Karnataka Rain: ನವೆಂಬರ್ 12ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರದಲ್ಲಿ ತುಂಬಾ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rain: ನವೆಂಬರ್ 12ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ
ಮಳೆImage Credit source: Hindustan Times
Follow us
|

Updated on: Nov 06, 2023 | 7:31 AM

ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರದಲ್ಲಿ ತುಂಬಾ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಧರ್ಮಸ್ಥಳ, ಸೋಮವಾರಪೇಟೆ, ಹುಣಸೂರು, ಸಕಲೇಶಪುರ, ಮಂಗಳೂರು, ಬೆಂಗಳೂರು ಎಚ್​ಎಎಲ್​ ವಿಮಾನ ನಿಲ್ದಾಣ, ರಾಮನಗರ, ಬಂಡೀಪುರ, ಚಿಂತಾಮಣಿ, ಚಿಕ್ಕಬಳ್ಳಾಪುರ, ಮಡಿಕೇರಿ, ಪುತ್ತೂರು, ಬೆಳ್ತಂಗಡಿ, ಟಿ ನರಸೀಪುರ, ಕಳಸ, ಭಾಗಮಂಡಲ, ಸರಗೂರು, ಕುಣಿಗಲ್, ಗೋಪಾಲ್​ನಗರ, ದೇವನಹಳ್ಳಿ, ಪೊನ್ನಂಪೇಟೆ, ಉಪ್ಪಿನಂಗಡಿ, ಮಾಣಿ, ಮದ್ದೂರು, ರಾಯಲ್ಪಾಡು, ಹೊಸಕೋಟೆ, ದೊಡ್ಡಬಳ್ಳಾಪುರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ 10 ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ.

ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ