳ್ಳನನ್ನು ಹಿಡಿದು ಪೊಲೀಸರಿಗೆ ನೀಡಲಾಗಿದೆ.

ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ: ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೋಗಿಗಳು
ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ: ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೋಗಿಗಳು
Edited By:

Updated on: Sep 17, 2024 | 8:37 PM

ದೇವನಹಳ್ಳಿ, ಸೆಪ್ಟೆಂಬರ್​ 17: ಅದು ಬಡ ರೋಗಿಗಳಿಗಾಗಿ ನಿರ್ಮಾಣ ಮಾಡಿರುವ ಸರ್ಕಾರಿ ಆಸ್ವತ್ರೆ (govt hospital). ಹೀಗಾಗಿ ನಿತ್ಯ ನೂರಾರು ಜನರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ ಕಳೆದ ರಾತ್ರಿ ಸಹ ಎದೆನೋವು ಅಂತ ಆಸ್ಪತ್ರೆಗೆ ಬಂದ ನಕಲಿ ರೋಗಿಯೋರ್ವ ಮಾಡಿದ ಕೆಲಸ ನೋಡಿ ಸಿಬ್ಬಂದಿ ಜೊತೆಗೆ ಜನರು ಸಹ ಬೆಚ್ಚಿ ಬಿದ್ದಿದ್ದು, ಸರಿಯಾಗಿ ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ರೋಗಿಯ ಸೋಗಿನಲ್ಲಿ ಬಂದು ಕಳ್ಳತನಕ್ಕೆ ಯತ್ನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕರ ಆಸ್ವತ್ರೆಗೆ ಕಳೆದ ರಾತ್ರಿ ಎದೆ ನೋವು ಅಂತ ಬಂದಿದ್ದ ಶಂಕರ್​ ಎಂಬಾತ ಮೊದಲಿಗೆ ಆಸ್ವತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾನೆ. ನಂತರ ಚಿಕಿತ್ಸೆ ಪಡೆದವನು ಮನಗೆ ಹೋಗದೆ ನೇರವಾಗಿ ಆಸ್ಪತ್ರೆಯ ಮೊದಲನೇ ಮಹಡಿಗೆ ತೆರಳಿದ್ದು ಅಲ್ಲಿ ವಾರ್ಡ್​ಗಳ ಒಳಗಡೆ ಹೋಗಿ ನಿದ್ದೆಗೆ ಜಾರಿರುವ ರೋಗಿಗಳ ಹಣ, ಮೊಬೈಲ್ ಮತ್ತು ಬೆಲೆ ಬಾಳುವ ವಸ್ತುಗಳನ್ನ ಎಗರಿಸುವ ಯತ್ನ ಮಾಡಿದ್ದಾನೆ. ಆದರೆ ಈ ವೇಳೆ ರೋಗಿಯೊಬ್ಬರು ಎಚ್ಚೆತ್ತು ಯಾರು ನೀನು ಅಂತಿದ್ದಂತೆ ನಾನು ಆಸ್ಪತ್ರೆ ಸಿಬ್ಬಂದಿ ಡಾಕ್ಟರ್ ಎಂದು ಹೇಳಿ ಅಲ್ಲಿಂದ ಹೊರಗಡೆ ಬಂದಿದ್ದಾನೆ. ಹೀಗಾಗೆ ಅನುಮಾನಗೊಂಡ ಜನರು ಆರೋಪಿಯನ್ನ ಹಿಂಬಾಲಿಸಿದಾಗ ಕಳ್ಳತನ ಮಾಡಲು ಬಂದಿರುವುದು ಗೊತ್ತಾಗಿದ್ದು ಕೂಡಲೇ ಆತನನ್ನು ಹಿಡಿದುಕೊಂಡಿದ್ದಾರೆ.

ಇದನ್ನೂ ಓದಿ: ಒನ್ ಡೇ ಟ್ರಿಪ್ ಮಾಡಿ ಕ್ಯಾಬ್ ಚಾಲಕನ ಬಳಿಯೇ ದರೋಡೆ: ಕಾರು ಸಮೇತ ಪರಾರಿಯಾಗಿದ್ದ ಆಸಾಮಿ ಅಂದರ್

ಆರೋಪಿಯನ್ನ ಹಿಡಿದುಕೊಂಡು ಪ್ರಶ್ನಿಸಿದ ಆಸ್ಪತ್ರೆಯ ಒಳ ರೋಗಿಗಳು ನಂತರ ಆರೋಪಿಯನ್ನ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಕಳೆದ ಹಲವು ತಿಂಗಳುಗಳಿಂದ ಇದೇ ರೀತಿ ಆಸ್ಪತ್ರೆಗೆ ಆಗಾಗ ರೊಗಿಗಳ ಸೋಗಿನಲ್ಲಿ ಬರ್ತಿರುವ ಕಳ್ಳರು ರೋಗಿಗಳ ಬ್ಯಾಗ್, ಮೊಬೈಲ್ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನ ಖದ್ದು ಎಸ್ಕೇಪ್ ಆಗ್ತಿದ್ದಾರಂತೆ. ಜೊತೆಗೆ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ನಾಲ್ಕು ಜನ ಸೆಕ್ಯೂರಿಟಿ ಗಾರ್ಡ್​ಗಳು ಕಾಟಾಚಾರಕ್ಕೆ ಕೆಲಸ ಮಾಡ್ತಿರುವ ಕಾರಣ ಪದೇ ಪದೇ ಈ ರೀತಿಯ ಕಳ್ಳತನ ಕೃತ್ಯಗಳು ನಡೆಯುತ್ತಿದ್ದು ಕಳ್ಳರ ಹಾವಳಿಗೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿ

ಒಟ್ಟಾರೆ ರೋಗ ಗುಣವಾಗಲಿ ಅಂತ ಕಷ್ಟದಲ್ಲಿ ಆಸ್ಪತ್ರೆಗೆ ಬಂದಿದ್ದ ರೋಗಿಗಳ ಬಳಿಗೆ ರೋಗಿಯ ಸೋಗಿನಲ್ಲಿ ಬಂದು ಬೆಲೆ ಬಾಳುವ ವಸ್ತುಗಳನ್ನ ಕದಿಯುತ್ತಿದ್ದ ಆರೋಪಿಯನ್ನ ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೂ ಇತ್ತೀಚೆಗೆ ಆಸ್ಪತ್ರೆಗಳಲ್ಲೂ ಇಂತಹ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಬುದ್ದಿ ಕಲಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us