AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTCಗೆ ಮತ್ತೊಂದು ಗರಿ; ಮೂರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ನಿಗಮಕ್ಕೆ ‘ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣ’ಕ್ಕೆ ಕೈಗೊಂಡಿರುವ ವಿನೂತನ ಉಪಕ್ರಮಕ್ಕಾಗಿ ಎರಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಜತೆಗೆ ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ಲಭಿಸಿದೆ.

KSRTCಗೆ ಮತ್ತೊಂದು ಗರಿ; ಮೂರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕೆಎಸ್​ಆರ್​ಟಿಸಿಗೆ ಮೂರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ
TV9 Web
| Edited By: |

Updated on: Mar 16, 2024 | 7:28 AM

Share

ಬೆಂಗಳೂರು, ಮಾರ್ಚ್​.16: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ 2022-23ನೆ ಸಾಲಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU)ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳನ್ನು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಶುಕ್ರವಾರ ಪ್ರದಾನ (National Transport Excellence Award) ಮಾಡಲಾಯಿತು. ಹೊಸದಿಲ್ಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿಗಳು, ಅನುರಾಗ್ ಜೈನ್, ಎಎಸ್‍ಆರ್‍ಟಿಯು ಅಧ್ಯಕ್ಷ ಡಾ.ಮಾಧವ್ ಖುಸೇಕರ್ ಸೇರಿದಂತೆ ಇನ್ನಿತರರು ಕೆಎಸ್ಸಾರ್ಟಿಸಿಯ ಹಿರಿಯ ಅಧಿಕಾರಿ ಯಶ್ವಂತ್ ಕುಮಾರ್ ಪಿ. ಅವರು ಸ್ವೀಕಾರ ಮಾಡಿದರು.

ನಿನ್ನೆ(ಮಾರ್ಚ್​.15) ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ಕಚೇರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀ.ಅನುರಾಗ್ ಜೈನ್,ಭಾಆಸೇ, ಕಾರ್ಯದರ್ಶಿಗಳು, ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯ, ಭಾರತ ಸರ್ಕಾರ, ಹಾಗೂ ಅಧ್ಯಕ್ಷರು ಎ.ಎಸ್. ಆರ್. ಟಿ ಯು, ಡಾ.ಮಾಧವ್ ಖುಸೇಕರ್ ಭಾಆಸೇ, ಉಪಾಧ್ಯಕ್ಷರು, ಎ.ಎಸ್ .ಆರ್. ಟಿ .ಯು, ವ್ಯವಸ್ಥಾಪಕ ‌ನಿರ್ದೇಶಕರು, ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆ ರವರು ಹಾಗೂ ಶ್ರೀ. ಪರೇಶ್ ಗೋಯೆಲ್ ನಿರ್ದೇಶಕರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರವರು ನಿಗಮಕ್ಕೆ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಉಪಕ್ರಮಕ್ಕಾಗಿ ಎರಡು ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. ಶ್ರೀ ಯಶ್ವಂತ್ ಕುಮಾರ್ ಪಿ, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ, ಬೆಂಗಳೂರು ರವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇದನ್ನೂ ಓದಿ: ಟಿಕೆಟ್ ರಹಿತ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ ಕೆಎಸ್‌ಆರ್‌ಟಿಸಿ: 5,71,286 ರೂ. ದಂಡ ವಸೂಲಿ

ಪಂಜಾಬ್ ನಾಯಕತ್ವ ಪ್ರಶಸ್ತಿ

ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪ ಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ಲಭಿಸಿದೆ. ನಿನ್ನೆ ತಾಜ್ ಚಂಡೀಗಡದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀ ಹರ್ಜಿಂದರ್ ಸಿಂಗ್ ಚೀಮಾ, ಅಧ್ಯಕ್ಷರು ಚೀಮಾ ಬಾಯ್ಲರ್ಸ್ ಲಿಮಿಟೆಡ್ ರವರು ನಿಗಮಕ್ಕೆ ಪಂಜಾಬ್ ನಾಯಕತ್ವ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಶ್ರೀ ಶ್ರೀನಿವಾಸಮೂರ್ತಿ ಸಿ. ಈ, ವಿಭಾಗೀಯ ನಿಯಂತ್ರಣಾಧಿಕಾರಿ, ದಾವಣಗೆರೆ ವಿಭಾಗ ಹಾಗೂ ಶ್ರೀಮತಿ ಸ್ವರ್ಣ ಲತಾ ಎಂ, ಅಂಕಿ ಅಂಶ ಅಧಿಕಾರಿ, ಕೇಂದ್ರ ಕಛೇರಿ ರವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು