ಸಮಾಧಾನಕರ ಸಂಗತಿ: ಇಂದು ರಾಜ್ಯದಲ್ಲಿ ಮೂವರಿಗೆ ಮಾತ್ರ ಕೊರೊನಾ ಸೋಂಕು

|

Updated on: Apr 26, 2020 | 6:17 PM

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ವಿಚಾರದಲ್ಲಿ ಕರ್ನಾಟಕದ ಜನತೆಗೆ ಭಾನುವಾರ ಕೊಂಚ ನಿರಾಳತೆ ತಂದಿದೆ. ಇಂದು ಹೊಸದಾಗಿ 3 ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಬೆಳಗಿನ ವರದಿಯಲ್ಲಿ 1 ಪ್ರಕರಣ ದೃಢಪಟ್ಟಿತ್ತು. ಸಂಜೆ ವರದಿಯಲ್ಲಿ ಇಬ್ಬರಿಗೆ ಮಾತ್ರ ಕೊರೊನಾ ಅಟ್ಯಾಕ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಮಹಿಳೆಗೆ ಸೋಂಕು ತಗಲಿದ್ದು, ಕಲಬುರಗಿಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ ಬೆಂಗಳೂರಿನಲ್ಲಿ 45 ವರ್ಷದ ಮಹಿಳೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ಕರ್ನಾಟಕದಲ್ಲಿ ಕೊರೊನಾಗೆ ಈವರೆಗೆ 19 […]

ಸಮಾಧಾನಕರ ಸಂಗತಿ: ಇಂದು ರಾಜ್ಯದಲ್ಲಿ ಮೂವರಿಗೆ ಮಾತ್ರ ಕೊರೊನಾ ಸೋಂಕು
Follow us on

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ವಿಚಾರದಲ್ಲಿ ಕರ್ನಾಟಕದ ಜನತೆಗೆ ಭಾನುವಾರ ಕೊಂಚ ನಿರಾಳತೆ ತಂದಿದೆ. ಇಂದು ಹೊಸದಾಗಿ 3 ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಬೆಳಗಿನ ವರದಿಯಲ್ಲಿ 1 ಪ್ರಕರಣ ದೃಢಪಟ್ಟಿತ್ತು. ಸಂಜೆ ವರದಿಯಲ್ಲಿ ಇಬ್ಬರಿಗೆ ಮಾತ್ರ ಕೊರೊನಾ ಅಟ್ಯಾಕ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಮಹಿಳೆಗೆ ಸೋಂಕು ತಗಲಿದ್ದು, ಕಲಬುರಗಿಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ ಬೆಂಗಳೂರಿನಲ್ಲಿ 45 ವರ್ಷದ ಮಹಿಳೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ಕರ್ನಾಟಕದಲ್ಲಿ ಕೊರೊನಾಗೆ ಈವರೆಗೆ 19 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 503ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ 182 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಕರ್ನಾಟಕದಲ್ಲಿ 302 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.