AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಪ್ಪತ್ತು ವರ್ಷಗಳ ಕಾಲ ಬೀಗ ಹಾಕಿದ್ದ ಕೋಲಾರದ ಆಸ್ಪತ್ರೆ ಪುನರಾರಂಭಕ್ಕೆ ಸಮ್ಮತಿ; ಕೊವಿಡ್​ ಸೆಂಟರ್​ ಆಗಿ ಪರಿವರ್ತನೆ

ಆ ಕಾಲದಲ್ಲಿ 800 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದ ಈ ಆಸ್ಪತ್ರೆಯಲ್ಲಿ ಈಗ 200 ರಿಂದ 300 ಜನ ರೋಗಿಗಳಿಗೆ ಅನುಕೂಲವಾಗುವಷ್ಟು ಹಾಸಿಗೆ ವ್ಯವಸ್ಥೆ ಮಾಡಿ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರ್ಧಾರಿಸಲಾಗಿದೆ.

ಇಪ್ಪತ್ತು ವರ್ಷಗಳ ಕಾಲ ಬೀಗ ಹಾಕಿದ್ದ ಕೋಲಾರದ ಆಸ್ಪತ್ರೆ ಪುನರಾರಂಭಕ್ಕೆ ಸಮ್ಮತಿ; ಕೊವಿಡ್​ ಸೆಂಟರ್​ ಆಗಿ ಪರಿವರ್ತನೆ
ಕೋಲಾರದ ಆಸ್ಪತ್ರೆ
preethi shettigar
|

Updated on: May 14, 2021 | 5:07 PM

Share

ಕೋಲಾರ: ಜಿಲ್ಲೆಯ ಕೆಜಿಎಫ್​ನ ಚಿನ್ನದ ಗಣಿ ಆಸ್ಪತ್ರೆ ಬಡವರ ಆಸ್ಪತ್ರೆ ಎಂದೇ ಹೆಸರುವಾಸಿ, ಈ ಆಸ್ಪತ್ರೆಗೆ ತನ್ನದೆ ಆದ ದೊಡ್ಡ ಇತಿಹಾಸ ಇದೆ, 1880 ರಲ್ಲಿ ಚಿನ್ನದ ಗಣಿ ಕಂಪನಿ ನಡೆಸಲು ಬಂದ ಬ್ರಿಟೀಷ್​ ಅಧಿಕಾರಿ ಜಾನ್​ ಟೆಲರ್​ನಿಂದ ನಿರ್ಮಾಣವಾಗಿದ್ದ ಈ ಆಸ್ಪತ್ರೆ ಇಲ್ಲಿನ ಕಾರ್ಮಿಕರಿಗೆ ಸಂಜೀವಿನಿಯಾಗಿತ್ತು. ಆದರೆ ಕಳೆದ ಇಪ್ಪತ್ತು ವರ್ಷಗಳ ಹಿಂದೆ ಚಿನ್ನದ ಗಣಿಗೆ ಬೀಗ ಹಾಕಿದಾಗ ಈ ಆಸ್ಪತ್ರೆಗೆ ಕೂಡಾ ಬೀಗ ಹಾಕಲಾಗಿತ್ತು. ಅದರ ಪುನರಾರಂಭ ಮಾಡಬೇಕೆಂದು ಎಷ್ಟೇ ಪ್ರಯತ್ನ ಮಾಡಿದರೂ ಸಾಧ್ಯವಾಗಿರಲಿಲ್ಲ. ಆದರೆ ಈಗ ಕೊರೊನಾ ಸಂಕಷ್ಟದ ಕಾಲದಲ್ಲಿ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಂಸದ ಮುನಿಸ್ವಾಮಿ ಕೊವಿಡ್​ ಆಸ್ಪತ್ರೆಯನ್ನಾಗಿ ಮಾಡಲು ಮತ್ತು ಅದನ್ನು ಪುನರಾರಂಭ ಮಾಡಲು ಅನುಮತಿ ಕೇಳಿದ್ದಾರೆ ಇದಕ್ಕೆ ಸಮ್ಮತಿ ಸೂಚಿಸಿದ್ದು, ಸದ್ಯ ಈ ಭಾಗದ ಜನರ ಸಂತೋಷಕ್ಕೆ ಕಾರಣವಾಗಿದೆ.

ಈ ಆಸ್ಪತ್ರೆಯ ಪುನರಾರಂಭಕ್ಕೆ ಅನುಮತಿ ನೀಡಿದ್ದೇ ತಡ, ಕೆಜಿಎಫ್​ ಭಾಗದ ನೂರಾರು ಜನರು, ಬಿಜೆಪಿ ಕಾರ್ಯಕರ್ತರು ಹಾಗೂ ಯುವಕರು ಸ್ವಯಂ ಪ್ರೇರಿತರಾಗಿ ಪಾಳು ಬಂಗಲೆಯಂತಾಗಿದ್ದ ಆಸ್ಪತ್ರೆಯನ್ನು ಶುಚಿಗೊಳಿಸಿ ಸುಣ್ಣ ಬಣ್ಣ ಬಳಿದು ಆಸ್ಪತ್ರೆಯ ಚಿತ್ರಣವನ್ನೇ ಬದಲಿಸಿದ್ದಾರೆ.

ಕೆಲವೇ ದಿನಗಳಲ್ಲಿ ಜನರ ಸೇವೆಗೆ ಸಿದ್ಧವಾಗಲಿದೆ ಆಸ್ಪತ್ರೆ! ಕೆಜಿಎಫ್​ನಲ್ಲಿ ಕೊವಿಡ್​ ಸೋಂಕಿರಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಅದರ ಜೊತೆಗೆ ಚಿನ್ನದ ಗಣಿ ಆಸ್ಪತ್ರೆಯನ್ನು ಸಿದ್ಧ ಮಾಡಿ ಕೊವಿಡ್​ ಕೇರ್​ ಸೆಂಟರ್​ ಆಗಿ ಮಾಡುವ ಕೆಲಸ ನಡೆಯುತ್ತಿದೆ. ಆ ಕಾಲದಲ್ಲಿ 800 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದ ಈ ಆಸ್ಪತ್ರೆಯಲ್ಲಿ ಈಗ 200 ರಿಂದ 300 ಜನ ರೋಗಿಗಳಿಗೆ ಅನುಕೂಲವಾಗುವಷ್ಟು ಹಾಸಿಗೆ ವ್ಯವಸ್ಥೆ ಮಾಡಿ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರ್ಧಾರಿಸಲಾಗಿದೆ.

ಇನ್ನು ಹತ್ತರಿಂದ ಹದಿನೈದು ದಿನಗಳಲ್ಲಿ ಇಡೀ ಆಸ್ಪತ್ರೆಯಲ್ಲಿ ಬಾಕಿ ಇರುವ ಕೆಲಸ ಕಾರ್ಯಗಳು ಮುಗಿಯುತ್ತವೆ. ಇದಾದ ನಂತರ ಈ ಆಸ್ಪತ್ರೆಗೆ ಬೇಕಾದ ವೈದ್ಯರು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿ ಆಸ್ಪತ್ರೆಯ ಕಾರ್ಯಾರಂಭ ಮಾಡವ ಸಾಧ್ಯತೆ ಇದೆ.

kolar hospital

200 ರಿಂದ 300 ಜನ ರೋಗಿಗಳಿಗೆ ಅನುಕೂಲವಾಗುವಷ್ಟು ಹಾಸಿಗೆ ವ್ಯವಸ್ಥೆ

ಕೊರೊನಾ ಸಂಕಷ್ಟದ ಕಾಲದಲ್ಲಿ ಇಂಥಾದೊಂದು ಬೆಳವಣಿಗೆಯಿಂದ ಕೆಜಿಎಫ್​ ಭಾಗದ ಜನರು ಸಂತಸಗೊಂಡಿದ್ದಾರೆ ಅಷ್ಟೇ ಅಲ್ಲ, ಇಂಥಾದೊಂದು ಅದ್ಭುತ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಒಂದು ಕಾಲದಲ್ಲಿ ಕಾರ್ಮಿಕರ ಪಾಲಿನ ಸಂಜೀವಿನಿಯಂತಿದ್ದ ಚಿನ್ನದ ಗಣಿ ಆಸ್ಪತ್ರೆಗೆ ಈಗ ಮತ್ತೆ ಹೊಸ ಜೀವಕಳೆ ಬಂದಿದ್ದು, ಇನ್ನು ಮುಂದೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂಜೀವಿನಿ ಆಸ್ಪತ್ರೆಯಾಗಲಿದೆ ಸಂತೋಷದ ವಿಷಯ.

ಇದನ್ನೂ ಓದಿ:

ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತ ವೃದ್ಧ ಸಾವು; ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯ ವಿರುದ್ಧ ಮೊಮ್ಮಗಳಿಂದ ಗಂಭೀರ ಆರೋಪ

ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತ ವೃದ್ಧ ಸಾವು; ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯ ವಿರುದ್ಧ ಮೊಮ್ಮಗಳಿಂದ ಗಂಭೀರ ಆರೋಪ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ