Karnataka Weather: ಆಗಸ್ಟ್​ 19ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 19ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka Weather: ಆಗಸ್ಟ್​ 19ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ
ಮಳೆ
Image Credit source: Mint

Updated on: Aug 13, 2023 | 8:32 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 19ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಸವನ ಬಾಗೇವಾಡಿ, ಪೊನ್ನಂಪೇಟೆ, ಗಬ್ಬೂರು, ಸುತ್ತೂರು, ಹರದನಹಳ್ಳಿ, ಕ್ಯಾಸಲ್​ರಾಕ್, ದೇವದುರ್ಗ, ಕಕ್ಕೇರಿ, ವಿಜಯಪುರದಲ್ಲಿ ಮಳೆಯಾಗಿದೆ.

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿಯ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಲ್ಲಿ ಮುಂಗಾರು ದುರ್ಬಲ, ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ಹೆಚ್ಚಾಗಿದೆ, ಬೆಳಗ್ಗೆಯಿಂದಲೇ ಬಿಸಿಲು ಕೂಡ ಇದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us