Karnataka Rain: ಬೆಂಗಳೂರಿನಲ್ಲಿ ಸೆಪ್ಟೆಂಬರ್​ 7ರವರೆಗೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

|

Updated on: Sep 01, 2023 | 7:32 AM

ಬೆಂಗಳೂರಿನಲ್ಲಿ ಸೆಪ್ಟೆಂಬರ್​ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 1 ರಂದು ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲೂ ಮಳೆಯಾಗಲಿದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rain: ಬೆಂಗಳೂರಿನಲ್ಲಿ ಸೆಪ್ಟೆಂಬರ್​ 7ರವರೆಗೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: English Jagaran
Follow us on

ಬೆಂಗಳೂರಿನಲ್ಲಿ ಸೆಪ್ಟೆಂಬರ್​ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 1 ರಂದು ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲೂ ಮಳೆಯಾಗಲಿದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರ, ಚಾಮರಾಜನಗರ, ಬನವಾಸಿ, ರಾಯಚೂರು, ಮಂಗಳೂರು, ಟಿ ನರಸೀಪುರ, ಕಳಸ, ಗಂಗಾವತಿ, ಜಾಲಹಳ್ಳಿ, ಹಡಗಲಿ, ಹಾಸನದಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೆಪ್ಟೆಂಬರ್ 6ರವರೆಗೆ ಮಳೆ

ಉತ್ತರ ಭಾರತದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದೆ, ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಹರ್ಯಾಣ ಸೇರಿದಂತೆ ಉತ್ತರ ಭಾರತದ ಎಲ್ಲಾ ರಾಜ್ಯಗಳಲ್ಲಿ ಮುಂಗಾರು ಮಳೆ ಕಡಿಮೆಯಾಗಿದೆ. ಆದಾಗ್ಯೂ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ದಕ್ಷಿಣ ಪೆನಿನ್ಸುಲರ್​ಗಳಲ್ಲಿ ಮಳೆಯ ನಿರೀಕ್ಷೆ ಇದೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೌನಲ್ಲಿ ಶುಕ್ರವಾರ ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್​ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ