ತಮ್ಮ ನೇತೃತ್ವದ ಜಾತಿಗಣತಿ ಸಮಿಕ್ಷೆ ವರದಿ ಬಗ್ಗೆ ಕಾಂತರಾಜು ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತಿರುವುದು ಸಂತೋಷದ ವಿಚಾರ. ಜಾತಿಗಣತಿ ವರದಿಯ ಯಾವುದೇ ಮೂಲ ಪ್ರತಿ ಕಳೆದುಹೋಗಿಲ್ಲ. ಎಲ್ಲಾ ಸಮುದಾಯಗಳನ್ನು ಪರಿಗಣಿಸಿ ವರದಿ ಸಿದ್ಧಪಡಿಸಲಾಗಿದೆ. ಈ ವರದಿ ಸರ್ವ ಜನಾಂಗಕ್ಕೂ ಒಳ್ಳೆಯದಾಗುತ್ತೆ. ವರದಿ ಸ್ವೀಕಾರ ಮಾಡುವುದರಿಂದ ಅಭಿವೃದ್ಧಿಗೆ ಸಹಕಾರ ಆಗಲಿದೆ ಎಂದಿದ್ದಾರೆ.

ಬೆಂಗಳೂರು, ಫೆಬ್ರವರಿ 29: ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತಿರುವುದು ಸಂತೋಷದ ವಿಚಾರ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು (kantaraju) ಹೇಳಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಸರ್ಕಾರ ವರದಿ ನೋಡಿದ ಬಳಿಕ ಸರಿ ತಪ್ಪು ಎಲ್ಲಾ ಗೊತ್ತಾಗುತ್ತದೆ. ಜಾತಿಗಣತಿ ವರದಿಯ ಯಾವುದೇ ಮೂಲ ಪ್ರತಿ ಕಳೆದುಹೋಗಿಲ್ಲ. ಎಲ್ಲಾ ಸಮುದಾಯಗಳನ್ನು ಪರಿಗಣಿಸಿ ವರದಿ ಸಿದ್ಧಪಡಿಸಲಾಗಿದೆ. ಜನಸಂಖ್ಯೆ, ಸಮುದಾಯವನ್ನು ಪರಿಗಣಿಸಿ ಸಮಿಕ್ಷೆ ಮಾಡಿದ್ದೇವೆ. ಅವಕಾಶ ವಂಚಿತರಾದವರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ವರದಿ ಸಿದ್ಧಪಡಿಸಲಾಗಿದೆ. ಸಮಿಕ್ಷೆ ಸರಿಯಲ್ಲ ಅನ್ನೋ ಮಾತು ಸರಿಯಲ್ಲ ಎಂದು ಹೇಳಿದ್ದಾರೆ.
ದತ್ತಾಂಶಗಳು ಇಲ್ಲದೆ ನಿರ್ಧಾರ ಮಾಡುವುದು ಕಷ್ಟ ಆಗುತ್ತದೆ. ಈ ವರದಿ ಸರ್ವ ಜನಾಂಗಕ್ಕೂ ಒಳ್ಳೆಯದಾಗುತ್ತೆ. ವರದಿ ಸ್ವೀಕಾರ ಮಾಡುವುದರಿಂದ ಅಭಿವೃದ್ಧಿಗೆ ಸಹಕಾರ ಆಗಲಿದೆ ಎಂದಿದ್ದಾರೆ.
ಇದನ್ನೂ ಓದಿ: ಜಾತಿ ಗಣತಿ ವರದಿ ಸಲ್ಲಿಕೆಗೆ ಕ್ಷಣಗಣನೆ: ವಿರೋಧದ ನಡುವೆಯೂ ವರ್ಷಗಳ ಹಿಂದಿನ ವರದಿ ಸ್ವೀಕರಿಸಲು ಮುಂದಾದ ಸರ್ಕಾರ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರವೂ ಒಂದು. ಇದೀಗ ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸಲ್ಲಿಕೆಗೆ ಕೌಂಟ್ಡೌನ್ ಶುರುವಾಗಿದೆ. ಹಿಂದುಗಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಇಂದು ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ವರದಿಯನ್ನು ಸಲ್ಲಿಸಲಿದ್ದಾರೆ.
ಇದನ್ನೂ ಓದಿ: ಬಹುನಿರೀಕ್ಷಿತ ಜಾತಿ ಗಣತಿ ವರದಿ ನಾಳೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಸಾಧ್ಯತೆ?
ಅಂದಹಾಗೆ 2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯನ್ನ ಮಾಡಿಸಲಾಗಿತ್ತು. ಆದರೆ ಕಾರಣಂತರಗಳಿಂದ ಸರ್ಕಾರ ವರದಿ ಸ್ವೀಕರಿಸಿರಲಿಲ್ಲ. ಈ ಮಧ್ಯೆ ವರದಿ ಸೋರಿಕೆಯಾಗಿದ್ದು ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಅಧಿಕಾರಕ್ಕೆ ಬಂದ್ಮೇಲೆ ಜಾತಿ ಗಣತಿ ವರದಿಯನ್ನ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಆಗಾಗ ಹೇಳುತ್ತಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:42 pm, Thu, 29 February 24