ಕೊರೊನಾಗೆ 13 ತಿಂಗಳ ಮಗು ಬಲಿ, ಆಕ್ಸಿಜನ್ ಕೊರತೆ ಕಾರಣವೆಂದು ಕಣ್ಣೀರಿಟ್ಟ ತಂದೆ

|

Updated on: May 30, 2021 | 3:28 PM

ಕಳೆದ 1 ವಾರದಿಂದ ಉದ್ಧಮ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ.

ಕೊರೊನಾಗೆ 13 ತಿಂಗಳ ಮಗು ಬಲಿ, ಆಕ್ಸಿಜನ್ ಕೊರತೆ ಕಾರಣವೆಂದು ಕಣ್ಣೀರಿಟ್ಟ ತಂದೆ
ಕೊರೊನಾಗೆ 13 ತಿಂಗಳ ಮಗು ಬಲಿ
Follow us on

ಶಿವಮೊಗ್ಗ: ಜಿಲ್ಲಾಸ್ಪತ್ರೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಮಹಾಮಾರಿ ಕೊರೊನಾಗೆ ಜಗತ್ತು ಅರಿಯದ ಕಂದಮ್ಮ ಕಣ್ಣು ಮುಚ್ಚಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 13 ತಿಂಗಳ ಮಗು ಕೊರೊನಾಗೆ ಬಲಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.

ಕಳೆದ 1 ವಾರದಿಂದ ಉದ್ಧಮ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ.

ಇನ್ನು ಮಗುವನ್ನು ಕಳೆದು ಕೊಂಡ ಪೋಷಕರು ಕಣ್ಣೀರು ಹಾಕಿದ್ದಾರೆ. ಮೃತ ಮಗುವಿನ ತಂದೆ ಉದಯ ಟಿವಿ9 ಬಳಿ ನೋವು ತೋಡಿಕೊಂಡಿದ್ದಾರೆ. ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಸರಿಯಾಗಿ ಆಕ್ಸಿಜನ್ ವ್ಯವಸ್ಥೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಮಗುವಿನ ಸ್ಥಿತಿ ಗಂಭೀರವಾಯ್ತು. ಬಳಿಕ ಖಾಸಗಿ ಆಸ್ಪತ್ರೆಯ ವೈದ್ಯರು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚನೆ ನೀಡಿದ್ರು. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಮದ್ಯಾಹ್ನ ಮಗುವನ್ನು ದಾಖಲಿಸಿದ್ವಿ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮಗು ಮೃತಪಟ್ಟಿದೆ. ಕೊವಿಡ್ ಪರೀಕ್ಷೆ ವರದಿ ಬಂದು ಎರಡು ಘಂಟೆಯಲ್ಲೇ ಮಗು ಸಾವನ್ನಪ್ಪಿದೆ. ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮಗು ಮೃತಪಟ್ಟಿರೋದು ಎಂದು ಮೃತ ಮಗುವಿನ ತಂದೆ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೊರೊನಾ, ರಾಯಚೂರಿನಲ್ಲಿ 522 ಮಕ್ಕಳು ಪಾಸಿಟಿವ್