AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದವಾಗಿ ಗೃಹಿಣಿ ಸಾವು: ಆರೋಪಿಯನ್ನು ರಕ್ಷಣೆಗೆ ನಿಂತರಾ ಪೊಲೀಸರು ?

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ರುಕ್ಮಿಣಿ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೂರು ಠಾಣೆಯ ಪೊಲೀಸರು ಆರೋಪಿ ಕಣ್ಣನ್​​ನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅನುಮಾನಾಸ್ಪದವಾಗಿ ಗೃಹಿಣಿ ಸಾವು: ಆರೋಪಿಯನ್ನು ರಕ್ಷಣೆಗೆ ನಿಂತರಾ ಪೊಲೀಸರು ?
ಕಡೂರು ಪೊಲೀಸ್​ ಠಾಣೆ
ಪ್ರಶಾಂತ್​ ಬಿ.
| Edited By: |

Updated on:Jul 17, 2023 | 3:13 PM

Share

ಚಿಕ್ಕಮಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ರುಕ್ಮಿಣಿ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೂರು ಠಾಣೆಯ ಪೊಲೀಸರು (Police) ಆರೋಪಿ ಕಣ್ಣನ್​​ನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ದೂರು ದಾಖಲಿಸಲು ಹೋದಾಗ ಪೊಲೀಸರು ಧಮ್ಕಿ ಹಾಕಿದ್ದಾರೆಂದು ರುಕ್ಮಿಣಿ ಪೋಷಕರು ಆರೋಪಿಸಿದ್ದಾರೆ. ಈ ಹಿನ್ನೆಲೆ ನ್ಯಾಯಕ್ಕಾಗಿ ರುಕ್ಮಿಣಿ ಸಂಬಂಧಿಕರು ಚಿಕ್ಕಮಗಳೂರು (Chikkamagaluru) ಎಸ್ಪಿ ಕಚೇರಿಗೆ ತೆರಳಿ ಕಡೂರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕಣ್ಣನ್​ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ಪತಿ ಕಣ್ಣನ್ ಬಂಧನಕ್ಕೆ ಡಿವೈಎಸ್​ಪಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ನಿನ್ನೆ (ಜು.16) ರಂದು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ರುಕ್ಮಿಣಿ (30) ಶವ ಪತ್ತೆಯಾಗಿತ್ತು. ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಮಾಡಿ ನೇಣು ಹಾಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪತಿ ಕಣ್ಣನ್ ಶವಗಾರಕ್ಕೆ ಮೃತ ದೇಹ ಸಾಗಿಸಿ ಪರಾರಿಯಾಗಿದ್ದಾನೆ. ಮಂಡ್ಯ ಮೂಲದ ರುಕ್ಮಿಣಿ 13 ವರ್ಷಗಳ ಹಿಂದೆ ಕಡೂರು ಮೂಲದ ಕಲ್ಲು ವ್ಯಾಪಾರಿ ಕಣ್ಣನ್ ಅವರ ಜೊತೆ ಮದುವೆಯಾಗಿದ್ದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Mon, 17 July 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು