Karnataka Weather: ಆಗಸ್ಟ್ 19ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಸವನ ಬಾಗೇವಾಡಿ, ಪೊನ್ನಂಪೇಟೆ, ಗಬ್ಬೂರು, ಸುತ್ತೂರು, ಹರದನಹಳ್ಳಿ, ಕ್ಯಾಸಲ್ರಾಕ್, ದೇವದುರ್ಗ, ಕಕ್ಕೇರಿ, ವಿಜಯಪುರದಲ್ಲಿ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿಯ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದಲ್ಲಿ ಮುಂಗಾರು ದುರ್ಬಲ, ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಮಳೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ಹೆಚ್ಚಾಗಿದೆ, ಬೆಳಗ್ಗೆಯಿಂದಲೇ ಬಿಸಿಲು ಕೂಡ ಇದೆ. ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ