AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆ

ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆ
ಮಳೆImage Credit source: India.com
ನಯನಾ ರಾಜೀವ್
|

Updated on: Oct 15, 2023 | 7:54 AM

Share

ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕೊಡಗು, ಹಾಸನ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಮಳೆ, ಯೆಲ್ಲೋ ಅಲರ್ಟ್​

ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಿಕ್ಕನಹಳ್ಳಿಯಲ್ಲಿ 16.2 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ