AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಅಧಿಕಾರಿಗಳ ವರ್ಗಾವಣೆ ಇಲ್ಲ: ಸಚಿವರಿಗೆ ಸಿದ್ದರಾಮಯ್ಯ ಖಡಕ್​ ಎಚ್ಚರಿಕೆ

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ನಡೆಸಿದರು. ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾದವು. ಕೊನೆಯದಾಗಿ ಸಚಿವರು ವರ್ಗಾವಣೆ ವಿಚಾರವಾಗಿ ಚಕಾರ ಎತ್ತಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಹೇಳಿದರು.

ಸದ್ಯಕ್ಕೆ ಅಧಿಕಾರಿಗಳ ವರ್ಗಾವಣೆ ಇಲ್ಲ: ಸಚಿವರಿಗೆ ಸಿದ್ದರಾಮಯ್ಯ ಖಡಕ್​ ಎಚ್ಚರಿಕೆ
ಸಿಎಂ ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on: Jun 21, 2024 | 1:27 PM

Share

ಬೆಂಗಳೂರು ಜೂನ್​ 21: ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಚಿವರಿಗೆ ಖಡಕ್​ ಆಗಿ ಹೇಳಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. ಸಚಿವರ ಒತ್ತಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಳೆದ ವರ್ಷ ವರ್ಗಾವಣೆ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆಗಳು ಬಂದಿದ್ದು, ಹೀಗಾಗಿ ಈ ವಿಚಾರವನ್ನು ಕೈಗೆತ್ತಿಕೊಳ್ಳದಿರುವುದು ಜಾಣತನ. ಈ ವಿಷಯ ಇಲ್ಲಿಗೆ ಬಿಟ್ಟು ಬಿಡಿ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳ ವರ್ಗ-1 ಮತ್ತು ಇದರ ಮೇಲಿನ ಅಧಿಕಾರಿಗಳ ವರ್ಗಾವಣೆಯನ್ನು ಸಿಎಂ ನಿರ್ವಹಿಸುತ್ತಾರೆ, ಆದರೆ ಕೆಳ ಹಂತದ ಅಧಿಕಾರಿಗಳ ವರ್ಗಾವಣೆಯನ್ನು ಸಚಿವರು ಮತ್ತು ಶಾಸಕರು ನಡೆಸುತ್ತಾರೆ.

ಪ್ರತಿ ವರ್ಷ ಮೇ ಮತ್ತು ಜೂನ್‌ ಅವಧಿಯಲ್ಲಿ ಸುಮಾರು ಶೇ 6 ರಿಂದ 8 ರಷ್ಟು ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಸರ್ವೆ ಸಾಮಾನ್ಯ. ಆದರೆ, ಈ ವರ್ಷ ಜೂನ್ 6 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರವು ವರ್ಗಾವಣೆ ಮಾಡಿಲ್ಲ. ಚುನಾವಣಾ ಫಲಿತಾಂಶದ ನಂತರ ಅಧಿಕಾರಿಗಳ ವರ್ಗಾವಣೆಗೆ ಭಾರಿ ಒತ್ತಡ ಹಾಕಲಾಗುತ್ತಿದೆ.

ಇದನ್ನೂ ಓದಿ: ದರ್ಶನ್ ಗ್ಯಾಂಗ್ ಚಿತ್ರಹಿಂಸೆಯ ವಿವರ ಕೇಳಿ ಸಿಎಂ ಶಾಕ್; ಇಂಥಾ ಕ್ರೌರ್ಯ ನೋಡೇ ಇಲ್ಲವೆಂದ ಸಿದ್ದರಾಮಯ್ಯ

ಕಳೆದ ವರ್ಷ 2023ರಲ್ಲಿ ಕೆಲವು ಇಲಾಖೆಗಳಲ್ಲಿ ಶೇ 6-8ರಷ್ಟು ಬದಲಾಗಿ ಶೇ.20-25 ರಷ್ಟು ಅಧಿಕಾರಿಗಳು ವರ್ಗಾವಣೆಗೊಂಡಿದ್ದರು. ಹಣಕಾಸಿನ ಲಾಭಕ್ಕಾಗಿ ವರ್ಗಾವಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಹಗರಣದ ವಿವರಗಳನ್ನು ಒಳಗೊಂಡಿರುವ ಪೆನ್​ಡ್ರವ್​ ಅನ್ನು ತೋರಿಸಿದ್ದರು.

ಇಂಧನ ಇಲಾಖೆಯಲ್ಲಿ ಕೆಲವು ಸಚಿವರು ಪ್ರತಿ ವರ್ಗಾವಣೆಗೆ 10 ಕೋಟಿ ರೂ.ವರೆಗೆ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಒಬ್ಬ ನಿರ್ದಿಷ್ಟ ಅಧಿಕಾರಿ ದಿನಕ್ಕೆ 50 ಲಕ್ಷ ರೂ. ಪಡೆದಿದ್ದಾರೆ ಮತ್ತು ಅನೇಕರು ವರ್ಗಾವಣೆ ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದ್ದರು.

ಅಧಿಕಾರಿಗಳ ವರ್ಗಾವಣೆ ವಿಚಾರ ಕಳೆದ ವರ್ಷ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರದ ಮೇಲೆ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ