AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಬಿ.ಸಿ.ಪಾಟೀಲ್ ಮನೆಗೇ ಹೋಗಿ ಲಸಿಕೆ ನೀಡಿದ್ದಕ್ಕೆ ವೈದ್ಯಾಧಿಕಾರಿ ಮಕಾಂದಾರ್ ಸಸ್ಪೆಂಡ್

ತಾಲೂಕು ಆರೋಗ್ಯಾಧಿಕಾರಿ‌ ನೇತೃತ್ವದಲ್ಲಿ ಸಚಿವ ಬಿ.ಸಿ.ಪಾಟೀಲ್‌ ಮನೆಗೆ ಹೋಗಿ ಆರೋಗ್ಯ ಸಿಬ್ಬಂದಿ ಲಸಿಕೆ ನೀಡಿದ್ದರು. ಈ ಸಂಬಂಧ ಕಳೆದ ಒಂದು ತಿಂಗಳ ಹಿಂದೆ ಡಿಹೆಚ್ಓ ತಾಲೂಕು ಆರೋಗ್ಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ನೀಡಿದ್ದರು. ಈಗ ಟಿಹೆಚ್ಒ ಡಾ.Z.R.ಮಕಾಂದಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಸಚಿವ ಬಿ.ಸಿ.ಪಾಟೀಲ್ ಮನೆಗೇ ಹೋಗಿ ಲಸಿಕೆ ನೀಡಿದ್ದಕ್ಕೆ ವೈದ್ಯಾಧಿಕಾರಿ ಮಕಾಂದಾರ್ ಸಸ್ಪೆಂಡ್
ಮನೆಯಲ್ಲೇ ಕೊರೊನಾ ಲಸಿಕೆ ಪಡೆದ ಬಿ.ಸಿ. ಪಾಟೀಲ್
ಆಯೇಷಾ ಬಾನು
| Edited By: |

Updated on:Apr 02, 2021 | 10:00 AM

Share

ಹಾವೇರಿ: ಸಚಿವ ಬಿ.ಸಿ.ಪಾಟೀಲ್‌ಗೆ ಮನೆಯಲ್ಲಿ ಲಸಿಕೆ ನೀಡಿದ ಕೇಸ್​ಗೆ ಸಂಬಂಧಿಸಿ ಹಿರೇಕೆರೂರು ಟಿಹೆಚ್ಒ ಡಾ.Z.R.ಮಕಾಂದಾರ್ ಅಮಾನತು ಮಾಡಿ ಆರೋಗ್ಯ, ಕುಟುಂಬ ಕಲ್ಯಾಣ‌ ಸೇವೆ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಆದೇಶ ಹೊರಡಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ‌ ನೇತೃತ್ವದಲ್ಲಿ ಸಚಿವ ಬಿ.ಸಿ.ಪಾಟೀಲ್‌ ಮನೆಗೆ ಹೋಗಿ ಆರೋಗ್ಯ ಸಿಬ್ಬಂದಿ ಲಸಿಕೆ ನೀಡಿದ್ದರು. ಈ ಸಂಬಂಧ ಕಳೆದ ಒಂದು ತಿಂಗಳ ಹಿಂದೆ ಡಿಹೆಚ್ಓ ತಾಲೂಕು ಆರೋಗ್ಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ನೀಡಿದ್ದರು. ಈಗ ಟಿಹೆಚ್ಒ ಡಾ.Z.R.ಮಕಾಂದಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಮಾರ್ಚ್ 02ರಂದು ಬಿ.ಸಿ. ಪಾಟೀಲ್ ಆರೋಗ್ಯ ಸಿಬ್ಬಂದಿಯನ್ನು ತಮ್ಮ ಮನೆಗೆ ಕರೆಸಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಸಚಿವರ ಈ ನಡೆಗೆ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಎಲ್ಲಾರಿಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಲು ಸೂಚನೆ ನೀಡಲಾಗಿದೆ. ಆದ್ರೆ ಸಚಿವ ಬಿ.ಸಿ.ಪಾಟೀಲ್ ತಮ್ಮದೇ ನಿಯಮವನ್ನು ರೂಪಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೇ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾ ಆರ್‌ಸಿಹೆಚ್ ಡಾ.ಜಯಾನಂದ್‌ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ನೋಟಿಸ್ ಜಾರಿ ಮಾಡಿದ್ದರು.

ಆಸ್ಪತ್ರೆಗೆ ಹೋಗಿ ಲಸಿಕೆ ಪಡೆಯಬೇಕೆಂದು ಗೊತ್ತಿರಲಿಲ್ಲ ತಮ್ಮ ಮನೆಗೆ ಕರೆಸಿ ಲಸಿಕೆ ಪಡೆದ ಬಗ್ಗೆ ವಿಚಾರಿಸಿದಾಗ  ಟಿವಿ9ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದರು. ಮಾರ್ಗಸೂಚಿಯಲ್ಲಿ ಏನಿದೆ ಎಂಬುದು ನನಗೆ ಗೊತ್ತಿಲ್ಲ. 30 ನಿಮಿಷಗಳ ಕಾಲ ವಿಶ್ರಾಂತಿ ಪಡೀಬೇಕೆಂದು ಗೊತ್ತಿತ್ತು. ನಿನ್ನೆ ನಾನು ಮನೆಗೆ ತಡವಾಗಿ ಬಂದಿದ್ದೆ. ಕ್ಷೇತ್ರದ ಜನರೂ ಕೂಡ ಬೆಳಗ್ಗೆಯೇ ಮನೆಗೆ ಬಂದಿದ್ದರು. ಹೀಗಾಗಿ ಮನೆಯಲ್ಲಿಯೇ ವೈದ್ಯರಿಂದ ಲಸಿಕೆ ಪಡೆದಿದ್ದೇನೆ. ಆಸ್ಪತ್ರೆಗೆ ಹೋಗಿ ಲಸಿಕೆ ಪಡೆಯಬೇಕೆಂದು ಗೊತ್ತಿರಲಿಲ್ಲ. ಈ ವಿಷಯ ನನಗೆ ಗೊತ್ತಾಗಿದ್ದರೆ ಆಸ್ಪತ್ರೆಗೆ ಹೋಗುತ್ತಿದ್ದೆ. ನನಗೆ ಅನಾರೋಗ್ಯ ಇದ್ದಾಗ ವೈದ್ಯರು ಮನೆಗೆ ಬರ್ತಿದ್ರು. ಅದೇ ರೀತಿ ಇಂದು ವೈದ್ಯರನ್ನು ಕರೆದು ಲಸಿಕೆ ಪಡೆದಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಮನೆಗೇ ಬಂದು ಲಸಿಕೆ ಹಾಕಿದ ಆರೋಗ್ಯ ಸಿಬ್ಬಂದಿ.. ಸಚಿವ ಬಿ.ಸಿ. ಪಾಟೀಲ್​ರಿಂದ ಇದೆಂಥಾ ದರ್ಬಾರ್..?

(THO dr zr makhandar suspended for Vaccinating minister BC Patil in his house haveri)

Published On - 9:21 am, Fri, 2 April 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್